ಯಾವುದೇ ಇಲಾಖೆಯ ಅಧಿಕಾರಿಗಳು ಮತ್ತು ನೌಕರರನ್ನು ವೃಂದ ಮತ್ತು ನೇಮಕಾತಿ ನಿಯಮಗಳಿಗೆ ವಿರುದ್ಧವಾಗಿ, ಅನ್ಯ ಇಲಾಖೆಗಳಿಗೆ ನಿಯೋಜನೆ ಮಾಡದಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಸುತ್ತೋಲೆ ಹೊರಡಿಸಿದೆ.
ಒಬ್ಬ ನೌಕರನನ್ನು ಯಾವುದೇ ಹುದ್ದೆಗೆ ಗರಿಷ್ಠ ಐದು ವರ್ಷಗಳವರೆಗೆ ನಿಯೋಜನೆ ಮಾಡಬಹುದು. ಬಳಿಕ ಆ ನೌಕರ ಎರಡು ವರ್ಷಗಳವರೆಗೆ ಮಾತೃ ಇಲಾಖೆಯಲ್ಲಿ ಕಾರ್ಯ ನಿರ್ವಹಿಸುವುದು ಕಡ್ಡಾಯ. ಅನ್ಯ ಇಲಾಖೆಗಳಿಂದ ನಿಯೋಜನೆಗೆ ಅವಕಾಶ ಕಲ್ಪಿಸದ ಹುದ್ದೆಗಳಿಗೆ ನಿಯೋಜನೆ ಮಾಡುವುದನ್ನು ನಿರ್ಬಂಧಿಸಲಾಗಿದೆ.