ನಗರದ ಮಹಿಳೆಯರಲ್ಲಿ ಸುರಕ್ಷತೆ ಭಾವನೆ ಗಟ್ಟಿಗೊಳಿಸಲು ಹಾಗೂ ಅಪರಾಧ ನಡೆದಾಗ ಕೈಗೊಳ್ಳಬೇಕಾದ ಅಂಶಗಳ ಬಗ್ಗೆ ಜನಸಂದಣಿ ಪ್ರದೇಶ ಹಾಗೂ ಬಸ್ ಗಳಲ್ಲಿ ತೆರಳಿ ಜಾಗೃತಿ ಮೂಡಿಸಿದ್ದ ಪೊಲೀಸರು ಇದೀಗ ಮಹಿಳೆಯರ ಸುರಕ್ಷತೆ ಬಗ್ಗೆ ಪಾರ್ಕ್ ಗಳಿಗೆ ಹೋಗಿ ಅರಿವು ಮೂಡಿಸುತ್ತಿರುವ ನಗರ ಪೊಲೀಸರು ಪಾರ್ಕ್ ಗಳಿಗೆ ಹೋಗಿ ಅರಿವು ಮೂಡಿಸುತ್ತಿದ್ದಾರೆ.
ಅಪಾಯ ಸಂದರ್ಭಗಳಲ್ಲಿ ಪೊಲೀಸರಿಗೆ ಸಂಪರ್ಕಿಸುವ ಸಹಾಯವಾಣಿ 112ಗೆ ಕರೆ, ಸೇಫ್ಟಿ ಐಲ್ಯಾಂಡ್ ಬಳಕೆ, ಸಾಮಾಜಿಕ ಜಾಲತಾಣ ಹೇಗೆ ಬಳಸಬೇಕು ಎಂಬುದರ ಬಗ್ಗೆ ನಗರ ಪೊಲೀಸ್ ಆಯುಕ್ತ ಬಿ. ದಯಾನಂದ್ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಸಾರ್ವಜನಿಕ ಸ್ಥಳಗಳಲ್ಲಿ ತೆರಳಿ ಜಾಗೃತಿ ಮೂಡಿಸಿದ್ದರು. ಇದೀಗ ಬೆಳಗ್ಗೆ ಹಾಗೂ ಸಂಜೆ ವೇಳೆ ತೆರಳಿ ಪಾರ್ಕ್ ಗಳಿಗೆ ಹೋಗುವ ಮಹಿಳೆಯರಿಗೆ ಅಪರಾಧ ನಿಯಂತ್ರಣ ಬಗ್ಗೆ ಕೈಗೊಳ್ಳಬೇಕಾದ ನಿಯಂತ್ರಣ ಕ್ರಮಗಳ ಬಗ್ಗೆ ಪೊಲೀಸರು ಅರಿವು ಮೂಡಿಸಿದರು.
ಸರಗಳ್ಳತನ, ಬ್ಯಾಂಕಿಂಗ್ ವಂಚನೆ ಸೇರಿದಂತೆ ಮಹಿಳೆಯರ ಮೇಲಾಗುವ ಅಪರಾಧನ ಪ್ರಕರಣಗಳು ಹಾಗೂ ಕರ್ನಾಟಕ ಪೊಲೀಸ್ ಆ್ಯಪ್, ಪೊಲೀಸ್ ಕಂಟ್ರೋಲ್ ನಂಬರ್ 112. ಕರೆ, ಸಾಮಾಜಿಕ ಜಾಲತಾಣಗಳ ಬಳಕೆ ಸೇರಿದಂತೆ ಅರಿವು ಮೂಡಿಸುವಂತೆ ನಗರ ಪೊಲೀಸ್ ಆಯುಕ್ತರು ಎಲ್ಲಾ ಡಿಸಿಪಿಗಳಿಗೆ ಟಾಸ್ಕ್ ನೀಡಿದ್ದರು.
ಇದರಂತೆ ನಗರ ಪೊಲೀಸರು ಪಾರ್ಕ್ ಸೇರಿದಂತೆ ಸಾರ್ವಜನಿಕ ಪ್ರದೇಶಗಳಲ್ಲಿ ಮಹಿಳೆಯರನ್ನು ಒಗ್ಗೂಡಿಸಿ ಜನಸ್ನೇಹಿ ಪೊಲೀಸ್ ಗಾಗಿ ಕೈಗೊಂಡ ಕ್ರಮಗಳ ಬಗ್ಗೆ ಅರಿವು ಮೂಡಿಸುತ್ತಿದ್ದಾರೆ. ಸಾರ್ವಜನಿಕ ಸ್ಥಳಗಳಲ್ಲಿ ಈ ಬಗ್ಗೆ ಭಿತ್ತಿಪತ್ರ ಅಂಟಿಸುತ್ತಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


