ಕರ್ನಾಟಕ ರಾಜ್ಯದಲ್ಲಿ ಹೂಮನ್ ಮೆಟಾನ್ಯೂಮೊವೈರಸ್ (HMPV) ಇತರ ಉಸಿರಾಟದ ವೈರಸ್ ಗಳಂತಯೇ ಚಳಿಗಾಲದಲ್ಲಿ ಶೀತ ಮತ್ತು ಜ್ವರ ತರಹದ ರೋಗಲಕ್ಷಣಗಳನ್ನು ಉಂಟುಮಾಡುತ್ತದೆ. ವಿಶೇಷವಾಗಿ ಕಿರಿಯ ಮತ್ತು ಹಿರಿಯ ವಯಸ್ಸಿನವರಿಗೆ ಈ ರೋಗ ಲಕ್ಷಣಗಳು ಕಂಡುಬರುತ್ತದೆ. ಕರ್ನಾಟಕದಲ್ಲಿ ಬೆಂಗಳೂರಿನಲ್ಲಿ ಖಾಸಗಿ ಆರೋಗ್ಯ ಕೇಂದ್ರದಲ್ಲಿ ಎರಡು HMPV ಸೋಂಕಿತ ಪ್ರಕರಣಗಳು ದೃಢಪಟ್ಟಿದ್ದು, 1 ಪ್ರಕರಣವನ್ನು ಈಗಾಗಲೇ ಚಿಕಿತ್ಸೆ ನೀಡಿ ಬಿಡುಗಡೆ ಮಾಡಲಾಗಿದ್ದು, ಇತರೆ ಪ್ರಕರಣಗಳನ್ನು ಶೀಘ್ರದಲ್ಲೇ ಬಿಡುಗಡೆ ಮಾಡಲಾಗುವುದು, ಎರಡು ಪ್ರಕರಣಗಳು ಸೌಮ್ಯ ಸ್ವಭಾವದವು ಮತ್ತು ಯಾವುದೇ ಅಂತರಾಷ್ಟ್ರೀಯ ಪ್ರಯಾಣದ ಇತಿಹಾಸವನ್ನು ಹೊಂದಿರುವುದಿಲ್ಲ.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳು ಇಲಾಖೆ, ಕರ್ನಾಟಕ ಸರ್ಕಾರ ರಾಜ್ಯದಲ್ಲಿ ಸಾಮಾನ್ಯ ಶೀತ ILI ಮತ್ತು SARI ನಂತಹ ಚಾಲ್ತಿಯಲ್ಲಿರುವ ಉಸಿರಾಟದ ಸೋಂಕುಗಳ ಡೇಟಾವನ್ನು ವಿಶ್ಲೇಶಿಸಿದೆ, ಡಿಸೆಂಬರ್ 2024 ರಲ್ಲಿ ವರದಿಯಾದ ಪ್ರಕರಣಗಳ ಸಂಖ್ಯೆಯಲ್ಲಿ ಯಾವುದೇ ಗಮರ್ನಾಹ ಏರಿಕೆ ಕಂಡುಬಂದಿರುವುದಿಲ್ಲ.
ರೋಗಲಕ್ಷಣಗಳು : HMPV ಕೆಮ್ಮು ಜ್ವರ ಉಸಿರಾಟದ ತೊಂದರೆ ಸೇರಿದಂತೆ ಜ್ವರ ತರಹದ ರೋಗಲಕ್ಷಣಗಳು ಉಂಟುಮಾಡುತ್ತದೆ, ಹೆಚ್ಚು ತೀವ್ರತರವಾದ ಪ್ರಕರಣಗಳಲ್ಲಿ ಬ್ರಾಂಕೈಟೀಸ್ ಅಥವಾ ನ್ಯೂಮೋನಿಯಾಕ್ಕೆ ಕಾರಣವಾಗಬಹುದು ವಿಶೇಷವಾಗಿ ಚಿಕ್ಕಮಕ್ಕಳು ವೃದ್ಧರು ಕಡಿಮೆ ರೋಗ ನಿರೋಧಕ ಶಕ್ತಿ ಹೊಂದಿರುವ ವ್ಯಕ್ತಿಗಳಲ್ಲಿ ಕಂಡುಬರುತ್ತದೆ.
ಪ್ರಸರಣ : ವೈರಸ್ ಉಸಿರಾಟದ ಹನಿಗಳು, ಸೋಂಕಿತ ವೈಯಕ್ತಿಕ ನಿಕಟ ಸಂಪರ್ಕ ಮತ್ತು ವೈರಸ್‌ನಿಂದ ಕಲುಶಿತಗೊಂಡ ಮೇಲ್ಕೆಗಳನ್ನು ಸ್ಪರ್ಶಿಸುವ ಮೂಲಕ ಬಾಯಿ, ಮೂಗು, ಮತ್ತು ಕಣ್ಣುಗಳ ಸ್ಪರ್ಶಿಸುವ ಮೂಲಕ ಹರಡುತ್ತದೆ.
ಭಾರತದಲ್ಲಿ ಪ್ರಸ್ತುತ ಸ್ಥಿತಿ : ಭಾರತ ಸರ್ಕಾರ ಮತ್ತು ಆರೋಗ್ಯಾಧಿಕಾರಿಗಳು ನಿಕಟವಾಗಿ ಗಮನಿಸುತ್ತಿದ್ದಾರೆ. ಇತ್ತೀಚಿನ ಮಾಹಿತಿಯ ಪ್ರಕಾರ ಭಾರತದಲ್ಲಿ HMPV ಪ್ರಕರಣಗಳಲ್ಲಿ ಯಾವುದೇ ಗಣನೀಯ ಏರಿಕೆ ಕಂಡುಬಂದಿಲ್ಲ. ಎಚ್ಚರಿಕೆಗೆ ಯಾವುದೇ ಕಾರಣವಿಲ್ಲ ಆದರೆ ತಡಗಟ್ಟುವ ಕ್ರಮಗಳನ್ನು ಶಿಫಾರಸ್ಸು ಮಾಡಲಾಗಿದೆ.
ಸಾರ್ವಜನಿಕರು ಈ ಕೆಳಗಿನ ಮುಂಜಾಗ್ರತಾ ನೈರ್ಮಲ್ಯ ಕ್ರಮಗಳನ್ನು ಕೈಗೊಳ್ಳಲು ಸೂಚಿಸಲಾಗಿದೆ.
> ಕೆಮ್ಮುವಾಗ ಅಥವಾ ಸೀನುವಾಗ ನಿಮ್ಮ ಬಾಯಿ ಮತ್ತು ಮೂಗನ್ನು ಕರವಸ್ತ್ರ ಅಥವಾ ಟಿಶೂ ಪೇಪರ್ ನಿಂದ ಮುಚ್ಚಿಕೊಳ್ಳುವುದು.
> ನಿಮ್ಮ ಕೈಗಳನ್ನು ಸಾಬೂನು ಮತ್ತು ನೀರು ಅಥವಾ ಆಲೋಹಾಲ್ ಆಧಾರಿತ ಸ್ಯಾನಿಟೈಜರ್ ನಿಂದ ಹೆಚ್ಚಾಗಿ ತೊಳೆಯಿರಿ.
> ಪ್ರಸರಣವನ್ನು ಕಡಿಮೆ ಮಾಡಲು ಎಲ್ಲಾ ಸೆಟ್ಟಿಂಗ್ ಗಳಲ್ಲಿ ಹೊರಾಂಗಣ ಗಾಳಿಯೊಂದಿಗೆ ಸಾಕಷ್ಟು ವಾತಾಯನವನ್ನು ಶಿಫಾರಸ್ಸು ಮಾಡಲಾಗಿದೆ.
> ನೀವು ಫ್ಲೂ, ILI ನ ಚಿಹ್ನೆಗಳು ಮತ್ತು ರೋಗಲಕ್ಷಣಗಳನ್ನು ಹೊಂದಿದ್ದರೆ ವೈದ್ಯರನ್ನು ಸಂಪರ್ಕಿಸಿ.
> ಸಾಕಷ್ಟು ನೀರು ಕುಡಿಯುವುದು, ಮತ್ತು ಪೌಷ್ಟಿಕ ಆಹಾರವನ್ನು ಸೇವಿಸುವುದು.
ಕರ್ನಾಟಕ ಸರ್ಕಾರವು ಕೇಂದ್ರ ಸರ್ಕಾರದ ಸಮನ್ವಯದೊಂದಿಗೆ ಪರಿಸ್ಥಿತಿಯನ್ನು ನಿಕಟವಾಗಿ ಮೇಲ್ವಿಚಾರಣೆ ಮಾಡುತ್ತಿದೆ. ಮತ್ತು ಭಯಪಡುವ ಅಗತ್ಯವಿಲ್ಲ ಎಂದು ತುಮಕೂರು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ ಸೂಚಿಸಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx