ತುಮಕೂರು: ಹತ್ತನೇ ತರಗತಿ ವ್ಯಾಸಂಗ ಮಾಡುತ್ತಿದ್ದ ರಾಹುಲ್ ಬಿ.ಜೆ(16) ತೀವ್ರ ಹೃದಯಾಘಾತ ದಿಂದ ಮೃತ ಪಟ್ಟಿರುವ ಘಟನೆ ಚಿಕ್ಕನಾಯಕನಹಳ್ಳಿ ಪಟ್ಟಣದ ಜಿ.ಎಚ್.ಎಸ್.ನಲ್ಲಿ ನಡೆದಿದೆ
ತಾಲೂಕಿನ ಭೈರಾಪುರದ ಜಯರಾಂ ಎಂಬುವರ ಮಗ ರಾಹುಲ್, ಶುಕ್ರವಾರ ಶಾಲೆಗೆ ಹೋಗಿ ಬಂದ ನಂತರ ಮನೆಯಲ್ಲಿ ರಾತ್ರಿ 9:30ರಲ್ಲಿ ಓದುತ್ತಿರುವಾಗ ತೀವ್ರ ಎದೆ ನೋವು ಕಾಣಿಸಿಕೊಂಡಿದೆ.
ತಕ್ಷಣ ಪೋಷಕರು ಹುಳಿಯಾರಿನ ಆಸ್ಪತ್ರೆಗೆ ಕರೆದುಕೊಂಡು ಹೋದರಾದರೂ ಚಿಕಿತ್ಸೆ ಫಲಕಾರಿಯಾಗದೆ, ಹುಳಿಯಾರಿನ ಖಾಸಗಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ.
ಕ್ಷೇತ್ರ ಶಿಕ್ಷಣಾಧಿಕಾರಿ ಸಿ.ಎಸ್.ಕಾಂತರಾಜು, ಚಿಕ್ಕನಾಯಕನಹಳ್ಳಿ ಸರ್ಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕರು, ಶಿಕ್ಷಕರು, ಸಿಬ್ಬಂದಿ ವರ್ಗ ಮೃತ ವಿದ್ಯಾರ್ಥಿಯ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4