ತುಮಕೂರು: ಸಮಾಜ ಕಲ್ಯಾಣ ಇಲಾಖಾ ವತಿಯಿಂದ ಮೈಸೂರು ಜಿಲ್ಲೆ ಯಾದವಗಿರಿ ಶ್ರೀ ರಾಮಕೃಷ್ಣ ವಿದ್ಯಾಶಾಲೆಯಲ್ಲಿ 8ನೇ ತರಗತಿ ದಾಖಲಾತಿಗಾಗಿ ಪರಿಶಿಷ್ಟ ಜಾತಿಗೆ ಸೇರಿದ ವಿದ್ಯಾರ್ಥಿ ಹಾಗೂ ಅನೈರ್ಮಲ್ಯ ವೃತ್ತಿಯಲ್ಲಿ ತೊಡಗಿರುವ ಪೋಷಕರ ಪ್ರತಿಭಾವಂತ ಗಂಡು ಮಕ್ಕಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸುವವರು 7ನೇ ತರಗತಿ ಉತ್ತೀರ್ಣರಾಗಿರಬೇಕು. 8ನೇ ತರಗತಿ ದಾಖಲಾತಿಗೆ ಪರಿಶಿಷ್ಟ ಜಾತಿಗೆ ಸೇರಿದ 2 ಗಂಡು ಮಕ್ಕಳು ಮತ್ತು ಅನೈರ್ಮಲ್ಯ ವೃತ್ತಿಯಲ್ಲಿ ತೊಡಗಿರುವ ಪೋಷಕರ ಪ್ರತಿಭಾವಂತ 2 ಗಂಡು ಮಕ್ಕಳನ್ನು ಆಯ್ಕೆ ಮಾಡಲಾಗುವುದು.
ಆಸಕ್ತರು ಭರ್ತಿ ಮಾಡಿದ ಅರ್ಜಿಯನ್ನು ಜಾತಿ ಮತ್ತು ಆದಾಯ ಪ್ರಮಾಣ ಪತ್ರ, 7ನೇ ತರಗತಿ ಅಂಕಪಟ್ಟಿ, ಅನೈರ್ಮಲ್ಯ ವೃತ್ತಿಯಲ್ಲಿ ತೊಡಗಿರುವ ಪೋಷಕರು ಸಂಬAಧಿಸಿದ ಪ್ರಾಧಿಕಾರದಿಂದ ಪಡೆದಿರುವ ಪ್ರಮಾಣ ಪತ್ರ/ಗುರುತಿನ ಚೀಟಿಯೊಂದಿಗೆ ಮಾರ್ಚ್ 24ರೊಳಗಾಗಿ ಜಂಟಿ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ತುಮಕೂರು ಇವರಿಗೆ ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳಿಗೆ ಶ್ರೀ ರಾಮಕೃಷ್ಣ ವಿದ್ಯಾಶಾಲೆ, ಯಾದವಗಿರಿ, ಮೈಸೂರು–57200020 ಇಲ್ಲಿ ಏಪ್ರಿಲ್ 12ರಂದು ಬೆಳಿಗ್ಗೆ 10 ಗಂಟೆಗೆ ಪ್ರವೇಶ ಪರೀಕ್ಷೆ ನಡೆಯಲಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಕೃಷ್ಣಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4