ತುಮಕೂರು: ತರಗತಿಗಳಲ್ಲಿ ತಂತ್ರಜ್ಞಾನದ ಮೇಲಿನ ಅವಲಂಬನೆ ಪುಸ್ತಕಕ್ಕಿಂತಲೂ ಹೆಚ್ಚಾಗಿರುವುದುವಿಪರ್ಯಾಸ. ವಿದ್ಯಾರ್ಥಿಗಳಲ್ಲಿಚರ್ಚಾ ವಲಯವನ್ನುವೃದ್ಧಿಸಿ, ಶಿಕ್ಷಣ ಸಮಾನತೆಯನ್ನು ಕಲಿಸಬೇಕಾದ ತರಗತಿಗಳು ಮನುಷ್ಯತ್ವವಿಲ್ಲದ ಮಾನವರನ್ನು ಸೃಷ್ಟಿಸುತ್ತಿರುವುದು ಈ ಯುಗದದುರಂತ ಎಂದುಹಿರಿಯ ಸಾಹಿತಿ ಪ್ರೊ. ಬರಗೂರು ರಾಮಚಂದ್ರಪ್ಪ ಅಸಮಾಧಾನ ವ್ಯಕ್ತಪಡಿಸಿದರು.
ವಿಶ್ವವಿದ್ಯಾನಿಲಯ ಕಲಾ ಕಾಲೇಜು ಗುರುವಾರ ಆಯೋಜಿಸಿದ್ದ ‘ಕಲಾಸಿರಿ–೨೦೨೪’ ಕಾಲೇಜು ವಾರ್ಷಿಕೋತ್ಸವ ಹಾಗೂ ಜಾನಪದ ಕಲಾಮೇಳ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ತಂತ್ರಜ್ಞಾನದ ಬಳಕೆ ಹೆಚ್ಚಾದಂತೆ ಮನುಷ್ಯ ಸಂಬಂಧ ಕುಸಿಯುತ್ತಿದೆ. ಮುಖ್ಯವಾಗಿಶಿಕ್ಷಕರು–ವಿದ್ಯಾರ್ಥಿಗಳ ನಡುವಿನ ಸಂಬಂಧ ಕುಸಿದಿದೆ. ಶಿಕ್ಷಣದ ಮಹತ್ವ ಅಧ್ಯಾಪಕರು ಹಾಗೂ ವಿದ್ಯಾರ್ಥಿಗಳಿಗೆ ತಿಳಿಯಬೇಕಾದ ಪರಿಸ್ಥಿತಿಯುಂಟಾಗಿದೆ. ಮಾನವಿಕ ಮುಖಗಳನ್ನು ತಿಳಿಯಬೇಕಾದ ಯುವಪೀಳಿಗೆ ಲಾಭಕೋರ ಮನಸ್ಥಿತಿಯಿಂದ ಮೌಲ್ಯಗಳನ್ನು ಪಲ್ಲಟಗೊಳಿಸಿ ವಿಕೃತಿ ಮೆರೆಯುತ್ತಿದ್ದಾರೆಎಂದರು.
ಯಂತ್ರಕ್ಕೆ ಮನುಷ್ಯತ್ವವನ್ನುಕೊಡುವ ಶಿಕ್ಷಣ ನಮ್ಮದಾಗಬೇಕು. ಮಾನವನನ್ನು ಯಂತ್ರವಾಗಿ ಮಾಡುವ ಶಿಕ್ಷಣದಲ್ಲಿ ವಿದ್ಯಾರ್ಥಿಗಳ ಭವಿಷ್ಯ ನಾಶವಾಗುತ್ತಿದೆ.ಭಾರತದಲ್ಲಿ ಮಾನವಿಕ ವಿಷಯಗಳನ್ನು ಆಯ್ಕೆ ಮಾಡಿಕೊಳ್ಳುವವರ ಸಂಖ್ಯೆ ಕೇವಲ ಶೇ.೫ ರಷ್ಟಿದೆ.ನಮ್ಮ ಶಿಕ್ಷಣ ಎಲ್ಲಿಯವರೆಗೆಜ್ಞಾನಮುಖಿ, ಉದ್ಯೋಗಮುಖಿಎಂಬುದನ್ನು ತಿಳಿಯಬೇಕು. ಶೈಕ್ಷಣಿಕ ವಿಭಾಗೀಕರಣವನ್ನು ವಿದ್ಯಾರ್ಥಿಗಳಲ್ಲಿ ಕಲಿಸಬೇಕು ಎಂದರು.
ವಿವೇಕರಹಿತ ಶಿಕ್ಷಣ ಪ್ರಯೋಗಗಳಾದ ರಾಷ್ಟ್ರೀಯ ಶಿಕ್ಷಣ ನೀತಿ, ರಾಜ್ಯ ಶಿಕ್ಷಣ ನೀತಿಗಳು ವಿದ್ಯಾರ್ಥಿಗಳನ್ನು ಪ್ರಯೋಗದ ವಸ್ತುಗಳಾಗಿ ಬಳಸಿಕೊಳ್ಳುತ್ತಿವೆ. ಶೈಕ್ಷಣಿಕ ಅಸಮಾನತೆಯನ್ನು ನೀಗುವ ಶಿಕ್ಷಣ ನೀತಿತರಲುಯಾವ ಸರ್ಕಾರದಿಂದಲೂ ಸಾಧ್ಯವಾಗಲಿಲ್ಲ. ಕನ್ನಡ ಭಾಷೆಯನ್ನುಕಡ್ಡಾಯವಾಗಿ ಕಲಿಸಬೇಕೆಂಬ ನಿಯಮ ಮಾಡಿದರೆ ನ್ಯಾಯಾಲಯಗಳ ಮೆಟ್ಟಿಲೇರುವ ಶಾಲಾ ಕಾಲೇಜುಗಳಿಗೆ ಮನ್ನಣೆ ಕೊಡುವ ದುಷ್ಟ ಮನಸ್ಥಿತಿಯವರು ಸೃಷ್ಟಿಯಾಗಿದ್ದಾರೆ ಎಂದರು.
ಜಾತಿ, ಧರ್ಮ, ಲಿಂಗ, ವರ್ಗ, ವರ್ಣಗಳ ತಾರತಮ್ಯವನ್ನು ಹೋಗಲಾಡಿಸಿ ಆತ್ಮಸ್ಥೈರ್ಯಕೊಡುವ, ಸೌಹಾರ್ದತೆಯನ್ನು ಸಾರುವ, ಶೈಕ್ಷಣಿಕ ಬಿಕ್ಕಟ್ಟುಗಳನ್ನು ಬಗೆಹರಿಸುವ ಶಿಕ್ಷಣ ವ್ಯವಸ್ಥೆ ನಮ್ಮದಾಗಬೇಕು. ವಿದ್ಯಾವಂತರು ಹೆಚ್ಚಾದಂತೆ ಜಾತಿವಾದಿಗಳು ಬೆಳೆಯುತ್ತಿದ್ದಾರೆ. ಸಮಾನತೆಯ ಮುಖವಾಡಗಳನ್ನು ಧರಿಸಿ ಅಸಮಾನತೆಯ ನೆರಳಡಿ ಬದುಕುತ್ತಿರುವ ಅವಿವೇಕಿಗಳ ಸಂಖ್ಯೆ ಹೆಚ್ಚಾಗುತ್ತಿದೆ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕುಲಪತಿ ಪ್ರೊ.ಎಂ.ವೆಂಕಟೇಶ್ವರಲು, ಶಿಸ್ತುಬದ್ಧ ವಿದ್ಯಾರ್ಥಿಗಳು ಶಿಕ್ಷಣ ಸಂಸ್ಥೆಗಳಿಂದ ಹೊರಬರಬೇಕು. ಸ್ಥಾನದಿಂದ ಬರುವ ಗೌರವ ಅಲ್ಪಾವಧಿ. ವ್ಯಕ್ತಿತ್ವದಿಂದ ಬರುವಗೌರವ, ಸಿಗುವ ಮನ್ನಣೆ ಶಾಶ್ವತ ಎಂದರು.
ಪ್ರಾಸ್ತಾವಿಕ ನುಡಿಗಳನ್ನಾಡಿ ಸ್ವಾಗತಿಸಿದ ವಿವಿ ಕಲಾ ಕಾಲೇಜಿನ ಪ್ರಾಂಶುಪಾಲ ಪ್ರೊ.ಬಿ. ಕರಿಯಣ್ಣ, ಪಠ್ಯಕ್ಕೆ ಪೂರಕವಾಗಿರುವ ಪಠ್ಯೇತರ ಚಟುವಟಿಕೆಗಳನ್ನು ವಿದ್ಯಾರ್ಥಿಗಳ ಎದೆಯಲ್ಲಿ ತುಂಬುವ ಶಿಕ್ಷಣ ನಮ್ಮದಾಗಿದೆ. ಪಾಶ್ಚಿಮಾತ್ಯ ಸಂಸ್ಕೃತಿಯ ಹೊಡೆತದ ನಡುವೆ ಭಾರತದ ಸಂಸ್ಕೃತಿಯನ್ನುಎತ್ತಿಹಿಡಿಯುತ್ತಿರುವ ಕಲಾ ಕಾಲೇಜು ವಿದ್ಯಾರ್ಥಿಗಳ ಸರ್ವಾಂಗೀಣ ಬೆಳವಣಿಗೆ ಮತ್ತು ವ್ಯಕ್ತಿತ್ವ ವಿಕಸನಕ್ಕೆ ಪೂರಕವಾಗಿದೆ ಎಂದರು.
ಸಾಮಾಜಿಕ ಚಿಂತಕ ಹಾಗೂ ಜನಪರ ಹೋರಾಟಗಾರ ಕೆ.ದೊರೈರಾಜು ಹಾಗೂ ಕೈಗಾರಿಕೋದ್ಯಮಿ ಎಚ್.ಜಿ. ಚಂದ್ರಶೇಖರ್ ಅವರಿಗೆ ವಿವಿ ಕಲಾ ಕಾಲೇಜಿನ ವಾರ್ಷಿಕ ‘ಕಲಾಸಿರಿ-೨೦೨೪’ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಚಲನಚಿತ್ರ ನಟ ಕುಮಾರ್ ಗೋವಿಂದ್ ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿದರು. ವಿವಿ ಕುಲಸಚಿವೆ ನಾಹಿದಾ ಜಮ್ ಜಮ್ ‘ಕಲಾಸಿರಿ-೨೦೨೪’ ವಾರ್ಷಿಕ ಸಂಚಿಕೆಯನ್ನು ಬಿಡುಗಡೆಮಾಡಿದರು. ಪರೀಕ್ಷಾಂಗ ಕುಲಸಚಿವ ಪ್ರೊ.ಪ್ರಸನ್ನಕುಮಾರ್ ಕೆ.ಕಲಾಸಿರಿ ಸಾಂಸ್ಕೃತಿಕ ಸ್ಪರ್ಧೆಗಳ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಿದರು.
ಸೋಲಿಗರ ಬಸವರಾಜು ಮತ್ತು ಸಂಗಡಿಗರಿಂದ ಸೋಲಿಗರ ಪುಷ್ಪಮಾಲೆ ಕಲಾ ತಂಡ–ಕಲಾ ಪ್ರದರ್ಶನ, ಪ್ರದೀಪ್‌ಎಸ್. ಮತ್ತು ಸಂಗಡಿಗರಿಂದ ಜಾನಪದ ಮೇಳ, ತಿಪ್ಪೇಸ್ವಾಮಿ ಮತ್ತು ಸಂಗಡಿಗರಿಂದ ಬೇಡರ ಪಡೆ ನೃತ್ಯ, ನಿಸರ್ಗಗೋವಿಂದರಾಜ್ ಅವರಿಂದ ಬಯಲು ಸೀಮೆಯ ಛಾಯಾಚಿತ್ರ ಪ್ರದರ್ಶನ, ದಿಬ್ಬೂರು ಮಂಜಣ್ಣ ಮತ್ತು ಸಂಗಡಿಗರಿಂದ ಡಾ.ರಾಜ್ ಕುಮಾರ್ ಗೀತಗಾಯನ, ವಿದ್ವಾನ್ ನಾಗರಾಜ್ ಕೆ. ಅವರಿಂದ ಭರಟನಾಟ್ಯ, ರುದ್ರೇಶ್ ಮತ್ತು ಸಂಗಡಿಗರಿಂದ ವೀರಗಾಸೆ, ಶಶಿಕುಮಾರ್ ಮತ್ತು ಸಂಗಡಿಗರಿಂದ ಕಂಸಾಳೆ ಪ್ರದರ್ಶನ ಹಬ್ಬದ ವಾತಾವರಣ ಸೃಷ್ಟಿಮಾಡಿದವು.
ವಿವಿ ಕಲಾ ಕಾಲೇಜಿನಸಾಂಸ್ಕೃತಿಕ ಸಮಿತಿಯ ಸಂಯೋಜಕ ಡಾ.ರವಿ ಸಿ.ಎಂ., ಕಲಾಸಿರಿ ವಾರ್ಷಿಕೋತ್ಸವದ ಸಮಿತಿಯ ಡಾ.ಗುಂಡೇಗೌಡ, ಡಾ.ಶಿವಣ್ಣ ಬೆಳವಾಡಿ, ಡಾ.ಆರ್.ಸುದೀಪ್‌ಕುಮಾರ್ ಉಪಸ್ಥಿತರಿದ್ದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296