ತುಮಕೂರು: ಜಿಲ್ಲೆಯ ಪಾವಗಡ ತಾಲೂಕಿನ ನಲಿಗಾನಹಳ್ಳಿ ಗ್ರಾಮ ಪಂಚಾಯಿತಿಯ ಯಾರ ಪಾಳ್ಯ ಎನ್ನುವ ಗ್ರಾಮದಲ್ಲಿ ಕಳೆದ ಒಂದು ವರ್ಷಗಳಿಂದ ಕೆಟ್ಟುನಿಂತಿದ್ದ ಶುದ್ಧ ಕುಡಿಯುವ ನೀರಿನ ಘಟಕದ ಬಗ್ಗೆ ನಮ್ಮತುಮಕೂರು ವರದಿ ಮಾಡಿದ್ದು, ವರದಿ ಬೆನ್ನಲ್ಲೇ ಎಚ್ಚೆತ್ತುಕೊಂಡ ಸಂಬಂಧಪಟ್ಟ ಅಧಿಕಾರಿಗಳು ಶುದ್ಧ ಕುಡಿಯುವ ನೀರಿನ ಘಟಕ ದುರಸ್ತಿ ಮಾಡಿ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಟ್ಟಿದ್ದಾರೆ.
ಈ ಮೂಲಕ ನಮ್ಮತುಮಕೂರು ಮಾಧ್ಯಮದ ವರದಿಯಿಂದಾಗಿ ಕಳೆದ 1 ವರ್ಷಗಳಿಂದ ನೀರಿಗಾಗಿ ಕಷ್ಟಪಡುತ್ತಿದ್ದ ಸಾರ್ವಜನಿಕರ ಸಮಸ್ಯೆ ಬಗೆಹರಿದಿದ್ದು, ನಮ್ಮತುಮಕೂರು ಮಾಧ್ಯಮಕ್ಕೆ ಸ್ಥಳೀಯರು ಅಭಿನಂದನೆ ಸಲ್ಲಿಸಿದ್ದಾರೆ.
ಎರ್ರಪಾಳ್ಯ ಗ್ರಾಮದ ನಾಗರಿಕರು ಶುದ್ಧ ಕುಡಿಯುವ ನೀರನ್ನು ತರಲು ಸುಮಾರು ಮೂರ್ನಾಲ್ಕು ಕಿಲೋಮೀಟರ್ ಗಳಷ್ಟು ದೂರ ನಡೆದುಕೊಂಡು ಹೋಗಬೇಕಿತ್ತು. ವಾಹನ ಇದ್ದವರಿಗೆ ದೊಡ್ಡ ಸಮಸ್ಯೆಯಾಗದಿದ್ದರೂ, ನಡೆದುಕೊಂಡು ಹೋಗಿ ನೀರು ತರುವವರ ಸ್ಥಿತಿ ಶೋಚನೀಯವಾಗಿತ್ತು. ಪಂಚಾಯತ್ ರಾಜ್ ಇಲಾಖೆಯ ಅಧಿಕಾರಿಗಳು ಮತ್ತು ಗ್ರಾಮೀಣ ಕುಡಿಯುವ ನೀರು ಸರಬರಾಜು ಅಧಿಕಾರಿಗಳ ನಿರ್ಲಕ್ಷ್ಯತೆಯನ್ನು ಪ್ರಶ್ನಿಸಿ ನಮ್ಮತುಮಕೂರು ಸವಿರವಾದ ವರದಿಯನ್ನು ಪ್ರಕಟಿಸಿತ್ತು. ಇದೀಗ ವರದಿಯ ಬೆನ್ನಲ್ಲೇ ಸಾರ್ವಜನಿಕರ ಸಮಸ್ಯೆಗೆ ಪರಿಹಾರ ದೊರೆತಿದೆ.
ವರದಿ: ನಂದೀಶ್ ನಾಯ್ಕ ಪಿ. ಪಾವಗಡ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4