nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬಾಗಲಕೋಟೆ ಉಪಚುನಾವಣೆ: ಬಿಜೆಪಿಗೆ ಶಾಕ್ ನೀಡಿದ ಕಾಂಗ್ರೆಸ್; ವೀರಣ್ಣ ಚರಂತಿಮಠ ವಿರುದ್ಧ ಉಮೇಶ್ ಮೇಟಿಗೆ ಭರ್ಜರಿ ಜಯ!

    May 4, 2026

    ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ: ತಮಿಳುನಾಡಿನಲ್ಲಿ ನಟ ವಿಜಯ್ ಅಬ್ಬರ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮುನ್ನಡೆ

    May 4, 2026

    ತಿಪಟೂರು: ರೈತರನ್ನು ಒಕ್ಕಲೆಬ್ಬಿಸಿದರೆ ಉಗ್ರ ಹೋರಾಟ: ಕೆ.ಟಿ.ಶಾಂತಕುಮಾರ್ ಎಚ್ಚರಿಕೆ

    May 3, 2026
    Facebook Twitter Instagram
    ಟ್ರೆಂಡಿಂಗ್
    • ಬಾಗಲಕೋಟೆ ಉಪಚುನಾವಣೆ: ಬಿಜೆಪಿಗೆ ಶಾಕ್ ನೀಡಿದ ಕಾಂಗ್ರೆಸ್; ವೀರಣ್ಣ ಚರಂತಿಮಠ ವಿರುದ್ಧ ಉಮೇಶ್ ಮೇಟಿಗೆ ಭರ್ಜರಿ ಜಯ!
    • ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ: ತಮಿಳುನಾಡಿನಲ್ಲಿ ನಟ ವಿಜಯ್ ಅಬ್ಬರ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮುನ್ನಡೆ
    • ತಿಪಟೂರು: ರೈತರನ್ನು ಒಕ್ಕಲೆಬ್ಬಿಸಿದರೆ ಉಗ್ರ ಹೋರಾಟ: ಕೆ.ಟಿ.ಶಾಂತಕುಮಾರ್ ಎಚ್ಚರಿಕೆ
    • ಪಾವಗಡದಲ್ಲಿ ಭೂಮಾಫಿಯಾ ದಂಧೆ: ಗೌಡೆಟಿ ಪ್ರಭಾಕರ್ ಗಂಭೀರ ಆರೋಪ
    • ಮೇ 10ರಂದು ಮೃತ್ಯುಂಜಯ ಶ್ರೀಗಳ ಗುರುವಂದನೆ: ಬೆಳ್ಳಾವಿ ಕಾರದ ವೀರ ಬಸವ ಮಹಾಸ್ವಾಮಿ
    • ದುಶ್ಚಟ ಬಿಟ್ಟು ಕ್ರೀಡೆಯಲ್ಲಿ ತೊಡಗಲು ಕರೆ: ಶಾಸಕ ಕೆ.ಎನ್.ರಾಜಣ್ಣ
    • ಹೇಮಾವತಿ ಲಿಂಕ್ ಕೆನಾಲ್‌ ಗೆ ನಾನು ವಿರೋಧಿ: ಶಾಸಕ ಎಸ್.ಆರ್. ಶ್ರೀನಿವಾಸ್
    • ವಕೀಲರ ಸಂಘದ ಅಧ್ಯಕ್ಷರಾಗಿ ಎಸ್.ಜಯಣ್ಣ ಆಯ್ಕೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮಳೆಗಾಲ ಆರಂಭಕ್ಕೂ ಮುನ್ನ ಸರ್ಕಾರಿ ಕಟ್ಟಡಗಳ ಮೇಲ್ಛಾವಣಿ ಸ್ವಚ್ಛಗೊಳಿಸಿ: ಶಾಸಕ ಕೆ.ಎನ್.ರಾಜಣ್ಣ ಸೂಚನೆ
    ಮಧುಗಿರಿ March 5, 2026

    ಮಳೆಗಾಲ ಆರಂಭಕ್ಕೂ ಮುನ್ನ ಸರ್ಕಾರಿ ಕಟ್ಟಡಗಳ ಮೇಲ್ಛಾವಣಿ ಸ್ವಚ್ಛಗೊಳಿಸಿ: ಶಾಸಕ ಕೆ.ಎನ್.ರಾಜಣ್ಣ ಸೂಚನೆ

    By adminMarch 5, 2026No Comments2 Mins Read
    k n rajanna

    ಮಧುಗಿರಿ: ಮಳೆಗಾಲ ಆರಂಭಕ್ಕೂ ಮುನ್ನ ಸರ್ಕಾರಿ ಕಟ್ಟಡಗಳು ಮತ್ತು ಶಾಲಾ ಕಟ್ಟಡಗಳ ಮೇಲೆ ಬೆಳೆದಿರುವಂತಹ ಗಿಡಗಳನ್ನು ಒಂದು ವಾರದೊಳಗೆ ಸಂಪೂರ್ಣವಾಗಿ ಸ್ವಚ್ಛಗೊಳಿಸಿ, ರಸ್ತೆ ಬದಿಗಳಲ್ಲಿ ನೆಡಲಾಗಿರುವ ಗಿಡಗಳಿಗೆ ನಿಯಮಿತವಾಗಿ ನೀರು ಹಾಕಿ ಸಮರ್ಪಕವಾಗಿ ಸಂರಕ್ಷಣೆ ಮಾಡಬೇಕು ಎಂದು ಅಧಿಕಾರಿಗಳಿಗೆ ಶಾಸಕ ಕೆ.ಎನ್.ರಾಜಣ್ಣ ಸೂಚಿಸಿದರು.

    ಅವರು ತಾಲೂಕಿನ ಮಿಡಿಗೇಶಿ ಹೋಬಳಿಯಲ್ಲಿ ಸುಮಾರು 7.95 ಕೋಟಿ ರೂ.ಗಳ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿ, ಮುಂದಿನ ವಾರ ಕೆಲವು ಗ್ರಾಮಗಳಿಗೆ ಸ್ವತಃ ಭೇಟಿ ನೀಡಿ ಸ್ವಚ್ಛತಾ ಕಾರ್ಯವನ್ನು ಪರಿಶೀಲಿಸಲಾಗುವುದು. ಅಷ್ಟರೊಳಗೆ ಎಲ್ಲಾ ಸರ್ಕಾರಿ ಕಟ್ಟಡಗಳು ಹಾಗೂ ಶಾಲಾ ಕಟ್ಟಡಗಳ ಮೇಲ್ಛಾವಣಿ ಸೇರಿದಂತೆ ಸುತ್ತಮುತ್ತಲಿನ ಪ್ರದೇಶವನ್ನು ಸ್ವಚ್ಛಗೊಳಿಸಿರಬೇಕು ಎಂದು ಅಧಿಕಾರಿಗಳಿಗೆ ಎಚ್ಚರಿಸಿದರು.


    Provided by
    Provided by

    ಹೆಚ್ಚು ಬಡವರು ವಾಸವಿರುವ ಗ್ರಾಮಗಳಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಆದ್ಯತೆ ನೀಡಲಾಗುತ್ತಿದೆ. ಹಳ್ಳಿಗಾಡಿನ ಮಕ್ಕಳು ವಿದ್ಯಾಭ್ಯಾಸದ ಕಡೆಗೆ ಹೆಚ್ಚು ಗಮನಹರಿಸಿ ಉನ್ನತ ಹುದ್ದೆಗಳನ್ನು ಗಳಿಸುವಂತಾಗಬೇಕು. ಗುತ್ತಿಗೆದಾರರು ಕಾಮಗಾರಿಗಳನ್ನು ವಿಳಂಬ ಮಾಡದೆ ಶೀಘ್ರದಲ್ಲಿ ಪೂರ್ಣಗೊಳಿಸಬೇಕು ಎಂದು ತಿಳಿಸಿದರು.

    ಕೆಲವು ಗಡಿ ಭಾಗದ ರಸ್ತೆಗಳು ಹದಗೆಟ್ಟಿರುವ ಬಗ್ಗೆ ಸಾರ್ವಜನಿಕರು ಮನವಿ ಮಾಡಿದ್ದು, ಅವುಗಳನ್ನು ದುರಸ್ತಿಗೊಳಿಸಲಾಗುತ್ತಿದೆ. ಇದು ಜನರ ಅನುಕೂಲಕ್ಕಾಗಿ ಕೈಗೊಳ್ಳಲಾದ ಕಾರ್ಯ. ನಮ್ಮ ಸರ್ಕಾರ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ಸರ್ಕಾರ ಗ್ರಾಮೀಣ ಜನರಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸುವ ಉದ್ದೇಶದಿಂದ ಅಭಿವೃದ್ಧಿ ಕಾರ್ಯಗಳನ್ನು ಜಾರಿಗೆ ತರುತ್ತಿದೆ ಎಂದು ಹೇಳಿದರು.

    ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು ಜನರಿಗೆ ಆರ್ಥಿಕ ಭದ್ರತೆ ನೀಡುವ ಉದ್ದೇಶದಿಂದ ಜಾರಿಗೆ ತರಲಾಗಿದೆ. ಯಾರೂ ಹಸಿವಿನಿಂದ ಬಳಲಬಾರದು ಎಂಬ ಸಂಕಲ್ಪದಿಂದ ಅನ್ನಭಾಗ್ಯ ಸೇರಿದಂತೆ ವಿವಿಧ ಗ್ಯಾರಂಟಿಗಳನ್ನು ನೀಡಲಾಗಿದೆ. ಈ ಯೋಜನೆಗಳ ಸದುಪಯೋಗ ಪಡೆದು ಕುಟುಂಬಗಳು ಆರ್ಥಿಕವಾಗಿ ಸದೃಢರಾಗಬೇಕು. ಮಕ್ಕಳಿಗೆ ಉತ್ತಮ ಶಿಕ್ಷಣ ಒದಗಿಸಬೇಕು. ಯಾರೂ ಒಬ್ಬರ ಅಡಿಯಾಳಾಗಿ ಬದುಕದೇ ಸ್ವಾಭಿಮಾನದಿಂದ ಬದುಕುವಂತಾಗುವುದು ಸರ್ಕಾರದ ಆಶಯವಾಗಿದೆ. ಯೋಜನೆಗಳು ಅರ್ಹರಿಗೆ ತಲುಪಬೇಕು, ಅನರ್ಹರು ದುರುಪಯೋಗಪಡಿಸಿಕೊಳ್ಳಬಾರದು ಎಂದು ಹೇಳಿದರು.

    ನಾವು ಸೇವಿಸುವ ಗಾಳಿಯು ಸಹ ಅಶುದ್ಧವಾಗಿದ್ದು ಆಮ್ಲಜನಕದ ಕೊರತೆಯನ್ನು ನೀಗಿಸಲು ಹೆಚ್ಚು ಮರಗಿಡಗಳನ್ನು ಬೆಳೆಸಲು ಮುಂದಾಗಬೇಕು. ರಸ್ತೆ ಬದಿಗಳಲ್ಲಿ ನೆಡಲಾಗಿರುವ ಗಿಡಗಳಿಗೆ ನಿಯಮಿತವಾಗಿ ನೀರು ಹಾಕಿ, ಪಾತಿ ವ್ಯವಸ್ಥೆ ಮಾಡಿ ಅವುಗಳನ್ನು ಉಳಿಸಬೇಕು. ಕೇವಲ ಗಿಡ ನೆಡುವುದಲ್ಲದೆ ಅವು ಬೆಳೆಯುವಂತೆ ನೋಡಿಕೊಳ್ಳುವುದು ಅರಣ್ಯ ಇಲಾಖೆ ಹಾಗೂ ಪಿಡಿಒಗಳ ಜವಾಬ್ದಾರಿಯಾಗಿದೆ ಎಂದರು.

    ಈ ಸಂದರ್ಭದಲ್ಲಿ ಉಪವಿಭಾಗಾಧಿಕಾರಿ ಗೋಟೂರು ಶಿವಪ್ಪ, ತಹಶೀಲ್ದಾರ್ ಶ್ರೀನಿವಾಸ್, ಇಇ ಹನುಮಂತರಾವ್, ಇಒ ಲಕ್ಷ್ಮಣ್, ಬಿಇಒ ಹನುಮಂತರಾಯಪ್ಪ, ಎಡಿ ಧನಂಜಯ, ಇಇ ಹನುಮಂತರಾವ್, ಲೋಕೇಶ್ವರಪ್ಪ, ಸುರೇಶ್, ಡಿವೈಎಸ್ಪಿ ಮಂಜುನಾಥ್, ಪಿಎಸ್‌ಐ ಹನುಮಂತರಾಯಪ್ಪ, ಪಿಡಿಒಗಳಾದ ಕುಮಾರಸ್ವಾಮಿ, ರಂಗನಾಥ್, ರಜನಿ, ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಜಿ.ಜೆ. ರಾಜಣ್ಣ, ಕೆಪಿಸಿಸಿ ಸದಸ್ಯ ಮಲ್ಲಿಕಾರ್ಜುನ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗೋಪಾಲಯ್ಯ, ಗುತ್ತಿಗೆದಾರರಾದ ಪ್ರಶಾಂತ್, ಕೆ.ಎಸ್.ಶಮೀರ್ ಅಹಮದ್, ಕೆ.ಎಸ್.ನಾಸಿರ್, ವೆಂಕಟಸುಬ್ಬಯ್ಯ, ನಾಗಣ್ಣ ಸೇರಿದಂತೆ ತಾಲೂಕು ಮಟ್ಟದ ಅಧಿಕಾರಿಗಳು ಹಾಗೂ ಮುಖಂಡರು ಉಪಸ್ಥಿತರಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಬಾಲಕಿಗೆ ಆಸೆ ಹುಟ್ಟಿಸಿ ಕರೆದೊಯ್ದ ವ್ಯಕ್ತಿ ವಿರುದ್ಧ ದೂರು ದಾಖಲು

    May 1, 2026

    ತುಮಕೂರು: ಕ್ಷುಲ್ಲಕ ಕಾರಣಕ್ಕೆ ಜಗಳ; ತಮ್ಮನ ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಲೆ ಮಾಡಿದ ಅಣ್ಣ!

    April 30, 2026

    ಮಧುಗಿರಿ: ನೀರು ಕುಡಿಯಲು ಹೋದ ಅಕ್ಕ—ತಮ್ಮ ಕಾಲುಜಾರಿ ಹೊಂಡಕ್ಕೆ ಬಿದ್ದು ದುರ್ಮರಣ

    April 27, 2026

    Leave A Reply Cancel Reply

    Our Picks

    ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ: ತಮಿಳುನಾಡಿನಲ್ಲಿ ನಟ ವಿಜಯ್ ಅಬ್ಬರ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮುನ್ನಡೆ

    May 4, 2026

    ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕೋರ್ಟ್ ಕದ ತಟ್ಟಿದ ನಟ ದರ್ಶನ್: ಮೇ 4ಕ್ಕೆ ವಿಚಾರಣೆ

    April 29, 2026

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಬಾಗಲಕೋಟೆ ಉಪಚುನಾವಣೆ: ಬಿಜೆಪಿಗೆ ಶಾಕ್ ನೀಡಿದ ಕಾಂಗ್ರೆಸ್; ವೀರಣ್ಣ ಚರಂತಿಮಠ ವಿರುದ್ಧ ಉಮೇಶ್ ಮೇಟಿಗೆ ಭರ್ಜರಿ ಜಯ!

    May 4, 2026

    ಬಾಗಲಕೋಟೆ: ರಾಜ್ಯ ರಾಜಕೀಯದ ಕುತೂಹಲಕ್ಕೆ ಕಾರಣವಾಗಿದ್ದ ಬಾಗಲಕೋಟೆ ವಿಧಾನಸಭಾ ಉಪಚುನಾವಣೆಯ ಫಲಿತಾಂಶ ಪ್ರಕಟವಾಗಿದ್ದು, ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಅವರು…

    ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ: ತಮಿಳುನಾಡಿನಲ್ಲಿ ನಟ ವಿಜಯ್ ಅಬ್ಬರ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮುನ್ನಡೆ

    May 4, 2026

    ತಿಪಟೂರು: ರೈತರನ್ನು ಒಕ್ಕಲೆಬ್ಬಿಸಿದರೆ ಉಗ್ರ ಹೋರಾಟ: ಕೆ.ಟಿ.ಶಾಂತಕುಮಾರ್ ಎಚ್ಚರಿಕೆ

    May 3, 2026

    ಪಾವಗಡದಲ್ಲಿ ಭೂಮಾಫಿಯಾ ದಂಧೆ: ಗೌಡೆಟಿ ಪ್ರಭಾಕರ್ ಗಂಭೀರ ಆರೋಪ

    May 3, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.