ತುಮಕೂರು: ಜಿಲ್ಲೆಯ ಪಾವಗಡ ತಾಲೂಕಿನ ನಲಿಗಾನಹಳ್ಳಿ ಗ್ರಾಮ ಪಂಚಾಯಿತಿಯ ಯಾರ ಪಾಳ್ಯ ಎನ್ನುವ ಗ್ರಾಮದಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ಕೆಟ್ಟು ಹೋಗಿ ಒಂದು ವರ್ಷ ಕಳೆದರೂ ಇದುವರೆಗೂ ಅಧಿಕಾರಿಗಳು ಈ ಶುದ್ಧ ನೀರಿನ ಘಟಕವನ್ನು ರಿಪೇರಿ ಮಾಡಿಸುವುದಾಗಲಿ ಅಥವಾ ಪರ್ಯಾಯ ವ್ಯವಸ್ಥೆಯನ್ನಾಗಿ ಮಾಡದಿರುವುದು ಕಂಡು ಬಂದಿದೆ.
ಎರ್ರಪಾಳ್ಯ ಗ್ರಾಮದ ನಾಗರಿಕರು ಶುದ್ಧ ಕುಡಿಯುವ ನೀರನ್ನು ತರಲು ಸುಮಾರು ಮೂರ್ನಾಲ್ಕು ಕಿಲೋಮೀಟರ್ ಗಳಷ್ಟು ದೂರ ನಡೆದುಕೊಂಡು ಇನ್ನೊಂದಷ್ಟು ಜನ ದ್ವಿಚಕ್ರ ವಾಹನಗಳ ಮೂಲಕ ಬಿಂದಿಗೆ ಮತ್ತು ಕ್ಯಾನುಗಳಲ್ಲಿ ನೀರು ತರುವ ಪರಿಸ್ಥಿತಿ ಸೃಷ್ಟಿಯಾಗಿದೆ.
ಸಂಬಂಧಪಟ್ಟ ಪಂಚಾಯತ್ ರಾಜ್ ಇಲಾಖೆಯ ಅಧಿಕಾರಿಗಳು ಮತ್ತು ಗ್ರಾಮೀಣ ಕುಡಿಯುವ ನೀರು ಸರಬರಾಜು ಅಧಿಕಾರಿಗಳು ಸಮರ್ಪಕವಾಗಿ ಸಮಸ್ಯೆಯನ್ನು ಬಗೆಹರಿಸಬೇಕು, ಇಲ್ಲವಾದಲ್ಲಿ ಇಲ್ಲಿ ನಿರ್ಮಾಣ ಮಾಡಿರುವ ಶುದ್ಧಕುಡಿಯುವ ನೀರಿನ ಘಟಕವನ್ನು ತೆರವುಗೊಳಿಸಿ ಎಂದು ಗ್ರಾಮಸ್ಥರಾದ ವಿಜಯ್, ರಾಮಾಂಜಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಗ್ರಾಮೀಣ ಭಾಗದ ನಾಗರಿಕರಿಗೆ ಕುಡಿಯುವ ನೀರಿನ ಸೌಲಭ್ಯ ಒದಗಿಸಬೇಕಾದ ಅಧಿಕಾರಿಗಳು ಕಣ್ಮುಚ್ಚಿ ಕುಳಿತಿದ್ದಾರೆ ಎನ್ನುವ ಆರೋಪ ಸಹ ಕೇಳಿ ಬಂದಿದೆ.
ವರದಿ: ನಂದೀಶ್ ನಾಯ್ಕ ಪಿ., ಪಾವಗಡ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW