ಯಲಹಂಕ ವಲಯ ಕೆಂಪೇಗೌಡ ವಾರ್ಡ್ ವ್ಯಾಪ್ತಿಯಲ್ಲಿ ಇಂದು ರೈತರ ಸಂತೆಯಿಂದ ಜಕ್ಕೂರು ಮುಖ್ಯ ರಸ್ತೆಯವರೆಗೆ ಪಾದಚಾರಿ ಮಾರ್ಗದಲ್ಲಿನ ಒತ್ತುವರಿ ತೆರವು ಕಾರ್ಯವನ್ನು ನಡೆಸಲಾಯಿತು.
ವಲಯ ಜಂಟಿ ಆಯುಕ್ತರಾದ ಪೂರ್ಣಿಮಾ ರವರ ನೇತೃತ್ವದಲ್ಲಿ ಪಾದಚಾರಿ ಮಾರ್ಗ ಒತ್ತುವರಿ ತೆರವು ಕಾರ್ಯಾಚರಣೆಯನ್ನು ನಡೆಸಲಾಗಿದ್ದು, ಪಾದಚಾರಿ ಮಾರ್ಗಗಳಲ್ಲಿ ಇಟ್ಟಿದ್ದ ಅಂಗಡಿ ಮುಂಗಟ್ಟುಗಳು, ಅನುಪಯುಕ್ತ ತಳ್ಳುವ ಗಾಡಿಗಳು, ಹಣ್ಣಿನ ಬಾಕ್ಸ್ ಗಳನ್ನು ತೆರವುಗೊಳಿಸಿ ಪಾದಚಾರಿಗಳ ಸುಗಮ ಸಂಚಾರಕ್ಕೆ ಯಾವುದೇ ರೀತಿಯ ಸಮಸ್ಯೆಯಾಗದಂತೆ ಅನುವು ಮಾಡಲಾಗಿದೆ.
ಮುಂದುವರಿದು, ಪಾದಾಚರಿ ಮಾರ್ಗಗಳಲ್ಲಿದ್ದ ಬ್ಯಾನರ್ ಗಳು, ಬಂಟಿಂಗ್ಸ್ ಗಳು, ಅಂಗಡಿ ಮುಂಭಾಗದಲ್ಲಿ ಬಿಟ್ಟಿರುವ ಶೀಟ್ ಗಳನ್ನು ತೆರವುಗೊಳಿಸಲಾಗಿದೆ. ಜೊತೆಗೆ ಪಾದಚಾರಿ ಮಾರ್ಗದಲ್ಲಿರುವ ಗಿಡ/ಮರಗಳ ರೆಂಬೆಗಳ ಕಟಾವು ಮಾಡಿ ಪಾದಚಾರಿಗಳ ಸುಗಮ ಓಡಾಟಕ್ಕೆ ಅನುವು ಮಾಡಲಾಗಿದೆ. ಒತ್ತುವರಿ ತೆರವು ಕಾರ್ಯಾಚರಣೆಯ ವೇಳೆ ಜೆ. ಸಿ. ಬಿ, ಗ್ಯಾಂಗ್ ಮ್ಯಾನ್ ಗಳನ್ನು ಬಳಸಿಕೊಂಡು ಸ್ವಚ್ಚತಾ ಕಾರ್ಯ ನಡೆಸಲಾಗಿದ್ದು, ಟ್ರ್ಯಾಕ್ಟರ್ ಹಾಗೂ ಕಾಂಪ್ಯಾಕ್ಟರ್ ನಲ್ಲಿ ತ್ಯಾಜ್ಯವನ್ನು ತೆರವುಗೊಳಿಸಲಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


