nammatumakuru

    Subscribe to Updates

    Get the latest creative news from FooBar about art, design and business.

    What's Hot

    ತೋವಿನಕೆರೆ ಗ್ರಾ.ಪಂ. ವ್ಯಾಪ್ತಿಯಲ್ಲಿ ಮನೆ ಸೈಟ್ ಹಂಚಿಕೆಯಲ್ಲಿ ಅಕ್ರಮ: ಗ್ರಾಮ ಪಂಚಾಯಿತಿ ಕಚೇರಿಗೆ ಮುತ್ತಿಗೆ

    July 8, 2026

    ತುಮಕೂರು ಜಿಲ್ಲೆಯಲ್ಲಿ 19.39 ಲಕ್ಷ ಮತದಾರರಿಗೆ ಎಸ್ ಐಆರ್ ಅರ್ಜಿ ವಿತರಣೆ ಪ್ರಕ್ರಿಯೆ

    July 8, 2026

    ‘ಮತ್ಸ್ಯವಾಹಿನಿ’ ಇ–ತ್ರಿಚಕ್ರ ವಾಹನಕ್ಕಾಗಿ ಅರ್ಜಿ ಆಹ್ವಾನ

    July 8, 2026
    Facebook Twitter Instagram
    ಟ್ರೆಂಡಿಂಗ್
    • ತೋವಿನಕೆರೆ ಗ್ರಾ.ಪಂ. ವ್ಯಾಪ್ತಿಯಲ್ಲಿ ಮನೆ ಸೈಟ್ ಹಂಚಿಕೆಯಲ್ಲಿ ಅಕ್ರಮ: ಗ್ರಾಮ ಪಂಚಾಯಿತಿ ಕಚೇರಿಗೆ ಮುತ್ತಿಗೆ
    • ತುಮಕೂರು ಜಿಲ್ಲೆಯಲ್ಲಿ 19.39 ಲಕ್ಷ ಮತದಾರರಿಗೆ ಎಸ್ ಐಆರ್ ಅರ್ಜಿ ವಿತರಣೆ ಪ್ರಕ್ರಿಯೆ
    • ‘ಮತ್ಸ್ಯವಾಹಿನಿ’ ಇ–ತ್ರಿಚಕ್ರ ವಾಹನಕ್ಕಾಗಿ ಅರ್ಜಿ ಆಹ್ವಾನ
    • ಮಧ್ಯಾಹ್ನದ ಊಟದ ರುಚಿ ಹೆಚ್ಚಿಸಲು ಇಲ್ಲಿವೆ 6 ಸುಲಭ ಚಟ್ನಿ ರೆಸಿಪಿಗಳು!
    • ಮಹಿಳೆಯರ ಸುರಕ್ಷತೆಗೆ ಕಾನೂನು ಅರಿವು ಅಗತ್ಯ: ಶಶಿಧರ ಹೆಚ್.ಜಿ.
    • ಎಸ್ ಐಆರ್ ಪ್ರಕ್ರಿಯೆ ನಿರ್ಲಕ್ಷಿಸದೇ ಗಂಭೀರವಾಗಿ ಪರಿಗಣಿಸಿ: ಬಿಜೆಪಿ ಮುಖಂಡ ಸ್ಫೂರ್ತಿ ಚಿದಾನಂದ್ ಮನವಿ
    • ತುಮಕೂರು: ಜುಲೈ 10 ರಿಂದ 3 ದಿನಗಳ ಕಾಲ ‘ಬಿಲ್ಡ್ ಟೆಕ್-2026’ ಬೃಹತ್ ವಸ್ತು ಪ್ರದರ್ಶನ
    • ವಕೀಲರ ಮೇಲಿನ ಹಲ್ಲೆ ಖಂಡಿಸಿ ನ್ಯಾಯಾಲಯದ ಬಳಿ ಪ್ರತಿಭಟನೆ: ಕಲಾಪದಿಂದ ಹೊರಗುಳಿದ ವಕೀಲರು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » 2.30 ಮನೆಗಳನ್ನು ಲಕ್ಷ ಪೂರ್ಣಗೊಳಿಸಲು ಆರ್ಥಿಕನೆರವು ಒದಗಿಸಲು ಸಿಎಂ ತಾತ್ವಿಕ ಒಪ್ಪಿಗೆ: ಜಮೀರ್ ಅಹಮದ್ ಖಾನ್
    ರಾಜ್ಯ ಸುದ್ದಿ October 11, 2023

    2.30 ಮನೆಗಳನ್ನು ಲಕ್ಷ ಪೂರ್ಣಗೊಳಿಸಲು ಆರ್ಥಿಕನೆರವು ಒದಗಿಸಲು ಸಿಎಂ ತಾತ್ವಿಕ ಒಪ್ಪಿಗೆ: ಜಮೀರ್ ಅಹಮದ್ ಖಾನ್

    By adminOctober 11, 2023No Comments2 Mins Read
    zameer

    ಬೆಂಗಳೂರು :ಕೊಳಗೇರಿ ಅಭಿವೃದ್ಧಿ ಮಂಡಳಿ ಹಾಗೂ ರಾಜೀವ್ ಗಾಂಧಿ ವಸತಿ ನಿಗಮದ ವತಿಯಿಂದ ನಿರ್ಮಿಸಲಾಗುತ್ತಿರುವ 2.30 ಲಕ್ಷ ಮನೆಗಳನ್ನು ಪೂರ್ಣ ಗೊಳಿಸುವ ನಿಟ್ಟಿನಲ್ಲಿ ಅಗತ್ಯ ಆರ್ಥಿಕ ನೆರವು ಒದಗಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಮ್ಮತಿ ಸೂಚಿಸಿದ್ದಾರೆ ಎಂದು ವಸತಿ ಸಚಿವ ಜಮೀರ್ ಅಹಮದ್ ಖಾನ್ ತಿಳಿಸಿದ್ದಾರೆ.

    ಮಂಗಳವಾರ ಗೃಹ ಕಚೇರಿ ಕೃಷ್ಣಾ ದಲ್ಲಿ ವಸತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಸಭೆ ನಂತರ ಸುದ್ದಿಗಾರರ ಜತೆ  ಮಾತನಾಡಿದ ಅವರು, ಎ ಮಹತ್ವದ ತೀರ್ಮಾನದಿಂದ ಕಳೆದ ಹತ್ತು ವರ್ಷ ಗಳಿಂದ ನೆನೆಗುದಿಗೆ ಬಿದ್ದಿದ್ದ ವಸತಿ ಯೋಜನೆ ಒಂದು ವರ್ಷ ದೊಳಗೆ ಪೂರ್ಣ ಗೊಳಿಸಿ ಹಂಚಿಕೆ ಮಾಡಲು ಸಹಕಾರಿ ಆಗಲಿದೆ ಎಂದು ಹೇಳಿದರು.

    2013 ರಿಂದ 2018 ರವರೆಗೆ ಮಂಜೂರು ಮಾಡಲಾಗಿರುವ ಮನೆಗಳ ಕಾಮಗಾರಿ ವಿವಿಧ ಹಂತಗಳಲ್ಲಿದ್ದು ಇದುವರೆಗೂ ಒಂದು ಮನೆ ಕೊಡಲು ಸಾಧ್ಯವಾಗಿಲ್ಲ.  ಬಿಜೆಪಿ ಅವಧಿಯಲ್ಲಿ ಈ ಕುರಿತು ಗಮನ ಹರಿಸಿಲ್ಲ. ಜತೆಗೆ ಒಂದೇ ಒಂದು ಹೊಸ ಮನೆ ಸಹ ಕೊಟ್ಟಿಲ್ಲ. ಇದೀಗ ಫಲಾನುಭವಿಗಳ ವಂತಿಗೆ ಪಾವತಿ ದೊಡ್ಡ ಸಮಸ್ಯೆ ಆಗಿದೆ. ವಸತಿ ಯೋಜನೆ ಪೂರ್ಣ ಗೊಳಿಸಲು ಎಂಟು ಸಾವಿರ ಕೋಟಿ ರೂ. ಅಗತ್ಯ ಇರುವ  ಬಗ್ಗೆ ಮುಖ್ಯಮಂತ್ರಿ ಅವರಿಗೆ ಮನವರಿಕೆ ಮಾಡಿಕೊಡಲಾಗಿದ್ದು, ಆದಷ್ಟು ಶೀಘ್ರ ಮಾರ್ಗೋಪಾಯ ಹುಡುಕಲು ಹಣಕಾಸು ಇಲಾಖೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ ಎಂದು ತಿಳಿಸಿದರು.

    2.30 ಲಕ್ಷ ಮನೆಗಳ ಕಾಮಗಾರಿ ಪೂರ್ಣಗೊಳಿಸಲು ಹಂತ ಹಂತವಾಗಿ ಅಗತ್ಯ ನೆರವು ನೀಡಲು ಮುಖ್ಯಮಂತ್ರಿ ಅವರು ತಾತ್ವಿಕ ಒಪ್ಪಿಗೆ ನೀಡಿದಂತಾಗಿದ್ದು, ವಸತಿ ಯೋಜನೆ ಗಳ ವ್ಯಾಪ್ತಿಯಲ್ಲಿ ಮೂಲ ಸೌಕರ್ಯ ಕಲ್ಪಿಸಲು ಬಾಕಿ ಇರುವ  ಅನುದಾನ ತಕ್ಷಣ ಒದಗಿಸುವ ಭರವಸೆ ನೀಡಿದ್ದಾರೆ ಎಂದು ಹೇಳಿದರು.

    ಕೊಳೆಗೇರಿ ಅಭಿವೃದ್ಧಿ ಮಂಡಳಿ ವತಿಯಿಂದ 1.80 ಲಕ್ಷ ಮನೆ ಹಾಗೂ ರಾಜೀವ್ ಗಾಂಧಿ ವಸತಿ ನಿಗಮ ದಿಂದ 50 ಸಾವಿರ ಮನೆಗಳು ನಿರ್ಮಾಣ ಮಾಡಲಾಗುತ್ತಿದ್ದು ಆರ್ಥಿಕ ನೆರವು ಕಲ್ಪಿಸಿದರೆ ಮುಂದಿನ ವರ್ಷ ದೊಳಗೆ ಪೂರ್ಣ ಗೊಳಿಸಿ ಹಂಚಿಕೆ ಮಾಡಲಾಗುವುದು ಎಂದು ತಿಳಿಸಿದರು.

    ಅದೇ ರೀತಿ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಅವರ ಒಂದು ಲಕ್ಷ ಮನೆ ಯೋಜನೆ ಪೂರ್ಣ ಗೊಳಿಸಲು 500 ಕೋಟಿ ರೂ. ಸಾಲ ದ ವ್ಯವಸ್ಥೆ ಮಾಡಲು ಮುಖ್ಯಮಂತ್ರಿ ಅವರು ಒಪ್ಪಿಗೆ ಸೂಚಿಸಿದ್ದಾರೆ ಎಂದರು.

    ವಸತಿ ಯೋಜನೆಗಳಿಗೆ ಜಿಎಸ್ಟಿ ವ್ಯಾಪ್ತಿಯಿಂದ ವಿನಾಯಿತಿ ನೀಡಲು ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯಲು ಸಭೆಯಲ್ಲಿ ನಿರ್ಧಾರ ಮಾಡಲಾಯಿತು. ಅದೇ ರೀತಿ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ದಿಂದ ಸರ್ಕಾರಿ ಕೋಟಾದಡಿ ವೈದ್ಯಕೀಯ ಸೀಟು ಪಡೆಯುವ ವಿದ್ಯಾರ್ಥಿಗಳಿಗೆ ನೀಡುವ ಸಾಲದ ಪ್ರಮಾಣ ಮೂರು ಲಕ್ಷ ರೂ. ನಿಂದ ಐದು ಲಕ್ಷ ರೂ. ಗೆ ಹೆಚ್ಚಿಸಲು ಹಾಗೂ ಸ್ವಾವಲಂಬಿ ಸಾರಥಿ ಯೋಜನೆ ಫಲಾನುಭವಿಗಳ ಸಂಖ್ಯೆ ಹೆಚ್ಚಳ ಮಾಡಲು ಮುಖ್ಯಮಂತ್ರಿ ಅವರು ಒಪ್ಪಿಗೆ ಸೂಚಿಸಿದರು ಎಂದು ವಿವರಿಸಿದರು.

    ಪೌರಾಡಳಿತ ಸಚಿವ ರಹೀಮ್ ಖಾನ್, ಮುಖ್ಯಮಂತ್ರಿ ಅವರ ರಾಜಕೀಯ ಕಾರ್ಯದರ್ಶಿ ಗಳಾದ ನಸೀರ್ ಅಹಮದ್, ಗೋವಿಂದ ರಾಜು, ವಸತಿ ಇಲಾಖೆ ಕಾರ್ಯದರ್ಶಿ ನವೀನ್ ರಾಜ್ ಸಿಂಗ್, ಅಲ್ಪಸಂಖ್ಯಾತ ರ ಕಲ್ಯಾಣ ಇಲಾಖೆ ಕಾರ್ಯದರ್ಶಿ ಮನೋಜ್ ಜೈನ್, ಹಣಕಾಸು ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಅತೀಕ್, ಕೊಳೆಗೇರಿ ಅಭಿವೃದ್ಧಿ ಮಂಡಳಿ ಆಯುಕ್ತ ವೆಂಕಟೇಶ್, ಪ್ರಧಾನ ಅಭಿಯಂತರ ಬಾಲರಾಜು, ರಾಜೀವ್ ಗಾಂಧಿ ವಸತಿ ನಿಗಮ ದ ವ್ಯವಸ್ಥಾಪಕ ನಿರ್ದೇಶಕರಾದ ಸುಶೀಲಮ್ಮ, ಪ್ರಧಾನ ಅಭಿಯಂತರ ಸಂಜೀವ್ ರೆಡ್ಡಿ, ಕೆ ಎಂಡಿಸಿ ವ್ಯವಸ್ಥಾಪಕ ನಿರ್ದೇಶಕ ನಜೀರ್, ನಿರ್ದೇಶನಾಲಯ ನಿರ್ದೇಶಕ ಜಿಲಾನಿ ಉಪಸ್ಥಿತರಿದ್ದರು.

    ಸ್ವಂತ ಸಂಪನ್ಮೂಲ ಕ್ರೋಢೀಕರಣಕ್ಕೆ ನೀತಿ– ಪ್ರಸ್ತಾವನೆಗೆ ಸೂಚನೆ:

    ಪ್ರಧಾನ ಮಂತ್ರಿ ಆವಾಸ್‌ ಯೋಜನೆ ಪ್ರಗತಿ ಕುಂಠೀತವಾಗಿರುವುದರಿಂದ ಸಂಪನ್ಮೂಲ ಕ್ರೋಢೀಕರಣ ಕುರಿತಂತೆ ಪ್ರಸ್ತಾವನೆ ಸಲ್ಲಿಸಲು ಸೂಚಿಸಲಾಯಿತು. ಈ ಯೋಜನೆಯಡಿ ಫಲಾನುಭವಿ ವಂತಿಗೆ ಪ್ರಮಾಣ ಹೆಚ್ಚಾಗಿರುವುದರಿಂದ ಹಾಗೂ ಫಲಾನುಭವಿಗಳ ವಂತಿಗೆ ಪಾವತಿ ಹಿನ್ನಡೆಯಾಗಿದೆ. ಈ ಹಿನ್ನೆಲೆಯಲ್ಲಿ ಸಂಪನ್ಮೂಲ ಕ್ರೋಢೀಕರಣಕ್ಕೆ ನೀತಿ ರೂಪಿಸಲು ಪ್ರಸ್ತಾವನೆ ಸಲ್ಲಿಸುವಂತೆ ಸಭೆಯಲ್ಲಿ ಮುಖ್ಯಮಂತ್ರಿಗಳು ಸೂಚನೆ ನೀಡಿದರು.


    Provided by
    Provided by
    admin
    • Website

    Related Posts

    ವಾಸ್ತವ ವರದಿ ಪರಿಶೀಲನೆ ಬಳಿಕವೇ ಬರ ಘೋಷಣೆ ಮತ್ತು ಪರಿಹಾರ ವಿತರಣೆ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

    July 7, 2026

    ಮಂಗಳಮುಖಿ ವೇಷ ಧರಿಸಿ ದಂಧೆ ನಡೆಸ್ತಿದ್ದ ನಟೋರಿಯಸ್ ಪಿಂಪ್ ಪೊಲೀಸರ ವಶಕ್ಕೆ

    July 7, 2026

    ಬೆಂಗಳೂರಿನ ಜನಾಗ್ರಹ ಸಮಾವೇಶಕ್ಕೆ ಸರಗೂರು ತಾಲ್ಲೂಕಿನಿಂದ 200ಕ್ಕೂ ಹೆಚ್ಚು ದಲಿತ ಕಾರ್ಯಕರ್ತರ ಪ್ರಯಾಣ

    July 3, 2026

    Comments are closed.

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ತೋವಿನಕೆರೆ ಗ್ರಾ.ಪಂ. ವ್ಯಾಪ್ತಿಯಲ್ಲಿ ಮನೆ ಸೈಟ್ ಹಂಚಿಕೆಯಲ್ಲಿ ಅಕ್ರಮ: ಗ್ರಾಮ ಪಂಚಾಯಿತಿ ಕಚೇರಿಗೆ ಮುತ್ತಿಗೆ

    July 8, 2026

    ಕೊರಟಗೆರೆ: ತಾಲ್ಲೂಕಿನ ತೋವಿನಕೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮನೆ ಸೈಟ್ ಹಂಚಿಕೆ ವಿಚಾರ ಭಾರೀ ವಿವಾದಕ್ಕೆ ಕಾರಣವಾಗಿದೆ. ಸೈಟ್ ಹಂಚಿಕೆಯಲ್ಲಿ…

    ತುಮಕೂರು ಜಿಲ್ಲೆಯಲ್ಲಿ 19.39 ಲಕ್ಷ ಮತದಾರರಿಗೆ ಎಸ್ ಐಆರ್ ಅರ್ಜಿ ವಿತರಣೆ ಪ್ರಕ್ರಿಯೆ

    July 8, 2026

    ‘ಮತ್ಸ್ಯವಾಹಿನಿ’ ಇ–ತ್ರಿಚಕ್ರ ವಾಹನಕ್ಕಾಗಿ ಅರ್ಜಿ ಆಹ್ವಾನ

    July 8, 2026

    ಮಧ್ಯಾಹ್ನದ ಊಟದ ರುಚಿ ಹೆಚ್ಚಿಸಲು ಇಲ್ಲಿವೆ 6 ಸುಲಭ ಚಟ್ನಿ ರೆಸಿಪಿಗಳು!

    July 8, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.