ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಸಿಎಂ ಮತ್ತು ಡಿಸಿಎಂ ನಡುವೆ ಕುರ್ಚಿ ಕಿತ್ತಾಟ ಹಾಗೂ ಭಿನ್ನಾಭಿಪ್ರಾಯಗಳ ಕುರಿತು ಚರ್ಚೆಗಳು ನಡೆಯುತ್ತಿರುವ ಬೆನ್ನಲ್ಲೇ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇಂದು ಅಚ್ಚರಿಯ ನಡೆ ಪ್ರದರ್ಶಿಸಿದ್ದಾರೆ.
ತಮ್ಮ ನಡುವೆ ಯಾವುದೇ ಗೊಂದಲಗಳಿಲ್ಲ ಎಂಬ ಸಂದೇಶವನ್ನು ರವಾನಿಸುವ ಉದ್ದೇಶದಿಂದ ಇಬ್ಬರೂ ನಾಯಕರು ಇಂದು ಒಂದೇ ಕಾರಿನಲ್ಲಿ ಪ್ರಯಾಣಿಸುವ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ.
ಇಂದು ನಗರದ ಲೋಕಭವನದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ್ ಭಾಗವಹಿಸಿದ್ದರು. ಕಾರ್ಯಕ್ರಮ ಮುಗಿದ ಬಳಿಕ ಇಬ್ಬರೂ ಪ್ರತ್ಯೇಕ ವಾಹನಗಳಲ್ಲಿ ಹೋಗುವ ಬದಲು, ಸಿದ್ದರಾಮಯ್ಯ ಅವರ ಕಾರಿನಲ್ಲೇ ಡಿ.ಕೆ. ಶಿವಕುಮಾರ್ ಅವರು ಕುಳಿತು ವಿಧಾನಸೌಧಕ್ಕೆ ಆಗಮಿಸಿದರು.
ಕೇವಲ ಪ್ರಯಾಣ ಮಾತ್ರವಲ್ಲದೆ, ವಿಧಾನಸೌಧಕ್ಕೆ ಬಂದ ನಂತರವೂ ಡಿಸಿಎಂ ಅವರು ಮುಖ್ಯಮಂತ್ರಿಗಳ ಕಚೇರಿಗೆ ತೆರಳಿ ಸಿದ್ದರಾಮಯ್ಯ ಅವರೊಂದಿಗೆ ಕೆಲಕಾಲ ಗಂಭೀರ ಚರ್ಚೆ ನಡೆಸಿದರು. ಮೇ 15ರ ಹೊತ್ತಿಗೆ ರಾಜ್ಯ ರಾಜಕಾರಣದಲ್ಲಿ ಮಹತ್ವದ ಬದಲಾವಣೆಗಳಾಗಲಿವೆ ಎಂಬ ವದಂತಿಗಳ ನಡುವೆ ಇಬ್ಬರೂ ನಾಯಕರ ಈ ಒಗ್ಗಟ್ಟಿನ ಪ್ರದರ್ಶನ ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಮೂಡಿಸಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


