ಹಾವೇರಿ: ಎಕ್ಸಿಟ್ ಪೊಲ್ 100% ಕರೆಕ್ಟ್ ಆಗಿರುವುದಿಲ್ಲ. ರಿಯಲ್ ಫಲಿತಾಶ ಬರುವಾಗ ಪ್ಲಸ್ ಮೈನಸ್ ಆಗುತ್ತದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು. ಶಿಗ್ಗಾಂವಿ ಪಟ್ಟಣದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಬಿಜೆಪಿಗೆ ಸಂಪೂರ್ಣ ಬಹುಮತ ಬರುತ್ತದೆ. ಎಕ್ಸಿಟ್ ಪೊಲ್ ಬಗ್ಗೆ ತಲೆಕೆಡಿಸಿಕೊಳ್ಳುವುದಿಲ್ಲ.
ಬಿಜೆಪಿ ಬಹುಮತ ಸಿಗುತ್ತದೆ. ಹಾಗಾಗಿ ಯಾವುದೇ ರೆಸಾರ್ಟ್ ರಾಜಕೀಯ ಮಾಡುವ ಪ್ರಶ್ನೆ ಇಲ್ಲ. ಮೇ 13 ರ ಫಲಿತಾಂಶ ಬರುವ ತನಕ ಕಾದು ನೋಡಿ. ನಾವೇ ಕಿಂಗ್ ಆಗುತ್ತೇವೆ. ಜೆಡಿಎಸ್ ಕಿಂಗ್ ಮೇಕರ್ ಆಗುವುದಿಲ್ಲ. ಬಿಜೆಪಿಗೆ ಸಂಪುರ್ಣ ಬಹುಮತ ಸಿಗುವ ವಿಶ್ವಾಸ ಇದೆ ಎಂದು ಹೇಳಿದ್ದಾರೆ.
ಶಿಗ್ಗಾಂವಿ ಕ್ಷೇತ್ರದ ಕಾರ್ಯಕರ್ತರಿಗೆ ಸಿಎಂ ಬೊಮ್ಮಾಯಿ ಧನ್ಯವಾದ ತಿಳಿಸಿದರು. ಶಿಗ್ಗಾಂವಿ ಕ್ಷೇತ್ರದಿಂದ ನಾಲ್ಕನೆ ಬಾರಿ ಆಯ್ಕೆ ಮಾಡಲು ಶ್ರಮಿಸಿದವರಿಗೆ ಧನ್ಯವಾದ ತಿಳಿಸಿದರು. ಬಳಿಕ ಕಾರ್ಯಕರ್ತರ ಜೊತೆ ಫೋಟೋ ತೆಗಿಸಿಕೊಂಡು ಸಂತಸದಿಂದ ಕೈ ಕುಲುಕಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


