ಕಾಂಗ್ರೆಸ್ ಕಾಲದಲ್ಲಿ ನಡೆದಿರುವ ಅಕ್ರಮ ನೇಮಕಾತಿಗಳ ಕುರಿತು ದಾಖಲೆ ಬಿಡುಗಡೆ ಮಾಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿರವರು ನೀಡಿರುವ ಹೇಳಿಕೆಗೆ ಕಿಡಿ ಕಾರಿರುವ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ದಾಖಲೆಗಳಿದ್ದರೆ ನಮ್ಮ ಕಾಲದ ನೇಮಕಾತಿಯ ಬಗ್ಗೆಯೂ ತನಿಖೆ ನಡೆಸಿ ಎಂದು ಸವಾಲು ಹಾಕಿದ್ದಾರೆ.
ಬೆಂಗಳೂರಿನಲ್ಲಿಂದು ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಸರ್ಕಾರದಲ್ಲಿ ಅಕ್ರಮ ನೇಮಕಾತಿ ನಡೆದಿದೆ ಎಂಬುದು ಸುಳ್ಳು, ಆಗ ವಿರೋಧ ಪಕ್ಷದಲ್ಲಿದ್ದರು. ಏನು ಮಾಡುತ್ತಿದ್ದರು. ಕಡಲೆ ಪುರಿ ತಿಂತಾ ಇದ್ದರಾ, ಯಾಕೆ ಸುಮ್ಮನಿದ್ದರು. ಆಗ ಏಕೆ ಮಾತನಾಡಲಿಲ್ಲ ಎಂದು ಹರಿಹಾಯ್ದರು.
ದಾಖಲೆ ಇದ್ದರೆ ಆಗಲೇ ಹೇಳಬೇಕಿತ್ತಲ್ಲ. ಸುಮ್ಮನೆ ಇದ್ದಿದ್ದು ಅಪರಾಧ, ಕಾನೂನು ಇವರಿಗೆ ಗೊತ್ತಿಲ್ಲವಾ? ನನ್ನ ಕುರ್ಚಿಯನ್ನು ಉಳಿಸೋಕೆ ಮಾತನಾಡಿರಲಿಲ್ಲವಾ ಎಂದು ಸಿದ್ದರಾಮಯ್ಯ ಪ್ರಶ್ನಿಸಿದರು.
ದಾಖಲೆ ಇದ್ದರೆ ನಮ್ಮ ಕಾಲದ ನೇಮಕಾತಿ ಬಗ್ಗೆಯೂ ತನಿಖೆ ಮಾಡಿಸಿ ಎಂದೂ ಅವರು ಸವಾಲು ಹಾಕಿದರು. ಪಿಎಸ್‌ಐ ನೇಮಕಾತಿ ಪ್ರಕರಣದಲ್ಲಿ ಗೃಹ ಸಚಿವ ಅರಗಜ್ಞಾನೇಂದ್ರ ಅವರು ಸದನಕ್ಕೆ ತಪ್ಪು ಮಾಹಿತಿ ಕೊಟ್ಟಿದ್ದಾರೆ. ಅವರನ್ನು ವಜಾ ಮಾಡಬೇಕು ಎಂದು ಸಿದ್ದರಾಮಯ್ಯ ಆಗ್ರಹಿಸಿದರು.
ಗೃಹ ಸಚಿವ ಅರಗಜ್ಞಾನೇಂದ್ರ ಅವರಿಗೆ ಸಚಿವರಾಗಿ ಮುಂದುವರೆಯುವ ನೈತಿಕತೆ ಇಲ್ಲ. ಮುಖ್ಯಮಂತ್ರಿ ಬೊಮ್ಮಾಯಿರವರಿಗೆ ನೈತಿಕತೆ ಇದ್ದರೆ ಅರಗಜ್ಞಾನೇಂದ್ರ ಅವರನ್ನು ವಜಾ ಮಾಡಲಿ ಎಂದರು.
ವರದಿ: ಆಂಟೋನಿ ಬೇಗೂರು
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz