ನಾನು ಮತ್ತೆ ಸಿಎಂ ಆಗುತ್ತೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೀಡಿದ ಹೇಳಿಕೆ ಕುರಿತು ಬಿ.ಎಸ್ ಯಡಿಯೂರಪ್ಪ ಪ್ರತಿಕ್ರಿಯಿಸಿದ್ದಾರೆ.
ಈ ಕುರಿತು ಮಾತನಾಡಿದ ಬಿ.ಎಸ್ ಯಡಿಯೂರಪ್ಪ, ನಾನು ಮತ್ತೆ ಸಿಎಂ ಆಗುತ್ತೇನೆಂದು ಸಿಎಂ ಬಸವರಾಜ ಬೊಮ್ಮಾಯಿ ನೀಡಿರುವ ಹೇಳಿಕೆಯಲ್ಲಿ ತಪ್ಪೇನಿದೆ. ಸಿಎಂ ಬೊಮ್ಮಾಯಿ ಒಳ್ಳೆಯ ಕೆಲಸ ಮಾಡಿದ್ದಾರೆ. ಮತ್ತೊಮ್ಮೆ ಸಿಎಂ ಆಗುತ್ತೇನೆ ಎಂದು ಹೇಳಿರುವುದರಲ್ಲಿ ತಪ್ಪಿಲ್ಲ. ಸಿಎಂ ಬೊಮ್ಮಾಯಿ ಹೇಳಿಕೆ ಸ್ವಾಗತಿಸುತ್ತೇನೆ ಎಂದರು.
ಸಿದ್ಧರಾಮಯ್ಯ ಕ್ಷೇತ್ರ ವಿಚಾರದಲ್ಲಿ ಗೊಂದಲ ಇಲ್ಲ. ಗೊಂದಲ ಅಂತ ಹೇಳಿ ಪ್ರಚಾರ ಪಡೆಯುತ್ತಿದ್ದಾರೆ. ನಾನು ಅಲ್ಲಿ ನಿಲ್ತೀನಿ ಇಲ್ಲಿ ನಿಲ್ಲುತ್ತೇನೆ ಅಂತಾ ಹೇಳುತ್ತಾರೆ. ಎಲ್ಲಿ ನಿಂತರೂ ಗೆಲ್ಲುತ್ತೇನೆ ಎನ್ನುತ್ತಾರೆ. ಇದರಿಂದಾಗುವ ಪ್ರಯೋಜನ ಏನು..? ಇದಕ್ಕೆಲ್ಲಾ ಉತ್ತರ ಕೊಡುವ ಅಗತ್ಯವಿಲ್ಲ ಎಂದು ನುಡಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL
ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


