nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬೆಟ್ಟಿಂಗ್ ಆಟದ ಹಿನ್ನೆಲೆಯ ಚಿತ್ರ ’ಲೂಪ್’ ಮೇ 8ಕ್ಕೆ ತೆರೆಗೆ

    April 27, 2026

    ಔರಾದ್: ಕ್ರಿಶ್ಚಿಯನ್ ಅಭಿವೃದ್ಧಿ ನಿಗಮದ ಉಪಾಧ್ಯಕ್ಷ ಸಂಜಯ್ ಜಾಗೀರ್ದಾರ್ ನೇತೃತ್ವದಲ್ಲಿ ಸಮುದಾಯದ ಮುಖಂಡರ ಸಭೆ

    April 27, 2026

    ಸಿದ್ದರಬೆಟ್ಟದ ಮಡಿಲಲ್ಲಿ ಪರಿಸರ ಕಾಯಕ: ಪ್ಲಾಸ್ಟಿಕ್ ಮುಕ್ತ ಅಭಿಯಾನ ಯಶಸ್ವಿ

    April 27, 2026
    Facebook Twitter Instagram
    ಟ್ರೆಂಡಿಂಗ್
    • ಬೆಟ್ಟಿಂಗ್ ಆಟದ ಹಿನ್ನೆಲೆಯ ಚಿತ್ರ ’ಲೂಪ್’ ಮೇ 8ಕ್ಕೆ ತೆರೆಗೆ
    • ಔರಾದ್: ಕ್ರಿಶ್ಚಿಯನ್ ಅಭಿವೃದ್ಧಿ ನಿಗಮದ ಉಪಾಧ್ಯಕ್ಷ ಸಂಜಯ್ ಜಾಗೀರ್ದಾರ್ ನೇತೃತ್ವದಲ್ಲಿ ಸಮುದಾಯದ ಮುಖಂಡರ ಸಭೆ
    • ಸಿದ್ದರಬೆಟ್ಟದ ಮಡಿಲಲ್ಲಿ ಪರಿಸರ ಕಾಯಕ: ಪ್ಲಾಸ್ಟಿಕ್ ಮುಕ್ತ ಅಭಿಯಾನ ಯಶಸ್ವಿ
    • ಮೇ ತಿಂಗಳಲ್ಲಿ ಪ್ಯಾನ್–ಐಐಟಿ ಬೆಂಗಳೂರು ಸಮಿಟ್ 2026 ಆಯೋಜನೆ
    • ಮುಂದಿನ ದಿನಗಳಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ಪ್ರಯತ್ನ: ಸಚಿವ ಸಂತೋಷ್ ಎಸ್.ಲಾಡ್
    • ಗುಬ್ಬಿ: ಅಂಬಾರಪುರದಲ್ಲಿ ಅರಣ್ಯ ಇಲಾಖೆ ಬೋನಿಗೆ ಬಿದ್ದ ಹೆಣ್ಣು ಚಿರತೆ; ಗ್ರಾಮಸ್ಥರು ನಿಟ್ಟುಸಿರು
    • ಮಧುಗಿರಿ: ನೀರು ಕುಡಿಯಲು ಹೋದ ಅಕ್ಕ—ತಮ್ಮ ಕಾಲುಜಾರಿ ಹೊಂಡಕ್ಕೆ ಬಿದ್ದು ದುರ್ಮರಣ
    • ಯಾವಾಗ ಏನು ಆಗಬೇಕೋ ಅದು ಆಗುತ್ತದೆ’: ಹೈಕಮಾಂಡ್ ನಿರ್ಧಾರಕ್ಕೆ ಡಿ.ಕೆ.ಶಿವಕುಮಾರ್ ಬದ್ಧ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಉಮ್ಮನ್ ಚಾಂಡಿ ನಿಧನಕ್ಕೆ ಸಿಎಂ ಸಂತಾಪ
    ರಾಜ್ಯ ಸುದ್ದಿ July 18, 2023

    ಉಮ್ಮನ್ ಚಾಂಡಿ ನಿಧನಕ್ಕೆ ಸಿಎಂ ಸಂತಾಪ

    By adminJuly 18, 2023No Comments2 Mins Read
    siddharamayya

    ಹಿರಿಯ ರಾಜಕೀಯ ಮುತ್ಸದ್ದಿ ಕೇರಳ ರಾಜ್ಯದ ಮಾಜಿ ಮುಖ್ಯಮಂತ್ರಿ ಉಮ್ಮನ್ ಚಾಂಡಿ ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

    ನನಗೆ ಅತ್ಯಂತ ಆತ್ಮೀಯರಾಗಿದ್ದ ಉಮ್ಮನ್ ಚಾಂಡಿಯವರ ನಿಧನದ ಸುದ್ದಿ ಆಘಾತಕಾರಿ. ಕೇರಳ ರಾಜ್ಯವನ್ನು ಮಾನವ ಅಭಿವೃದ್ಧಿಯ ಸೂಚ್ಯಂಕಗಳಲ್ಲಿ ಉನ್ನತ ಸ್ಥಾನದಲ್ಲಿ ಇರಿಸಲು ಕಾರಣರಾದ ಮುಖ್ಯಮಂತ್ರಿಗಳಲ್ಲಿ ಉಮ್ಮನ್ ಚಾಂಡಿ ಕೂಡ ಒಬ್ಬರಾಗಿದ್ದರು. ಎರಡು ಬಾರಿ ಕೇರಳ ರಾಜ್ಯದ ಮುಖ್ಯಮಂತ್ರಿಗಳಾಗಿ ಅಪಾರ ಸಾಧನೆ ಮಾಡಿದವರಾಗಿದ್ದರು. 2004 ರಿಂದ 2006 ಮತ್ತು 2011 ರಿಂದ 2016 ರವರೆಗೆ ಕೇರಳದ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದರು. ಎಐಸಿಸಿ ಪ್ರಧಾನ ಕಾರ್ಯದರ್ಶಿಯಾಗಿ, ರಾಜ್ಯಪಾಲರಾಗಿ, ಕೇರಳ ವಿಧಾನಸಭೆಯಲ್ಲಿ ವಿರೋಧ ಪಕ್ಷದ ನಾಯಕರಾಗಿ ನಿರಂತರವಾಗಿ ಸಂವಿಧಾನದ ಆಶಯಗಳ, ಮೌಲ್ಯಗಳ ರಕ್ಷಣೆಗೆ ಶ್ರಮಿಸಿ ಹೋರಾಟ ರಾಜಕಾರಣದ ಪರಂಪರೆಯನ್ನು ಪರಿಣಾಮಕಾರಿಯಾಗಿ ಮುನ್ನಡೆಸುತ್ತಿದ್ದರು.


    Provided by
    Provided by

    1970 ರಿಂದ ಕೇರಳ ರಾಜ್ಯ ವಿಧಾನಸಭೆಗೆ ನಿರಂತರವಾಗಿ ಆಯ್ಕೆಯಾಗುತ್ತಾ ಅತ್ಯಂತ ದೀರ್ಘಾವಧಿ ಶಾಸಕರಾಗಿ ಪುದುಪ್ಪಲ್ಲಿ ಕ್ಷೇತ್ರವನ್ನು ಪ್ರತಿನಿಧಿಸುತ್ತಾ ಬಂದಿದ್ದರು. ವಿಶ್ವಸಂಸ್ಥೆಯಿಂದ ಸಾರ್ವಜನಿಕ ಸೇವೆಗಾಗಿ ಪ್ರಶಸ್ತಿಯನ್ನು ಗಳಿಸಿದ ಏಕೈಕ ಭಾರತೀಯ ಮುಖ್ಯಮಂತ್ರಿ ಎನ್ನುವ ಹೆಗ್ಗಳಿಕೆಯನ್ನೂ ಗಳಿಸಿದ್ದರು.

    ಅವರು ಮುಖ್ಯಮಂತ್ರಿ ಆಗಿದ್ದ ಮತ್ತು ನಾನು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಹಲವು ಬಾರಿ ಭೇಟಿಯಾಗಿದ್ದೆವು. ಅಭಿವೃದ್ಧಿ ವಿಚಾರದಲ್ಲಿ ಅವರದೇ ಆದ ಸ್ಪಷ್ಟ ತಿಳಿವಳಿಕೆ ಮತ್ತು ಮಾದರಿಗಳನ್ನು ಹೊಂದಿದ್ದರು. ನಾನು ಮೊದಲ ಬಾರಿ ಮುಖ್ಯಮಂತ್ರಿ ಆಗಿದ್ದ ಅವಧಿಯಲ್ಲಿ ಜಾರಿ ಮಾಡಿದ್ದ ಅನ್ನಭಾಗ್ಯ ಸೇರಿದಂತೆ ಹಲವು ಯೋಜನೆಗಳನ್ನು ಅಪಾರವಾಗಿ ಶ್ಲಾಘಿಸಿದ್ದರು. ಬಡವರ ಮತ್ತು ಮಧ್ಯಮ ವರ್ಗದವರ ಬದುಕನ್ನು ಉನ್ನತೀಕರಿಸುವ ಸ್ಪಷ್ಟ ಗುರಿ ಮತ್ತು ಮಾರ್ಗ ನಾವು ಜಾರಿ ಮಾಡಿರುವ ಕಾರ್ಯಕ್ರಮಗಳಲ್ಲಿ, ನಾನು ಮಂಡಿಸಿದ ಆಯವ್ಯಯಗಳಲ್ಲಿ ಇದೆ ಎಂದು ಪತ್ರ ಬರೆದು ಮೆಚ್ಚುಗೆ ಸೂಚಿಸಿದ್ದರು.

    ಇವರ ನಿಧನ ಅಭಿವೃದ್ಧಿ ಮತ್ತು ಜನಪರ ರಾಜಕಾರಣಕ್ಕೆ, ಕೇರಳ ರಾಜ್ಯಕ್ಕೆ, ಭಾರತೀಯ ರಾಜಕಾರಣಕ್ಕೆ ಹಾಗೂ ನನಗೆ ವೈಯುಕ್ತಿಕವಾಗಿ ತುಂಬಲಾರದ ನಷ್ಟ. ಮೌಲ್ಯಯುತ ರಾಜಕಾರಣದ ಹೆಜ್ಜೆಗುರುತನ್ನು ಉಳಿಸಿ ಹೋಗಿರುವ ಉಮ್ಮನ್ ಚಾಂಡಿಯವರ ಅಗಲಿಕೆಯನ್ನು ಸಹಿಸಿಕೊಳ್ಳುವ ಶಕ್ತಿಯನ್ನು ಕುಟುಂಬಕ್ಕೆ ಮತ್ತು ಅಪಾರ ಬಂಧು ಮಿತ್ರರಿಗೆ ದೇವರು ನೀಡಲಿ ಎಂದು ಪ್ರಾರ್ಥಿಸುತ್ತೇನೆ.

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಯಾವಾಗ ಏನು ಆಗಬೇಕೋ ಅದು ಆಗುತ್ತದೆ’: ಹೈಕಮಾಂಡ್ ನಿರ್ಧಾರಕ್ಕೆ ಡಿ.ಕೆ.ಶಿವಕುಮಾರ್ ಬದ್ಧ

    April 26, 2026

    ರಾಜ್ಯದ ಆರೋಗ್ಯ ಇಲಾಖೆ ‘ಅನಾರೋಗ್ಯ’ ಪೀಡಿತವಾಗಿದೆ: ಸರ್ಕಾರದ ವಿರುದ್ಧ ಆರ್. ಅಶೋಕ ವಾಗ್ದಾಳಿ

    April 26, 2026

    ಒಳ ಮೀಸಲಾತಿ ನಿರ್ಧಾರಕ್ಕೆ ಜನಮನ್ನಣೆ: ಇದು ಐತಿಹಾಸಿಕ ಹೆಜ್ಜೆ: ಸಚಿವ ಸತೀಶ್ ಜಾರಕಿಹೊಳಿ

    April 26, 2026

    Comments are closed.

    Our Picks

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಸ್ಪೆಷಲ್ ನ್ಯೂಸ್

    ಬೆಟ್ಟಿಂಗ್ ಆಟದ ಹಿನ್ನೆಲೆಯ ಚಿತ್ರ ’ಲೂಪ್’ ಮೇ 8ಕ್ಕೆ ತೆರೆಗೆ

    April 27, 2026

    ರಾಘವೇಂದ್ರ ಅಡಿಗ ಎಚ್ಚೆನ್ ಬೆಟ್ಟಿಂಗ್ ಆಟ ಹಿನ್ನೆಲೆಯ ಕಥೆ ಇರುವ  ‘ಲೂಪ್’ ಚಿತ್ರದ ಟ್ರೈಲರ್ ಮತ್ತಿತರೆ ಕಂಟೆಂಟ್ ಗಳು ಈಗಾಗಲೇ…

    ಔರಾದ್: ಕ್ರಿಶ್ಚಿಯನ್ ಅಭಿವೃದ್ಧಿ ನಿಗಮದ ಉಪಾಧ್ಯಕ್ಷ ಸಂಜಯ್ ಜಾಗೀರ್ದಾರ್ ನೇತೃತ್ವದಲ್ಲಿ ಸಮುದಾಯದ ಮುಖಂಡರ ಸಭೆ

    April 27, 2026

    ಸಿದ್ದರಬೆಟ್ಟದ ಮಡಿಲಲ್ಲಿ ಪರಿಸರ ಕಾಯಕ: ಪ್ಲಾಸ್ಟಿಕ್ ಮುಕ್ತ ಅಭಿಯಾನ ಯಶಸ್ವಿ

    April 27, 2026

    ಮೇ ತಿಂಗಳಲ್ಲಿ ಪ್ಯಾನ್–ಐಐಟಿ ಬೆಂಗಳೂರು ಸಮಿಟ್ 2026 ಆಯೋಜನೆ

    April 27, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.