ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದು 100 ದಿನಗಳು ಪೂರ್ಣಗೊಂಡಿರುವ ಬೆನ್ನಲ್ಲೇ, ಸರ್ಕಾರದ ವಿರುದ್ಧ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ತೀವ್ರವಾಗಿ ಕಿಡಿಕಾರಿದ್ದಾರೆ. ಸರ್ಕಾರವು ಅಭಿವೃದ್ಧಿಯಲ್ಲಿ ಸಂಪೂರ್ಣ ವಿಫಲವಾಗಿದ್ದು, ಸಾಧನೆ ಮಾಡುವುದಕ್ಕಿಂತ ಪ್ರಚಾರಕ್ಕೇ ಹೆಚ್ಚಿನ ಒತ್ತು ನೀಡಿದೆ ಎಂದು ಅವರು ಆರೋಪಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಜನರಿಗೆ ಮುಖ್ಯಮಂತ್ರಿಯಂತೆ ಕಾಣದೆ “ರಿಯಲ್ ಎಸ್ಟೇಟ್ ಏಜೆಂಟ್” ರೀತಿಯಲ್ಲಿ ಕಾಣುತ್ತಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ. ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಕೆಲಸಗಳು ನಡೆಯದಿದ್ದರೂ, ಕೇವಲ 100 ದಿನಗಳ ಸಂಭ್ರಮಾಚರಣೆ ಹೆಸರಿನಲ್ಲಿ ಜನರನ್ನು ಮರಳು ಮಾಡಲಾಗುತ್ತಿದೆ ಎಂದು ಟೀಕಿಸಿದರು.
ಸರ್ಕಾರವು ಯಾವುದೇ ಕಣ್ಣಿಗೆ ಕಾಣುವ ಸಾಧನೆ ಮಾಡಿಲ್ಲ, ಕೇವಲ ಜಾಹೀರಾತು ಮತ್ತು ಪ್ರಚಾರದಲ್ಲಷ್ಟೇ ನಂಬರ್ ಒನ್ ಆಗಿದೆ. ಆಡಳಿತದ ವೈಫಲ್ಯಗಳನ್ನು ಮುಚ್ಚಿಕೊಳ್ಳಲು ಮತ್ತು ಎದುರಾಗಿರುವ ಸಮಸ್ಯೆಗಳಿಂದ ಪಾರಾಗಲು ಮುಖ್ಯಮಂತ್ರಿಗಳು ದೇವಸ್ಥಾನಗಳಿಗೆ ಅಲೆಯುತ್ತಿದ್ದಾರೆ.
ಬರ ಪರಿಹಾರ ಒದಗಿಸುವಲ್ಲಿ ಸರ್ಕಾರ ವಿಫಲವಾಗಿದ್ದು, ರಾಜ್ಯದಲ್ಲಿ ರೈತರ ಆತ್ಮಹತ್ಯೆ ಪ್ರಕರಣಗಳು ಹೆಚ್ಚುತ್ತಿವೆ. ‘ಬ್ರ್ಯಾಂಡ್ ಬೆಂಗಳೂರು’ ಹೆಸರಿನಲ್ಲಿ ಬಿಲ್ಡಪ್ ನೀಡಲಾಗುತ್ತಿದೆಯಾದರೂ, ರಸ್ತೆ ಗುಂಡಿಗಳು ಹಾಗೂ ಕಸದ ಸಮಸ್ಯೆ ಯಥಾವತ್ತಾಗಿ ಮುಂದುವರಿದಿದೆ ಎಂದು ಅಶೋಕ್ ಆಕ್ರೋಶ ವ್ಯಕ್ತಪಡಿಸಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI
