ತುಮಕೂರು: ರಾಜ್ಯದಲ್ಲಿ ಯಾರು ಮುಖ್ಯಮಂತ್ರಿ ಆಗಬೇಕು ಯಾರು ಉಪ ಮುಖ್ಯಮಂತ್ರಿಯಾಗಬೇಕು ಮತ್ತು ಕೆಪಿಸಿಸಿ ಅಧ್ಯಕ್ಷರಾಗಬೇಕು ಎಂಬ ಕುರಿತು 2023ರ ಮೇ 18ರಂದು ಎಐಸಿಸಿ ಹೊರಡಿಸಿರುವ ನೋಟಿಫಿಕೇಶನ್ ನಲ್ಲಿ ಪ್ರಸ್ತಾಪಿಸಲಾಗಿದೆ. ಇದನ್ನು ಸ್ಪಷ್ಟಪಡಿಸಬೇಕೆಂದು ಹೈಕಮಾಂಡ್ ಗಮನಕ್ಕೆ ತಂದಿದ್ದೇನೆ ಎಂದು ಸಹಕಾರ ಸಚಿವ ಕೆ.ಎನ್. ರಾಜಣ್ಣ ತಿಳಿಸಿದ್ದಾರೆ.
ತುಮಕೂರಿನಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು ಎಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಕಾಂಗ್ರೆಸ್ ಮುಖಂಡರ ಬಳಿ ದೆಹಲಿಯಲ್ಲಿ ಇದನ್ನು ಪ್ರಸ್ತಾಪಿಸಿದ್ದೇನೆ. ಅವರ ಪ್ರತಿಕ್ರಿಯೆಗಾಗಿ ನಾನು ಕಾಯುತ್ತಿದ್ದೇನೆ ಎಂದು ಹೇಳಿದರು.
ಅಹಿಂದ ಸಮಾವೇಶಕ್ಕೆ ಕುರಿತಂತೆ ಈಗಾಗಲೇ ಯಾವುದೇ ಸ್ಥಳವನ್ನು ಅಂತಿಮಗೊಳಿಸಿಲ್ಲ, ಅದರಲ್ಲಿ ಚಿತ್ರದುರ್ಗ ದಾವಣಗೆರೆ ಸೇರಿದಂತೆ ಮೂರು ಜಿಲ್ಲೆಗಳಲ್ಲಿ ಯಾವುದಾದರೂ ಒಂದು ಜಿಲ್ಲೆಯನ್ನು ಅಂತಿಮಗೊಳಿಸಲಾಗುವುದು ಎಂದು ಹೇಳಿದರು.
ರಾಜ್ಯದಲ್ಲಿ ಮುಖ್ಯಮಂತ್ರಿ ಸ್ಥಾನ ಖಾಲಿ ಇಲ್ಲ ಹೀಗಾಗಿ ದಲಿತ ಮುಖ್ಯಮಂತ್ರಿ ಕುರಿತ ಪ್ರಸ್ತಾಪ ಅನಾವಶ್ಯಕವಾಗಿದೆ ಎಂದು ಹೇಳಿದರು.
ದೆಹಲಿಯಲ್ಲಿ ಹೈಕಮಾಂಡ್ ಜೊತೆ ಅನೇಕ ವಿಷಯಗಳನ್ನು ಪ್ರಸ್ತಾಪ ಮಾಡಿದ್ದೇನೆ ಅದರಲ್ಲಿ ವಿಧಾನ ಪರಿಷತ್ಗೆ ನಾಮಕರಣ ಸದಸ್ಯರ ನೇಮಕದಲ್ಲಿ ಇದುವರೆಗೂ ಅಧಿಕಾರ ವಂಚಿತ ಸಣ್ಣ ಜಾತಿಗಳ ಪರಿಗಣಿಸಬೇಕೆಂದು ಸೇರಿದಂತೆ ಪಕ್ಷದ ಸಂಘಟನೆ ದೃಷ್ಟಿಯಿಂದ ತೆಗೆದು ಅಗತ್ಯವಿರುವ ಕ್ರಮಗಳ ಬಗ್ಗೆ ಮಾತನಾಡಿದ್ದೇನೆ ಎಂದು ಹೇಳಿದರು.
ಮುಖ್ಯಮಂತ್ರಿ ಸ್ಥಾನದಲ್ಲಿ ಸಿದ್ದರಾಮಯ್ಯ ಈಗಿನ ಐದು ವರ್ಷ ಸೇರಿದಂತೆ ಮುಂದಿನ 10 ವರ್ಷದವರೆಗೂ ಕೂಡ ಮುಖ್ಯಮಂತ್ರಿ ಆಗಿ ಮುಂದುವರೆಯಲಿದ್ದಾರೆ ಎಂದು ಹೇಳಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4