nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸಚಿವ ಸ್ಥಾನಕ್ಕೆ ಪಟ್ಟು: ಹೈಕಮಾಂಡ್ ಭೇಟಿಗೆ ದೆಹಲಿಗೆ ತೆರಳಿದ 25ಕ್ಕೂ ಹೆಚ್ಚು ಕಾಂಗ್ರೆಸ್ ಶಾಸಕರು

    April 13, 2026

    ಪುರುಷರಿಗೂ ‘ಶಕ್ತಿ’ ಟಿಕೆಟ್ ನೀಡಿ ಹಣ ಲೂಟಿ; ಐವರು ಕಂಡಕ್ಟರ್‌ ಗಳ ಅಮಾನತು

    April 13, 2026

    ಗುಬ್ಬಿ ತಾಲೂಕಿನಲ್ಲಿ ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ಸಮರೋಪಾದಿ ಕ್ರಮ: ಶಾಸಕ ಎಸ್.ಆರ್.ಶ್ರೀನಿವಾಸ್

    April 13, 2026
    Facebook Twitter Instagram
    ಟ್ರೆಂಡಿಂಗ್
    • ಸಚಿವ ಸ್ಥಾನಕ್ಕೆ ಪಟ್ಟು: ಹೈಕಮಾಂಡ್ ಭೇಟಿಗೆ ದೆಹಲಿಗೆ ತೆರಳಿದ 25ಕ್ಕೂ ಹೆಚ್ಚು ಕಾಂಗ್ರೆಸ್ ಶಾಸಕರು
    • ಪುರುಷರಿಗೂ ‘ಶಕ್ತಿ’ ಟಿಕೆಟ್ ನೀಡಿ ಹಣ ಲೂಟಿ; ಐವರು ಕಂಡಕ್ಟರ್‌ ಗಳ ಅಮಾನತು
    • ಗುಬ್ಬಿ ತಾಲೂಕಿನಲ್ಲಿ ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ಸಮರೋಪಾದಿ ಕ್ರಮ: ಶಾಸಕ ಎಸ್.ಆರ್.ಶ್ರೀನಿವಾಸ್
    • ಕೊರಟಗೆರೆ: ಶುದ್ಧ ಕುಡಿಯುವ ನೀರಿನ ಘಟಕಕ್ಕೆ ಸಚಿವ ವಿ.ಸೋಮಣ್ಣ ಶಂಕುಸ್ಥಾಪನೆ
    • ‘ಸರ್ಕಾರದ ಖಜಾನೆ ಖಾಲಿ, ಸಿಬ್ಬಂದಿಗೆ ಸಂಬಳವಿಲ್ಲ’: ಕಾಂಗ್ರೆಸ್ ವಿರುದ್ಧ ವಿ.ಸೋಮಣ್ಣ ವಾಗ್ದಾಳಿ
    • ‘ಜನತಾ ದರ್ಶನ’ ಕಾರ್ಯಕ್ರಮದಲ್ಲಿ ಪರಮೇಶ್ವರ್ ಗೆ ನೇರ ಪ್ರಶ್ನೆ: ಕೆಆರ್‌ ಎಸ್ ಪಕ್ಷದ ವಿರುದ್ಧ ಕಾಂಗ್ರೆಸ್ ಮುಖಂಡರಿಂದ ಕಿಡಿ
    • ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ
    • ಕೊಡಗಿನಲ್ಲಿ ಭೀಕರ ರಸ್ತೆ ಅಪಘಾತ: ಚಲನಚಿತ್ರ ನಟ ಹರೀಶ್ ಸ್ಥಳದಲ್ಲೇ ಸಾವು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸಿಎಂ—ಡಿಸಿಎಂ–ಗೃಹ ಸಚಿವರ ವಿರುದ್ಧ ಪೋಸ್ಟ್ | 10 ಜಿಲ್ಲೆಯ 15 ಠಾಣೆಗಳಲ್ಲಿ ಪ್ರಕರಣ ದಾಖಲು,  ಉತ್ತರಕಾಂಡ ರಾಜ್ಯದಲ್ಲಿ ಆರೋಪಿಯ ಬಂಧನ
    ಕೊರಟಗೆರೆ December 5, 2024

    ಸಿಎಂ—ಡಿಸಿಎಂ–ಗೃಹ ಸಚಿವರ ವಿರುದ್ಧ ಪೋಸ್ಟ್ | 10 ಜಿಲ್ಲೆಯ 15 ಠಾಣೆಗಳಲ್ಲಿ ಪ್ರಕರಣ ದಾಖಲು,  ಉತ್ತರಕಾಂಡ ರಾಜ್ಯದಲ್ಲಿ ಆರೋಪಿಯ ಬಂಧನ

    By adminDecember 5, 2024No Comments2 Mins Read
    mohith

    ವರದಿ: ಮಂಜುಸ್ವಾಮಿ ಎಂ.ಎನ್.

    ಕೊರಟಗೆರೆ : ಸಿಎಂ, ಡಿಸಿಎಂ, ಗೃಹ ಸಚಿವ, ಸಣ್ಣ ನೀರಾವರಿ ಸಚಿವ, ವಸತಿ ಸಚಿವ, ಇಂಧನ ಸಚಿವ ಸೇರಿ 15 ಕ್ಕೂ ಅಧಿಕ ಸಚಿವರ ವಿರುದ್ದ ಅವಾಚ್ಯ ಶಬ್ದದಿಂದ ನಿಂದನೆ ಮತ್ತು ವೈಯಕ್ತಿಕ ತೇಜೋವಧೆಯ ವಿಡೀಯೊ ಮಾಡಿ ಪೇಸ್‍ ಬುಕ್, Instagram ಮತ್ತು ಎಕ್ಸ್‍ ನ ಖಾತೆಗಳಲ್ಲಿ ಹರಿಬಿಟ್ಟು ಉತ್ತರಕಾಂಡ ರಾಜ್ಯದ ಹಳ್ಳಿಯಲ್ಲಿ ತಲೆ ಮರೆಸಿಕೊಂಡಿದ್ದ ಬಜರಂಗ ದಳದ ಕಾರ್ಯಕರ್ತನನ್ನು ಕೊರಟಗೆರೆ ಪಿಎಸೈ ಚೇತನ್ ಕುಮಾರ್ ನೇತೃತ್ವದ ತಂಡ ಇತ್ತೀಚಿಗೆ ಬಂಧಿಸಿರುವ ಘಟನೆ ನಡೆದಿದೆ.


    Provided by
    Provided by

    ಕರ್ನಾಟಕ ಸಿಎಂ ಸಿದ್ದರಾಮಯ್ಯ, ಡಿಸಿಎಂ ಶಿವಕುಮಾರ್, ಗೃಹಸಚಿವ ಡಾ.ಜಿ.ಪರಮೇಶ್ವರ, ವಸತಿ ಸಚಿವ ಜಮೀರ್‍ ಅಹಮ್ಮದ್, ಇಂಧನ ಸಚಿವ ಕೆ.ಜೆ.ಜಾರ್ಜ್ ಸೇರಿ ಹಲವರ ವಿರುದ್ದ ಬಿಜೆಪಿ ಕಾರ್ಯಕರ್ತ 1 ರಿಂದ 2 ನಿಮಿಷದ ವಿಡೀಯೊ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿದುಬಿಟ್ಟು ಸರಕಾರದ ಘನತೆಗೆ ಧಕ್ಕೆ ತಂದಿರುವ ಬಗ್ಗೆ ಬ್ಲಾಕ್‍ ಕಾಂಗ್ರೆಸ್ ಅಧ್ಯಕ್ಷ ದೂರಿನ ಅನ್ವಯ ಕೊರಟಗೆರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ತುಮಕೂರು ಜಿಲ್ಲೆಯ ವಿಶ್ವ ಹಿಂದು ಪರಿಷತ್ ಮತ್ತು ಬಜರಂಗದಳದ ಕಾರ್ಯಕರ್ತನಾಗಿ ಕೆಲಸ ಮಾಡಿರುವ ಮೋಹಿತ್ ನರಸಿಂಹಮೂರ್ತಿ ಪ್ರಸ್ತುತ ಉತ್ತರಕಾಂಡದ ಉಕ್ಕಿಮಠದಲ್ಲಿ ಬಿಜೆಪಿ ಸಂಘಟಕನಾಗಿ ಕೆಲಸ ಮಾಡುತ್ತ ಜೀವನಕ್ಕಾಗಿ ಟೀ ಅಂಗಡಿ ಇಟ್ಟುಕೊಂಡಿದ್ದ ಎನ್ನಲಾಗಿದೆ. ರಾಜ್ಯಸರಕಾರ ಮತ್ತು ಸಚಿವರ ವಿರುದ್ದ ಮನಸ್ಸಿಗೆ ಬಂದಂತೆ ಮಾತನಾಡಿದ್ದ ಪರಿಣಾಮ ಕಾಂಗ್ರೆಸ್ ಕಾರ್ಯಕರ್ತರಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮೋಹಿತ್ ನರಸಿಂಹಮೂರ್ತಿ ವಿರುದ್ದ ಪ್ರಕರಣ ದಾಖಲಿಸಿದ್ದಾರೆ.

    ಚಿಕ್ಕಬಳ್ಳಾಪುರ ಲೋಕಾಸಭೆಗೆ ಸ್ಪರ್ಧೆ:

    ದಾಬಸ್‍ಪೇಟೆ ತಾಲೂಕು ನಲ್ಲೂರಿನ ಲೇ.ನರಸಿಂಹಮೂರ್ತಿಯ ಮಗನಾದ ಆರೋಪಿ ಮೋಹಿತ್ ನರಸಿಂಹಮೂರ್ತಿ 2024–25ನೇ ಸಾಲಿನಲ್ಲಿ ನಡೆದ ಲೋಕಸಭೆ ಚುನಾವಣೆಯಲ್ಲಿ ಚಿಕ್ಕಬಳ್ಳಾಪುರ ಕ್ಷೇತ್ರದಿಂದ ಕೊಳಲು ಚಿಹ್ನೆಯಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಟೇವಣಿ ಕಳೆದುಕೊಂಡಿದ್ದಾನೆ. ಪ್ರಸ್ತುತವು ಸಹ ಉತ್ತರಕಾಂಡದಲ್ಲಿ ಖಾಸಗಿ ಪಕ್ಷವೊಂದರ ಸಂಘಟಕನಾಗಿ ಗುರ್ತಿಸಿಕೊಂಡು ಪ್ರಚಾರದಲ್ಲಿ ನಿರತನಾಗಿದ್ದ ಎಂದು ತಿಳಿದುಬಂದಿದೆ.

    10 ಜಿಲ್ಲೆಗಳಲ್ಲಿ 15 ಪ್ರಕರಣ ದಾಖಲು:

    ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ತುಮಕೂರು, ಕೊರಟಗೆರೆ, ಮೈಸೂರು, ಕಲಬುರ್ಗಿ, ಶಿವಮೊಗ್ಗ, ಬೆಳಗಾವಿ, ಕೊಪ್ಪಳ, ರಾಯಚೂರು ಜಿಲ್ಲೆಗಳಲ್ಲಿ ಆರೋಪಿ ಮೊಹಿತ್ ನರಸಿಂಹಮೂರ್ತಿ ಮೇಲೆ ಭಾರತೀಯ ನಾಗರೀಕ ಸುರಕ್ಷಾ ಕಾಯ್ದೆಯಡಿ ಒಟ್ಟು 12 ಪ್ರಕರಣ  ದಾಖಲಾಗಿವೆ. ಇದಲ್ಲದೇ ಉತ್ತರಕಾಂಡದ ಚಾರದಾಮ ಯಾತ್ರೆ ಮಾಡಿಸುವ ಆಮಿಷವೊಡ್ಡಿ ಕರ್ನಾಟಕದ 10 ಜನ ಭಕ್ತರಿಗೆ ಪಂಗನಾಮ ಹಾಕಿರುವ ಹಿನ್ನೆಲೆ 3 ಕಡೆ ಮೋಸದ ಪ್ರಕರಣಗಳು ದಾಖಲಾಗಿವೆ.

    ಉತ್ತರಕಾಂಡ ರಾಜ್ಯದಲ್ಲಿ ಆರೋಪಿಯ ಬಂಧನ:

    ತುಮಕೂರು ಎಸ್ಪಿ ಅಶೋಕ್‍ ವೆಂಕಟ್ ಆದೇಶದ ಮೇಲೆ ತುಮಕೂರು ಸಿಬಿ ಬ್ರಾಂಚ್ ಸಿಪಿಐ ಅವಿನಾಶ್, ಸಿರಾ ಗ್ರಾಮಾಂತರ ಸಿಪಿಐ ರಾಘವೇಂದ್ರ, ಕೊರಟಗೆರೆ ಪಿಎಸೈ ಚೇತನ್ ಕುಮಾರ್, ಕ್ರೈಂ ಸಿಬ್ಬಂದಿಗಳಾದ ದೊಡ್ಡಲಿಂಗಪ್ಪ, ಸಿದ್ದರಾಮ ನೇತೃತ್ವದ 5 ಜನ ಪೊಲೀಸರ ತಂಡ 15 ಪ್ರಕರಣದ ಆರೋಪಿ ಮೋಹಿತ್ ನರಸಿಂಹಮೂರ್ತಿಯನ್ನು ಉತ್ತರಕಾಂಡ ರಾಜ್ಯದ ರುದ್ರಪ್ರಯಾಗ ಜಿಲ್ಲೆ ಚಮೋಲಿ ತಾಲೂಕಿನ ಉಕ್ಕಿಮಠದ ಟೀ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ವೇಳೆಯೇ ಬಂಧಿಸಿದ್ದಾರೆ.

    ತುಮಕೂರು ಎಸ್ಪಿ ಅಶೋಕ್‍ ವೆಂಕಟ್, ಎ ಎಸ್ಪಿ ಮರೀಯಪ್ಪ, ಮಧುಗಿರಿ ಡಿವೈಎಸ್ಪಿ ರಾಮಚಂದ್ರಪ್ಪ ಕೊರಟಗೆರೆಗೆ ಬೇಟಿ ನೀಡಿ ಹೆಚ್ಚಿನ ತನಿಖೆ ನಡೆಸಿದ್ದಾರೆ. ಕೊರಟಗೆರೆ ಸಿಪಿಐ ಅನಿಲ್, ಪಿಎಸೈ ಚೇತನ್ ಕುಮಾರ್ ನೇತೃತ್ವದ ತಂಡ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ನೀಡಿದ್ದಾರೆ. ಕೊರಟಗೆರೆ ಪೊಲೀಸ್ ಠಾಣೆಯಲ್ಲಿ ಆರೋಪಿ ಮೋಹಿತ್ ನರಸಿಂಹಮೂರ್ತಿ ವಿರುದ್ದ ಪ್ರಕರಣ ದಾಖಲಾಗಿದೆ.

    ಸಿಎಂ, ಡಿಸಿಎಂ, ಗೃಹ ಸಚಿವರು ಸೇರಿ 15ಕ್ಕೂ ಅಧಿಕ ಸಚಿವರ ಬಗ್ಗೆ ಮೊಹಿತ್ ನರಸಿಂಹಮೂರ್ತಿ ಎಂಬಾತ ವೈಯಕ್ತಿಕ ತೇಜೋವಧೆಯಾ ವಿಡೀಯೊ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟು ಉತ್ತರಕಾಂಡಕ್ಕೆ ಪರಾರಿ ಆಗಿದ್ದಾನೆ. ಸರಕಾರದ ಘನತೆಗೆ ದಕ್ಕೆ ಮತ್ತು ಅವಾಚ್ಯ ಶಬ್ದ ಬಳಕೆ ಮಾಡಿದ್ದ ತಪ್ಪು. ನಾನು ದೂರು ನೀಡಿದ ತಕ್ಷಣವೇ ಕೊರಟಗೆರೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಿದ್ದಾರೆ.

    –  ಅರಕೆರೆ ಶಂಕರ್. ಬ್ಲಾಕ್‍  ಕಾಂಗ್ರೆಸ್ ಅಧ್ಯಕ್ಷ, ಕೊರಟಗೆರೆ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    ಕೊರಟಗೆರೆ: ಶುದ್ಧ ಕುಡಿಯುವ ನೀರಿನ ಘಟಕಕ್ಕೆ ಸಚಿವ ವಿ.ಸೋಮಣ್ಣ ಶಂಕುಸ್ಥಾಪನೆ

    April 13, 2026

    ಮನೆ ಮುಂದೆ ನಿಲ್ಲಿಸಿದ್ದ ವಾಹನಗಳಿಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: ಕಾರು, ಬೈಕ್ ಗಳು ಸುಟ್ಟು ಭಸ್ಮ

    April 12, 2026

    ಎನ್‌ ಎಸ್‌ ಎಸ್ ವಿದ್ಯಾರ್ಥಿಗಳು ನಾಯಕತ್ವ ಮನೋಭಾವ ಬೆಳೆಸಿಕೊಳ್ಳಿ: ಈರಪ್ಪ ನಾಯಕ

    April 12, 2026

    Comments are closed.

    Our Picks

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಸಚಿವ ಸ್ಥಾನಕ್ಕೆ ಪಟ್ಟು: ಹೈಕಮಾಂಡ್ ಭೇಟಿಗೆ ದೆಹಲಿಗೆ ತೆರಳಿದ 25ಕ್ಕೂ ಹೆಚ್ಚು ಕಾಂಗ್ರೆಸ್ ಶಾಸಕರು

    April 13, 2026

    ಬೆಂಗಳೂರು: ಕರ್ನಾಟಕದಲ್ಲಿ ಸಚಿವ ಸಂಪುಟ ಪುನರ್‌ ರಚನೆಗೆ ಆಗ್ರಹಿಸಿ ಕಾಂಗ್ರೆಸ್‌ ನ ಸುಮಾರು 25ಕ್ಕೂ ಹೆಚ್ಚು ಹಿರಿಯ ಶಾಸಕರ ತಂಡ…

    ಪುರುಷರಿಗೂ ‘ಶಕ್ತಿ’ ಟಿಕೆಟ್ ನೀಡಿ ಹಣ ಲೂಟಿ; ಐವರು ಕಂಡಕ್ಟರ್‌ ಗಳ ಅಮಾನತು

    April 13, 2026

    ಗುಬ್ಬಿ ತಾಲೂಕಿನಲ್ಲಿ ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ಸಮರೋಪಾದಿ ಕ್ರಮ: ಶಾಸಕ ಎಸ್.ಆರ್.ಶ್ರೀನಿವಾಸ್

    April 13, 2026

    ಕೊರಟಗೆರೆ: ಶುದ್ಧ ಕುಡಿಯುವ ನೀರಿನ ಘಟಕಕ್ಕೆ ಸಚಿವ ವಿ.ಸೋಮಣ್ಣ ಶಂಕುಸ್ಥಾಪನೆ

    April 13, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.