ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಸ್ಥಾನದಿಂದ ಸಿ.ಎಂ.ಇಬ್ರಾಹಿಂ ಅವರನ್ನು ಉಚ್ಚಾಟಿಸಿರುವ ಪ್ರಕರಣ ಸಂಂಬಂಧ ಹೈಕೋರ್ಟ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ದೇವೇಗೌಡ ಮತ್ತು ಎಚ್.ಡಿ.ಕುಮಾರಸ್ವಾಮಿ ಅವರಿಗೆ ನೋಟಿಸ್ ಜಾರಿಗೊಳಿಸಿದೆ.
ತಮ್ಮನ್ನು ಉಚ್ಚಾಟಿಸಿರುವ ಮತ್ತು ಅಧ್ಯಕ್ಷ ಹುದ್ದೆಗೆ ತಾತ್ಕಾಲಿಕವಾಗಿ ಎಚ್.ಡಿ. ಕುಮಾರಸ್ವಾಮಿ ಅವರನ್ನು ನೇಮಿಸಿರುವ ಕ್ರಮ ಪ್ರಶ್ನಿಸಿದ್ದ, ಮೂಲ ದಾವೆ ತಿರಸ್ಕರಿಸಿದ್ದ ನಗರದ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯದ ಆದೇಶ ರದ್ದು ಕೋರಿ ಸಿ.ಎಂ. ಇಬ್ರಾಹಿಂ ಸಲ್ಲಿಸಿದ್ದ ಮೇಲ್ಮನವಿಯನ್ನು ನ್ಯಾ.ಸಿ.ಎಂ. ಪೂಣಚ್ಚ ಅವರಿದ್ದ ನ್ಯಾಯಪೀಠದ ವಿಚಾರಣೆ ನಡೆಸಿತು. ಕೆಲ ಕಾಲ ವಾದ-ಪ್ರತಿವಾದ ಆಲಿಸಿದ ನ್ಯಾಯಪೀಠ, ಮೇಲ್ಮನವಿಯಲ್ಲಿ ಪ್ರತಿವಾದಿಗಳಿಗೆ ನೋಟಿಸ್ ಜಾರಿಗೊಳಿಸಿ ವಿಚಾರಣೆ ಮುಂದೂಡಿತು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296