ಕಾಡಿನಲ್ಲಿ ಆನೆಗಳಿಗೆ ಮೇವು ಹಾಗೂ ನೀರು ಒದಗಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಆನೆಗಳಿಗೆ ಮೇವು ಹಾಗೂ ನೀರನ್ನು ಕಾಡಿನಲ್ಲಿಯೇ ಒದಗಿಸಿಕೊಡಲು ಅರಣ್ಯ ಇಲಾಖೆಗೆ ಸ್ಪಷ್ಟ ಸೂಚನೆ ನೀಡಿದ್ದೇನೆ.
ಇದರಿಂದಾಗಿ ಆನೆಗಳು ಕಾಡಿನಿಂದ ಊರಿನ ಕಡೆಗೆ ಬರುವುದು ಕಡಿಮೆಯಾಗುತ್ತದೆ ಎಂದು ಹೇಳಿದರು. ಈ ಬಾರಿ ರೈಲ್ವೆ ತಡೆಗೋಡೆ ನಿರ್ಮಾಣಕ್ಕೆ 600 ಕೋಟಿ ಮೀಸಲಿಡಲಾಗಿದೆ. ಪೂರ್ಣವಾಗಿ ತಡೆಗೋಡೆ ನಿರ್ಮಾಣವಾದರೆ ಆನೆ – ಮಾನವ ಸಂಘರ್ಷ ನಿಲ್ಲಲಿದೆ ಎಂದರು.


