ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಕಾಲದಲ್ಲಿ ಯಾವುದೇ ಭ್ರಷ್ಟಾಚಾರ ನಡದೇ ಇಲ್ಲ ಅಂತ ಹೇಳಿದ್ದಾರೆ. ಅವರ ಅವಧಿಯಲ್ಲಿ ಯಾವುದೇ ಭ್ರಷ್ಟಾಚಾರ ನಡೆಯದಿದ್ದರೆ 2013 ರಿಂದ ಎಲ್ಲ ಪ್ರಕರಣಗಳ ಬಗ್ಗೆ ತನಿಖೆ ನಡೆಸಲಿ ಎಂದು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸವಾಲು ಹಾಕಿದ್ದಾರೆ.
ಶುಕ್ರವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರ ಕಾಲದಲ್ಲಿ ಭ್ರಷ್ಟಾಚಾರ ನಡೆದಿರದಿದ್ದರೆ ನ್ಯಾಯಾಂಗ ಆಯೋಗ ಯಾಕೆ ರಚನೆ ಆಯಿತು. ಎಸಿಬಿ ಮಾಡಿದ್ದೇ ಭ್ರಷ್ಟಾಚಾರ ಮುಚ್ಚಿ ಹಾಕಲು. ಇದು ಇಡಿ ಜಗತ್ತಿಗೆ ಗೊತ್ತು ಎಂದು ಹೇಳಿದರು.
ಸಣ್ಣ ನೀರಾವರಿ, ದೊಡ್ಡ ನೀರಾವರಿ ಎಲ್ಲದರಲ್ಲೂ ಭ್ರಷ್ಟಾಚಾರ ನಡೆದಿದೆ. ಅವರಿಗೆ ಭಯ ಇಲ್ಲದಿದ್ದರೆ 2013 ರಿಂದ ಎಲ್ಲ ಪ್ರಕರಣಗಳನ್ನು ತನಿಖೆಗೆ ವಹಿಸಲಿ, ಅವರಿಗೆ ಭ್ರಷ್ಟಾಚಾರದ ಪ್ರಕರಣದಲ್ಲಿ ಸಿಲುಕಿಕೊಳ್ಳುವ ಭಯ ಇದೆ. ಯಡಿಯೂರಪ್ಪ ಅವರು ತಮ್ಮ ಕಾಲದ ಅವಧಿಯ ಅಕ್ರಮ ಗಣಿಗಾರಿಕೆಯ ಪ್ರಕರಣಗಳನ್ನು ತನಿಖೆಗೆ ನೀಡಿದ್ದರು ಎಂದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


