ಬೆಂಗಳೂರು: ಪ್ರಜ್ವಲ್ ರೇವಣ್ಣ ಪ್ರಕರಣವನ್ನು ತನಿಖೆ ನಡೆಸಿದ ವಿಶೇಷ ತನಿಖಾ ತಂಡಕ್ಕೆ ಸಿಎಂ ಪದಕ ನೀಡುತ್ತೇವೆ. ರಾಷ್ಟ್ರಪತಿ ಪದಕಕ್ಕೂ ಶಿಫಾರಸು ಮಾಡ್ತೇವೆ ಎಂದು ಗೃಹ ಸಚಿವ ಪರಮೇಶ್ವರ್ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪೊಲೀಸರು ಮೊದಲಿಂದಲೂ ಅಚ್ಚುಕಟ್ಟಾಗಿ ತನಿಖೆ ಮಾಡಿದ್ದಾರೆ. ಮೊದಲು ಎ ಸ್‌ಐಟಿಗೆ ಅಭಿನಂದನೆ ಹೇಳ್ತೇನೆ ಎಂದರು.
ಇದು ಐತಿಹಾಸಿಕ ತೀರ್ಪು. ನ್ಯಾಯಾಲಯಕ್ಕೆ ನಮ್ಮ ಎಸ್‌ಐಟಿ ಎಲ್ಲಾ ದಾಖಲೆಯನ್ನು ಕೊಟ್ಟಿತ್ತು ಪೊಲೀಸರು ಬೇಗ ತನಿಖೆ ಮುಗಿಸಿದ್ದಾರೆ, ಅಭಿನಂದನೆ ಸಲ್ಲಿಸುತ್ತೇನೆ. ಪ್ರಜ್ವಲ್ ರೇವಣ್ಣ ಕೇಸನ್ನು ರಾಜಕೀಯ ದೃಷ್ಟಿಯಿಂದ ನೋಡಬಾರದು. ಪೊಲೀಸರ ಶ್ರಮಕ್ಕೆ ಸರ್ಕಾರ ಪ್ರಶಂಸೆ ಮಾಡುತ್ತೆ ಎಂದು ಹೇಳಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC