ಬೆಂಗಳೂರು: ಮುಡಾ ಹಗರಣ ಸಂಬಂಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದಾರೆ. ಈ ನಡುವೆ ಸಿಎಂ ಸಿದ್ದರಾಮಯ್ಯ ರಾಜ್ಯ ಸರ್ಕಾರಿ ನೌಕರರ ಸಂಘದ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ.
ಬೆಂಗಳೂರಿನ ಅರಮನೆ ಮೈದಾನದಲ್ಲಿರುವ ತ್ರಿಪುರವಾಸಿನಿಯಲ್ಲಿ ರಾಜ್ಯ ಸರ್ಕಾರಿ ನೌಕರರ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಭಾಗಿಯಾಗಿದ್ದಾರೆ.
7 ನೇ ವೇತನ ಆಯೋಗ ಜಾರಿ ಮಾಡಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರಿ ನೌಕರರು ಇಂದು ನಮ್ಮಭಿಮಾನ ಅಭಿನಂದನೆ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ಹೀಗಾಗಿ ಸಿಎಂ ಸಿದ್ದರಾಮಯ್ಯ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ.
ಸಿಎಂ ಸಿದ್ದರಾಮಯ್ಯ ವೇದಿಕೆಗೆ ಬರುತ್ತಿದ್ದಂತೆಯೇ ಜೋರಾಗಿ ಕೂಗಿ ರಾಜ್ಯ ಸರ್ಕಾರಿ ನೌಕರರು ಸಂಭ್ರಮಿಸಿ ಸ್ವಾಗತ ಕೋರಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q