ಬೆಂಗಳೂರು: ಕರ್ನಾಟಕ ಒಲಂಪಿಕ್ ಸಂಸ್ಥೆ (KOA) ವತಿಯಿಂದ ಬೆಂಗಳೂರಿನಲ್ಲಿ ಆಯೋಜಿಸಲಾಗಿದ್ದ ‘ಕರ್ನಾಟಕ ಒಲಂಪಿಕ್ 2025’ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪಾಲ್ಗೊಂಡು ಕ್ರೀಡಾ ಸಾಧಕರನ್ನು ಅಭಿನಂದಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಕ್ರೀಡಾ ಕ್ಷೇತ್ರಕ್ಕೆ ರಾಜ್ಯ ಸರ್ಕಾರ ನೀಡುತ್ತಿರುವ ಅಭೂತಪೂರ್ವ ಬೆಂಬಲದ ಕುರಿತು ಮಾಹಿತಿ ಹಂಚಿಕೊಂಡರು.
ಒಲಂಪಿಕ್ಸ್‌ನಲ್ಲಿ ಚಿನ್ನದ ಪದಕ ಗೆಲ್ಲುವ ರಾಜ್ಯದ ಕ್ರೀಡಾಪಟುಗಳಿಗೆ 6 ಕೋಟಿ ರೂ., ಬೆಳ್ಳಿ ಪದಕಕ್ಕೆ 4 ಕೋಟಿ ರೂ. ಹಾಗೂ ಕಂಚಿನ ಪದಕಕ್ಕೆ 3 ಕೋಟಿ ರೂ. ನಗದು ಬಹುಮಾನವನ್ನು ಸರ್ಕಾರ ಘೋಷಿಸಿದೆ. ಕ್ರೀಡಾಪಟುಗಳ ಭವಿಷ್ಯದ ದೃಷ್ಟಿಯಿಂದ ಸರ್ಕಾರಿ ಉದ್ಯೋಗದಲ್ಲಿ ಮೀಸಲಾತಿಯನ್ನು ಕಲ್ಪಿಸಲಾಗಿದೆ. ಪೊಲೀಸ್ ಮತ್ತು ಅರಣ್ಯ ಇಲಾಖೆಯಲ್ಲಿ ಶೇ. 3ರಷ್ಟು ಹಾಗೂ ಇತರ ಇಲಾಖೆಗಳಲ್ಲಿ ಶೇ. 2ರಷ್ಟು ಮೀಸಲಾತಿ ನೀಡಲಾಗುತ್ತಿದ್ದು, ಇದರ ನೇಮಕಾತಿಗೆ ಸಂಬಂಧಿಸಿದ ಸರ್ಕಾರಿ ಆದೇಶವು ಜನವರಿಯಲ್ಲಿ ಹೊರಬೀಳಲಿದೆ ಎಂದು ತಿಳಿಸಿದರು.
1958ರಲ್ಲಿ ಸ್ಥಾಪನೆಯಾದ ಕರ್ನಾಟಕ ಒಲಂಪಿಕ್ ಸಂಸ್ಥೆಯು ಎಂ.ಎಲ್.ಸಿ ಗೋವಿಂದರಾಜ್ ಅವರ ಅಧ್ಯಕ್ಷತೆಯಲ್ಲಿ ಅತ್ಯಂತ ಕ್ರಿಯಾಶೀಲವಾಗಿ ಕಾರ್ಯನಿರ್ವಹಿಸುತ್ತಿದೆ. ಆಂಧ್ರಪ್ರದೇಶ ಮತ್ತು ಕೇರಳದಂತೆ ಕರ್ನಾಟಕವು ಸಹ ಸ್ವಂತ ಕಟ್ಟಡದಲ್ಲಿ ಒಲಂಪಿಕ್ ಸಂಸ್ಥೆಯನ್ನು ಹೊಂದಿದೆ ಎಂಬುದು ಹೆಮ್ಮೆಯ ವಿಷಯ. “ಕಠಿಣ ಪರಿಶ್ರಮ ಮತ್ತು ಗುರಿ ಸಾಧಿಸುವ ಛಲವಿದ್ದರೆ ಕನ್ನಡಿಗರು ಒಲಂಪಿಕ್ಸ್‌ನಲ್ಲಿ ಪದಕ ಗೆಲ್ಲಲು ಸಾಧ್ಯ. ಕ್ರೀಡಾಸ್ಪೂರ್ತಿಯೇ ಜೀವನದ ಧ್ಯೇಯವಾಗಲಿ” ಎಂದು ಯುವಜನತೆಗೆ ಕರೆ ನೀಡಿದರು. ಸರ್ಕಾರದ ಈ ಕ್ರಮಗಳು ರಾಜ್ಯದ ಕ್ರೀಡಾ ಲೋಕಕ್ಕೆ ಹೊಸ ಚೈತನ್ಯ ನೀಡಲಿವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


