ಬೆಂಗಳೂರು: ದೇಶಾದ್ಯಂತ ಎಸಿಪಿ, ಟಿಎಸ್‌ಪಿ ಕಾನೂನುಗಳನ್ನು ಜಾರಿಗೆ ಮಾಡಿದರೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಮೊದಲಿಗನಾಗಿ ನಾನು ಧನ್ಯವಾದ ಹೇಳುತ್ತೇನೆ ಅಂತ ಸಿಎಂ ಸಿದ್ದರಾಮಯ್ಯ ಸವಾಲು ಹಾಕಿದ್ದಾರೆ.
ಅಂಬೇಡ್ಕರ್ ಜಯಂತಿಯಲ್ಲಿ ಮಾತನಾಡಿದ ಅವರು, ದೇಶದಲ್ಲೇ ಆಂಧ್ರಪ್ರದೇಶ ಹೊರತುಪಡಿಸಿದರೆ ಕರ್ನಾಟಕ ಸರ್ಕಾರ ಎರಡನೆಯದಾಗಿ ಎಸ್ ಸಿಪಿ, ಟಿಎಸ್ ಪಿ ಜಾರಿಗೆ ತಂದಿದೆ. ಜನಸಂಖ್ಯೆಗನುಗುಣವಾಗಿ ಹಣ ಬಳಕೆ ಮಾಡುತ್ತಿದ್ದೇವೆ. ಇದನ್ನು ಮರೆಮಾಚಲು ಬಿಜೆಪಿಯವರು ಪರಿಶಿಷ್ಟರ ಅಭಿವೃದ್ಧಿಗೆ ಹಣವನ್ನು ಬೇರೆ ರೀತಿ ವರ್ಗಾವಣೆ ಮಾಡಲಾಗಿದೆ ಎಂದು ಟೀಕೆ ಮಾಡುತ್ತಿದ್ದಾರೆ. ಇಂತಹ ಹೇಳಿಕೆಗಳನ್ನು ನೀಡಲು ಬಿಜೆಪಿಯವರಿಗೆ ನಾಚಿಕೆಯಾಗಬೇಕು ಎಂದರು.
ಬಿಜೆಪಿ ಆಡಳಿತದಲ್ಲಿರುವ ಯಾವ ರಾಜ್ಯದಲ್ಲಿ ಎಸ್ ಸಿಪಿ, ಟಿಎಸ್ ಪಿ ಕಾಯ್ದೆಯಿಲ್ಲ, ಟೀಕೆ ಮಾಡುವ ಬಿಜೆಪಿಯು ಕೇಂದ್ರದಲ್ಲಿ ಕೇಂದ್ರದಲ್ಲಿ ಎಸ್ ಸಿಪಿ, ಟಿಎಸ್ ಪಿಯನ್ನು ಜಾರಿಗೊಳಿಸಲಿ ಎಂದು ಸವಾಲು ಹಾಕಿದರು.
ಕಾರ್ಯಕ್ರಮದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಸಚಿವರಾದ ಎಚ್.ಸಿ.ಮಹದೇವಪ್ಪ, ಕೆ.ಎಚ್.ಮುನಿಯಪ್ಪ, ಶಾಸಕರಾದ ರಿಜ್ವಾನ್ ಹರ್ಷದ್, ಪಿ.ಎಂ.ನರೇಂದ್ರಸ್ವಾಮಿ ಮತ್ತಿತರರಿದ್ದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW