ಬೆಂಗಳೂರು: ನಗರದಲ್ಲಿ ವಿಧ್ವಂಸಕ ಕೃತ್ಯವೆಸಗಲು ಸಂಚು ರೂಪಿಸಿದ್ದ ಐವರು ಶಂಕಿತ ಉಗ್ರರನ್ನು ಬಂಧಿಸುವ ಮೂಲಕ ಸಂಭವಿಸಬಹುದಾಗಿದ್ದ ಭಾರೀ ಅನಾಹುತವನ್ನು ವಿಫಲಗೊಳಿಸಿರುವ ರಾಜ್ಯದ ಸಿಸಿಬಿ ಪೊಲೀಸರಿಗೆ ಸಿಎಂ ಸಿದ್ದರಾಮಯ್ಯ ನವರು ಟ್ವೀಟ್ ಮೂಲಕ ಅಭಿನಂದನೆಗಳು ತಿಳಿಸಿದ್ದಾರೆ.
ಭಯೋತ್ಪಾದಕ ಚಟುವಟಿಕೆಗಳು ಸೇರಿದಂತೆ ಯಾವುದೇ ತೆರನಾದ ದೇಶವಿರೋಧಿ ಚಟುವಟಿಗಳಲ್ಲಿ ತೊಡಗಿರುವವರನ್ನು ಪತ್ತೆಹಚ್ಚಿ, ಬೇರು ಸಮೇತ ಅಂತಹ ಶಕ್ತಿಗಳನ್ನು ರಾಜ್ಯದಿಂದ ಕಿತ್ತೊಗೆಯಲು ನಾವು ಸದಾ ಸಿದ್ಧರಿದ್ದೇವೆ. ನಾಡಿನ ಪ್ರತಿಯೊಬ್ಬರೂ ಸುರಕ್ಷತೆಯ ಬದುಕು ನೀಡಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


