ಬೆಂಗಳೂರಿನ ಪ್ರೆಸ್ ಕ್ಲಬ್ ಆಫ್, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಪತ್ರಿಕಾ ದಿನಾಚರಣೆ ಮತ್ತು ವಿಚಾರ ಸಂಕಿರಣವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಿದರು. ಮಹಾತ್ಮ ಗಾಂಧಿ, ಅಂಬೇಡ್ಕರ್ ಅವರೂ ಪತ್ರಕರ್ತರಾಗಿ ಪತ್ರಿಕಾ ವೃತ್ತಿಗೆ ಮಾದರಿ ರೂಪಿಸಿಕೊಟ್ಟಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಹೇಳಿದ್ದಾರೆ.
ಧ್ವನಿ ಇಲ್ಲದವರಿಗೆ ಧ್ವನಿ ನೀಡುವುದೇ ಪತ್ರಿಕಾ ವೃತ್ತಿಯ ಉದ್ದೇಶ, ಆಶಯ, ಜವಾಬ್ದಾರಿಯಾಗಿದೆ ಎಂದರು. ಇವತ್ತಿನ ಬಹಳಷ್ಟು ಪತ್ರಕರ್ತರು ಪತ್ರಿಕಾ ವೃತ್ತಿಯ ಆಶಯಕ್ಕೆ ತಕ್ಕಂತೆ ಇದ್ದೇವಾ? ಇಲ್ಲವಾ? ಎನ್ನುವ ಆತ್ಮಾವಲೋಕನ ಮಾಡಿಕೊಳ್ಳುವ ಅಗತ್ಯ ಇದೆ ಎಂದು ಹೇಳಿದರು.
ಇದೇ ಸಂದರ್ಭದಲ್ಲಿ ಹಿರಿಯ ಪತ್ರಕರ್ತರಾದ ಪಿ. ರಾಮಯ್ಯ, ಡಾ. ಆರ್. ಪೂರ್ಣಿಮಾ, ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ. ವಿ. ಪ್ರಭಾಕರ್, ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಶಿವಾನಂದ ತಗಡೂರು, ಪ್ರೆಸ್ ಕ್ಲಬ್ ಅಧ್ಯಕ್ಷರಾದ ಆರ್. ಶ್ರೀಧರ್, ಪ್ರಧಾನ ಕಾರ್ಯದರ್ಶಿ ಮಲ್ಲಪ್ಪ, ಹಿರಿಯ ಪತ್ರಕರ್ತರು ಹಾಗೂ ಈ-ದಿನ ಸುದ್ದಿ ಸಂಸ್ಥೆಯ ಮುಖ್ಯಸ್ಥರಾದ ಡಿ. ಉಮಾಪತಿ, ಸುವರ್ಣ ನ್ಯೂಸ್ ಪ್ರಧಾನ ಸಂಪಾದಕರಾದ ರವಿ ಹೆಗಡೆ, ವಾರ್ತಾ ಇಲಾಖೆ ಆಯುಕ್ತರಾದ ಡಾ. ಹೇಮಂತ್ ಎಂ ನಿಂಬಾಳರ್ ಅವರು ಸೇರಿದಂತೆ ಹಲವು ಗಣ್ಯರು ಸಮಾರಂಭದಲ್ಲಿ ಉಪಸ್ಥಿತರಿದ್ದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


