ಬೀದರ್: ಜಿಲ್ಲೆಯ ಕೊಟ್ಟ ಮಾತಿನಂತೆ ಸಿಎಂ ಸಿದ್ದರಾಮಯ್ಯನವರು ಆ.16 ರಂದು ಒಳಮೀಸಲಾತಿ ಜಾರಿ ಮಾಡಬೇಕು ಎಂದು ಮಾದಿಗ ಸಮಾಜದ ಯುವ ಮುಖಂಡ ಸುಧಾಕರ ಕೋಟೆ ಒತ್ತಾಯಿಸಿದ್ದಾರೆ.
ಸುಮಾರು 30ರಿಂದ 35 ವರ್ಷಗಳಿಂದ ಒಳಮೀಸಲಾತಿ ಜಾರಿಗಾಗಿ ನಮ್ಮ ಹಿರಿಯರು ನಿರಂತರವಾಗಿ ಹೋರಾಟ ಮಾಡಿದರೂ, ಜಾರಿ ಮಾಡಲು ಹಿಂದೇಟು ಹಾಕುತ್ತಿದ್ದಾರೆ. ಒಳಮೀಸಲಾತಿ ಜಾರಿ ಮಾಡಬೇಕು ಎಂದು ಆಗ್ರಹಿಸಿದರು
ಸಿಎಂ ಸಿದ್ದರಾಮಯ್ಯ ಮಾದಿಗರ ವಿರೋಧಿ, ದಲಿತ ವಿರೋಧಿ ಎಂದು ಆಕ್ರೋಶ ವ್ಯಕ್ತಪಡಿಸಿದ ಅವರು, ರಾಜ್ಯ ಸರ್ಕಾರ ಒಳಮೀಸಲಾತಿ ಜಾರಿಗೆ ಹಿಂದೇಟು ಹಾಕುತ್ತಿದೆ. ಸುಮಾರು 35 ವರ್ಷಗಳಿಂದ ಮಾದಿಗ ಸಮುದಾಯದಿಂದ ಹೋರಾಟ ನಡೆಸುತ್ತಿದೆಯಾದರೂ ಇನ್ನೂ ನ್ಯಾಯ ಸಿಕ್ಕಿಲ್ಲ, ಒಳಮೀಸಲಾತಿ ಜಾರಿ ಮಾಡಿ ಇಲ್ಲವೇ ಕುರ್ಚಿ ಖಾಲಿ ಮಾಡಿ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಒಳಮೀಸಲಾತಿ ಜಾರಿ ಮಾಡಬೇಕು, ಸುಪ್ರೀಂಕೋರ್ಟ್ ಆದೇಶ ಪಾಲಿಸದ ಸರ್ಕಾರ ದಲಿತರ ಪಾಲಿಗೆ ಸತ್ತಿದೆ ಎಂದು ಸುಧಾಕರ ಕೋಟೆ ಆಕ್ರೋಶ ವ್ಯಕ್ತಪಡಿಸಿದರು.
ವರದಿ: ಅರವಿಂದ ಮಲ್ಲಿಗೆ, ಬೀದರ್
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC