ಬೆಂಗಳೂರು: ಜಾತಿ ಜನಗಣತಿಯ ವರದಿಯನ್ನು ಸಚಿವ ಸಂಪುಟ ಸಭೆಯಲ್ಲಿ ಮಂಡಿಸುವ ಮೂಲಕ ರಾಜಕೀಯ ಎದುರಾಳಿಗಳಿಗೆ ಠಕ್ಕರ್ ನೀಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಮುಂದಾಗಿದ್ದಾರೆ.
ವಿಧಾನಸೌಧದಲ್ಲಿ ಹಿಂದುಳಿದ ವರ್ಗಗಳ ಸಚಿವರು, ಶಾಸಕರೊಂದಿಗೆ ಮಹತ್ವದ ಸಭೆ ನಡೆಸಿದ ಸಿಎಂ ಸಿದ್ದರಾಮಯ್ಯ, 2015 ರಲ್ಲಿ ಹಿಂದುಳಿದ ವರ್ಗಗಳ ಶಾಶ್ವತ ಆಯೋಗದಿಂದ ನಡೆಸಲಾದ ಸಾಮಾಜಿಕ ಮತ್ತು ಶೈಕ್ಷಣಿಕ ವರದಿಯ ಕುರಿತು ಅಭಿಪ್ರಾಯ ಸಂಗ್ರಹಿಸಿದರು.
ಸಚಿವ ಎನ್.ಎಸ್.ಬೋಸರಾಜ್, ಭೈರತಿ ಸುರೇಶ್, ಬಿಜೆಪಿಯ ವಿಧಾನಪರಿಷತ್ ಸದಸ್ಯ ರವಿಕುಮಾರ್, ಕಾಂಗ್ರೆಸ್ನ ಶಾಸಕರಾದ ಬಿ.ಕೆ.ಹರಿಪ್ರಸಾದ್, ಅಜಯ್‌ಸಿಂಗ್, ಎಂ.ಆರ್.ಸೀತಾರಾಮ್, ಬಿ.ಜಿ.ಗೋವಿಂದಪ್ಪ, ಶ್ರೀನಿವಾಸ್, ಬೇಳೂರು ಗೋಪಾಲ್‌ಕೃಷ್ಣ, ಗವಿಯಪ್ಪ, ನಾಗರಾಜ್ ಯಾದವ್, ರಾಘವೇಂದ್ರ ಹಿಟ್ನಾಳ್ ಸೇರಿದಂತೆ ಹಲವಾರು ಶಾಸಕರು, ವಿಧಾನಪರಿಷತ್ ಸದಸ್ಯರು ಸಭೆಯಲ್ಲಿ ಪಾಲ್ಗೊಂಡಿದ್ದರು.
ನಂತರ ಮುಖ್ಯಮಂತ್ರಿಯವರು ಹಿಂದುಳಿದ ವರ್ಗಗಳ ಮುಖಂಡರ ಜೊತೆಗೂ ಚರ್ಚೆ ನಡೆಸಿದ್ದಾರೆ. ಈ ಹಿಂದೆ ಸಮೀಕ್ಷೆ ನಡೆಸಿದ್ದ ಕಾಂತರಾಜು ನೇತೃತ್ವದ ಆಯೋಗ ಹಾಗೂ ಇತ್ತೀಚೆಗೆ ವರದಿಯನ್ನು ಕ್ರೂಢೀಕರಿಸಿ ಸರ್ಕಾರಕ್ಕೆ ಅಧಿಕೃತವಾಗಿ ವರದಿ ಸಲ್ಲಿಸಿದ್ದ ಜಯಪ್ರಕಾಶ್ ಹೆಗ್ಡೆ, ಹಿಂದುಳಿದ ವರ್ಗಗಳ ಮಾಜಿ ಅಧ್ಯಕ್ಷ ಸಿ.ಎಸ್.ದ್ವಾರಕಾನಾಥ್, ಮುಖ್ಯಮಂತ್ರಿಯವರ ಕಾನೂನು ಸಲಹೆಗಾರ ಎ.ಎಸ್.ಪೊನ್ನಣ್ಣ, ವಿಧಾನಪರಿಷತ್ನ ಮಾಜಿ ಸದಸ್ಯರಾದ ಎಚ್.ಎಂ.ರೇವಣ್ಣ, ವಿ.ಆರ್.ಸುದರ್ಶನ್ ಸೇರಿದಂತೆ ಹಲವರು ಸಭೆಯಲ್ಲಿ ಭಾಗವಹಿಸಿದ್ದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296