ಬೆಂಗಳೂರು: ಅನಾರೋಗ್ಯ ನಿಮಿತ್ತ ವಿದೇಶದಲ್ಲಿ ಶಸ್ತ್ರಚಿಕಿತ್ಸೆಗೆ ಪಡೆದು ಗುಣಮುಖರಾಗಿ ಬಂದಿರುವ ಚಿತ್ರರಂಗದ ಖ್ಯಾತ ನಟ ಶಿವರಾಜ್ ಕುಮಾರ್ ಅವರನ್ನು ಸಿಎಂ ಸಿದ್ದರಾಮಯ್ಯ ಭೇಟಿಯಾಗಿ, ಆರೋಗ್ಯ ವಿಚಾರಿಸಿದರು.
ಭೇಟಿ ವಿಚಾರ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ಸಿದ್ದರಾಮಯ್ಯ, ಶಿವರಾಜ್ ಕುಮಾರ್ ಅವರು ಮತ್ತೆ ಹಿಂದಿನಂತೆ ಕ್ರಿಯಾಶೀಲರಾಗಿರುವುದು ಕಂಡು ಖುಷಿಯಾಯಿತು ಎಂದು ಹೇಳಿದ್ದಾರೆ.
ಅಭಿಮಾನಿಗಳ ಹರಕೆ — ಹಾರೈಕೆ, ಆತ್ಮಬಲದಿಂದ ಅನಾರೋಗ್ಯವನ್ನು ಗೆದ್ದು ಬಂದಿರುವ ಶಿವರಾಜ್ ಕುಮಾರ್ ಅವರ ಮುಂದಿನ ಜೀವನ ಸುಖ — ಶಾಂತಿಯಿಂದ ಕೂಡಿರಲಿ ಎಂದು ಹಾರೈಸುತ್ತೇನೆ ಎಂದು ಸಿಎಂ ಹೇಳಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx