ಚುಣಾವಣಾ ಪ್ರಚಾರ ಮೆರವಣಿಗೆಯಲ್ಲಿ ಕಾಂಗ್ರೆಸ್ ವಿರುದ್ಧವೇ ಸಿಎಂ ಮಾತನಾಡಿದ್ದು ಈಗ ಎಲ್ಲೆಡೆ ವೈರಲ್ ಆಗುತ್ತಿದೆ. ಸಾಕಷ್ಟು ಬಾರಿ ರಾಜಕೀಯ ನಾಯಕರು ಮಾತನಾಡುವಾಗ ಇಲ್ಲಾ, ಭಾಷಣ ಮಾಡುವಾಗ ಮಾತಿನ ಭರದಲ್ಲಿ ವಿರುದ್ಧವಾದ ಹೇಳಿಕೆ ನೀಡಿ ವಿವಾದಕ್ಕೆ ಕಾರಣವಾಗುವುದು ಸಾಮಾನ್ಯ.
ಆದರೆ ಸಿದ್ದರಾಮಯ್ಯ ಈ ಹಿಂದೆ ಬಿಜೆಪಿಗೆ ಓಟ್ ಹಾಕಿ ಎಂದು ಹೇಳಿ ಯಡವಟ್ಟು ಮಾಡಿಕೊಂಡಿದ್ದರು. ಈಗ ಮತ್ತೊಂದು ಎಡವಟ್ಟು ಮಾಡಿಕೊಂಡಿದ್ದು, ತಮ್ಮ ಮಾತಿನ ಭರದಲ್ಲಿ ‘ಕಾಂಗ್ರೆಸ್ ಕೆಲಸ ಮಾಡಲ್ಲ, ನುಡಿದಂತೆ ನಡೆಯಲ್ಲ’ ಎಂದು ಹೇಳಿದ್ದಾರೆ.
ಜಿಲ್ಲೆಯ ಮುಳಬಾಗಿಲಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೌತಮ್ ಪರ ಪ್ರಚಾರ ವೇಳೆ ಮಾತನಾಡಿದ ಸಿದ್ದರಾಮಯ್ಯ, “ಕಾಂಗ್ರೆಸ್ ನುಡಿದಂತೆ ನಡೆಯಲ್ಲ’ ಎಂದು ಹೇಳಿದ್ದಾರೆ. ಬಳಿಕ ಮತ್ತೆ ನುಡಿದಂತೆ ನಡೆದಿದ್ದೇವೆ” ಎಂದು ಸರಿಪಡಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296