ಬೆಂಗಳೂರು: ವಿರೋಧ ಪಕ್ಷಗಳಿಗೆ ಸೆಡ್ಡು ಹೊಡೆಯಲು ಸಿಎಂ ಸಿದ್ದರಾಮಯ್ಯ ದೇವೇಗೌಡರ ತವರಿನಲ್ಲೇ ಶಕ್ತಿ ಪ್ರದರ್ಶನಕ್ಕೆ ಮುಂದಾಗಿದ್ದಾರೆ. ಡಿಸೆಂಬರ್ 5 ರಂದು ಸಿದ್ದರಾಮಯ್ಯ ಅಭಿಮಾನಿಗಳ ಸ್ವಾಭಿಮಾನಿ ಸಮಾವೇಶ ನಡೆಯಲಿದೆ.
ಹಾಸನ, ಮಂಡ್ಯ, ಮೈಸೂರು, ಕೊಡಗು, ಚಿಕ್ಕಮಗಳೂರು, ಚಾಮರಾಜನಗರ ಜಿಲ್ಲೆಗಳನ್ನು ಒಗ್ಗೂಡಿಸಿ ಸಚಿವರು ಸಭೆ ನಡೆಸಿದ್ದಾರೆ ಎನ್ನಲಾಗಿದೆ. ಡಾ.ಹೆಚ್.ಸಿ. ಮಹಾದೇವಪ್ಪ, ಕೆ.ಎನ್. ರಾಜಣ್ಣ, ಬೋಸರಾಜು ಮತ್ತು ಕೆ. ವೆಂಕಟೇಶ್ ನೇತೃತ್ವದಲ್ಲಿ ಸಭೆ ನಡೆಸಲಾಗಿದೆ ಎಂದು ವರದಿಯಾಗಿದೆ.
ಉಪಚುನಾವಣೆ ಗೆದ್ದ ಖುಷಿಯಲ್ಲಿ ಕಾಂಗ್ರೆಸ್ ಪಾಳೆಯಕ್ಕೆ ಚೈತನ್ಯ ತುಂಬಲು ಈ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎನ್ನಲಾಗುತ್ತಿದೆ. ಹಾಸನದಲ್ಲಿ ಯತೀಂದ್ರ ಹಾಗೂ ನಾಲ್ವರು ಸಚಿವರ ಸಮ್ಮುಖದಲ್ಲಿ ಮಹತ್ವದ ಸಭೆ ನಡೆಸಲಾಗಿದೆಯಂತೆ. ಆರು ಜಿಲ್ಲೆಗಳ ಬೆಂಬಲಿಗರ ಸಮ್ಮುಖದಲ್ಲಿ ಶಕ್ತಿ ಪ್ರದರ್ಶನಕ್ಕೆ ಪ್ಲಾನ್ ಮಾಡಿಕೊಳ್ಳಲಾಗಿದೆ ಈ ಮೂಲಕ ವಿರೋಧ ಪಕ್ಷಗಳಿಗೆ ಸಂದೇಶ ರವಾನೆ ಮಾಡಲು ಸಿದ್ದರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್ ಸಜ್ಜಾಗಿದೆ ಎನ್ನಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q