ಶಾಸಕರ ಅಸಮಾಧಾನ ಸ್ಫೋಟದ ಸುಳಿವು ಸಿಗುತ್ತಿದ್ದಂತೆ ಎಚ್ಚೆತ್ತುಕೊಂಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಸತತ ಮೂರನೇ ದಿನವೂ ಜಿಲ್ಲಾವಾರು ಶಾಸಕರು ಮತ್ತು ಸಚಿವರ ಸಭೆ ನಡೆಸಿ ಶಾಸಕರು ಹಾಗೂ ಸಚಿವರ ನಡುವೆ ಸಮನ್ವಯತೆ ಮೂಡಿಸುವ ಪ್ರಯತ್ನ ನಡೆಸಿದ್ದಾರೆ.
ಅನುದಾನ ಕೊರತೆಯ ಬಗ್ಗೆಯೂ ಮಾಹಿತಿ ನೀಡಿ ಮಿತಿಯೊಳಗೆ ಬೇಡಿಕೆ ತನ್ನಿ ಎನ್ನುವ ಸಲಹೆ ನೀಡಿದ್ದಾರೆ. ಈ ವರ್ಷ ಹೆಚ್ಚು ಅನುದಾನದ ನಿರೀಕ್ಷೆ ಇಟ್ಟುಕೊಳ್ಳದೇ, ಗ್ಯಾರಂಟಿ ಯೋಜನೆಗಳ ಸಮರ್ಪಕ ಜಾರಿಗೆ ಆದ್ಯತೆ ನೀಡಬೇಕು ಎಂದು ಸಿಎಂ ಸೂಚಿಸಿದ್ದಾರೆ.
ಸಚಿವರ ಕಾರ್ಯ ವೈಖರಿಗೆ ಅಸಮಾಧಾನ ವ್ಯಕ್ತಪಡಿಸಿ ಶಾಸಕರು ಮುಖ್ಯಮಂತ್ರಿಗಳಿಗೆ ಬರೆದಿದ್ದರು ಎನ್ನಲಾದ ಪತ್ರ ಬಹಿರಂಗವಾಗಿತ್ತು. ಇದರ ಬೆನ್ನಲ್ಲೇ ಶಾಸಕಾಂಗ ಪಕ್ಷದ ಸಭೆ ನಡೆಸಿ ಸಮಸ್ಯೆ ಸರಿಪಡಿಸುವ ಪ್ರಯತ್ನ ನಡೆಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ, ಸತತ ಮೂರನೇ ದಿನ (ಬುಧವಾರ) ಜಿಲ್ಲಾವಾರು ಸ್ವಪಕ್ಷೀಯ ಶಾಸಕರ ಸರಣಿ ಸಭೆ ನಡೆಸಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8123382149 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


