ನವರಾತ್ರಿ ಎಂಬುದಕ್ಕೆ ಹಿಂದೂ ಧರ್ಮದಲ್ಲಿ ಪೌರಾಣಿಕ ಮಹತ್ವವಿದೆ. ದುರ್ಗೆಯ ನವ ಅವತಾರಗಳನ್ನು ಆರಾಧಿಸುವ ಈ ಹಬ್ಬವನ್ನು ಭ್ರಷ್ಟ ಮುಖ್ಯಮಂತ್ರಿ, ಮುಡಾ ಹಗರಣದ ಎ1 ಆರೋಪಿ ಸಿದ್ದರಾಮಯ್ಯ ಅವರು ತಮ್ಮ ರಾಜಕೀಯಕ್ಕಾಗಿ ಬಳಸಿಕೊಂಡಿರುವುದು ಅಕ್ಷಮ್ಯ ಎಂದು ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ.
ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಬಿಜೆಪಿ, ಆರೋಪಿ ಸಿದ್ದರಾಮಯ್ಯ ಅವರೇ, ಈ ರೀತಿ ಜಾಹೀರಾತು ನೀಡುವುದರಿಂದ ನೀವು ಮಾಡಿರುವ ಪಾಪಕರ್ಮ, ಭ್ರಷ್ಟಾಚಾರಗಳು ಪರಿಹಾರವಾಗುವುದಿಲ್ಲ ಎಂದು ವಾಗ್ದಾಳಿ ನಡೆಸಿದೆ.
ರಾಮ ಸತ್ಯನೇ, ಆದರೆ ಸಿದ್ದರಾಮಯ್ಯ ಬ್ರಹ್ಮಾಂಡ ಸುಳ್ಳು. ಶ್ರೀರಾಮ ಸತ್ಯ ಅನ್ವೇಷಣೆಗಾಗಿ ಸೀತೆಯಿಂದ ದೂರವಾಗಿ ಸತ್ಯಶೋಧನೆ ನಡೆಸಿದ್ದ. ಅದೇ ಮಾರ್ಗದಲ್ಲಿ ನೀವು ನಡೆಯುವುದಾದರೆ ಸಿಎಂ ಪದವಿಗೆ ರಾಜೀನಾಮೆ ಸಲ್ಲಿಸಿ ಸತ್ಯಶೋಧನೆಗೆ ಅವಕಾಶ ನೀಡಿ ಎಂದು ಬಿಜೆಪಿ ಆಗ್ರಹಿಸಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q