ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ತಮ್ಮ ವಿರುದ್ಧ ತನಿಖೆಗೆ ಆದೇಶಿಸಿರುವುದನ್ನು ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಇಂದಿನಿಂದ ಕಾನೂನು ಹೋರಾಟ ಆರಂಭಿಸಲಿದ್ದಾರೆ.
ರಾಜ್ಯಪಾಲರ ವಿಶೇಷ ಕಾರ್ಯದರ್ಶಿ, ಮೂವರು ದೂರುದಾರರನ್ನು ಪ್ರತಿವಾದಿಯನ್ನಾಗಿಸಿ ರಿಟ್ ಅರ್ಜಿ ಸಲ್ಲಿಸಲಾಗಿದೆ.
ಸಚಿವ ಸಂಪುಟದ ಶಿಫಾರಸಿಗೆ ವಿರುದ್ಧವಾಗಿ ರಾಜ್ಯಪಾಲರು ನಡೆದುಕೊಂಡಿದ್ದಾರೆ. ಅನುಮತಿಗೂ ಮುನ್ನ ದಾಖಲೆಗಳನ್ನು ಪರಿಶೀಲಿಸಿಲ್ಲ ಎಂದು ರಿಟ್ ಅರ್ಜಿಯಲ್ಲಿ ತಿಳಿಸಲಾಗಿದೆ.
ಖಾಸಗಿ ದೂರಿನ ಆಧಾರದ ಮೇಲೆ ಗೌರ್ನರ್ ಭ್ರಷ್ಟಾಚಾರ ನಿಗ್ರಹ ಕಾಯಿದೆ ಸೆಕ್ಷನ್ 17–ಎ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ ಸೆಕ್ಷನ್ 218ರಡಿ ತನಿಖೆಗೆ ಅನುಮತಿ ನೀಡಿರುವುದು ಕಾನೂನು ಬಾಹಿರವಾಗಿರುವುದರಿಂದ ರದ್ದುಪಡಿಸುವಂತೆ ಸಿಎಂ ಪರ ವಕೀಲ ರವಿವರ್ಮ ಕುಮಾರ್ ವಾದ ಮಂಡಿಸಲಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q


