ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಗೆ 25 ವರ್ಷಗಳ ಸಂಭ್ರಮಕ್ಕೆ ಸಿಎಂ ಸಿದ್ದರಾಮಯ್ಯ ಶುಭಹಾರೈಸಿದ್ದಾರೆ. ತನ್ನ ಪ್ರಯಾಣಿಕರಿಗೆ ಸುರಕ್ಷಿತ ಮತ್ತು ಸುಗಮ ಸಾರಿಗೆ ಸೇವೆ ನೀಡುತ್ತಾ ಬಂದಿರುವ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಗೆ 25 ವರ್ಷಗಳ ಸಂಭ್ರಮ. ಈ 25 ವಸಂತಗಳ ಸುದೀರ್ಘ ಹಾದಿಯಲ್ಲಿ ಸಂಸ್ಥೆ ನೀಡುತ್ತಿರುವ ಗುಣಮಟ್ಟದ ಸೇವೆಗೆ ಹಲವು ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಪ್ರಶಸ್ತಿಗಳು ಸಂದಿವೆ ಎಂದು ಹೆಮ್ಮೆಯಿಂದ ಸಿಎಂ ಹೇಳಿದ್ದಾರೆ.
ನಮ್ಮ ಸರ್ಕಾರವು 921 ಎಲೆಕ್ಟ್ರಿಕ್ ಬಸ್‌ಗಳು ಸೇರಿದಂತೆ ಈ ವರ್ಷಾಂತ್ಯದೊಳಗೆ 1,900 ಹೊಸ ಬಸ್ ಗಳನ್ನು ಖರೀದಿಸಿ ಬಿಎಂಟಿಸಿಯನ್ನು ಮತ್ತಷ್ಟು ಜನಸ್ನೇಹಿ ಹಾಗೂ ಪರಿಸರ ಸ್ನೇಹಿಯಾಗಿಸಲು ಕಾರ್ಯಪ್ರವೃತ್ತವಾಗಿದೆ.
ಬೆಂಗಳೂರಿನ ಜನತೆ ಹೆಚ್ಚೆಚ್ಚು ಸಾರ್ವಜನಿಕ ಸಾರಿಗೆಯನ್ನು ಬಳಸುವ ಮೂಲಕ ಪರಿಸರ ಮಾಲಿನ್ಯ ಮತ್ತು ಸಂಚಾರ ದಟ್ಟಣೆ ತಡೆಗಟ್ಟಲು ಸಹಕರಿಸಬೇಕು ಎಂದು ಮನವಿ ಮಾಡಿದ್ದಾರೆ.


