ಬೆಂಗಳೂರು: ಸಮಿಶ್ರ ಸರ್ಕಾರದ ಕೀರ್ತಿ ಮತ್ತು ಅಪಕೀರ್ತಿಗಳ ಬಗ್ಗೆ ಕೇಂದ್ರ ಸಚಿವ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮಾತ್ರ ಲಾಭ ಪಡೆಯಲು ಸಾಧ್ಯವಿಲ್ಲ, ನಾವು(ಕಾಂಗ್ರೆಸ್) ಕೂಡ ಪಾಲುದಾರರು ಎಂದು ಸಚಿವ ಪರಮೇಶ್ವರ್ ಹೇಳಿದ್ದಾರೆ.
14 ತಿಂಗಳ ತಮ್ಮ ಆಡಳಿತದ ಕುರಿತು ಬಹಿರಂಗ ಚರ್ಚೆಗೆ ಬರುವಂತೆ ಕುಮಾರಸ್ವಾಮಿ ಯವರ ಸವಾಲಿಗೆ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಪರಮೇಶ್ವರ್, ಈ ಕುರಿತು ಒಂದು ಹೋಲಿಕೆ ನಡೆಯಲಿ. 14 ತಿಂಗಳು ನಾನು ಉಪಮುಖ್ಯಮಂತ್ರಿಯಾಗಿ ಅವರ ಜೊತೆಗಿದ್ದೆ. ಒಳ್ಳೆಯದು ಹಾಗೂ ಕೆಟ್ಟದ್ದು ಎರಡರಲ್ಲೂ ನಮ ಪಾಲಿದೆ ಎಂದು ಹೇಳಿದರು.
ಹರಿಯಾಣದಲ್ಲಿ ಕಾಂಗ್ರೆಸ್ ಗೆ ಸ್ಪಷ್ಟ ಬಹುಮತ ಬರಲಿದೆ ಎಂದು ನಮ ವರದಿ ತಿಳಿಸಿತ್ತು. ಮಾಧ್ಯಮಗಳು ಅದನ್ನೇ ಪುನರುಚ್ಚರಿಸಿವೆ. ಜಮ್ಮು–ಕಾಶ್ಮೀರದಲ್ಲಿ ಸಮಿಶ್ರ ಸರ್ಕಾರ ರಚಿಸುವ ಸಾಧ್ಯತೆಯಿದೆ. ಇದರ ಪರಿಣಾಮ ಮಹಾರಾಷ್ಟ್ರದ ಚುನಾವಣೆಯ ಮೇಲಾಗಲಿದೆ ಎಂದರು.
ಹಿಂದುಳಿದ ವರ್ಗಗಳ ಶಾಶ್ವತ ಆಯೋಗದಿಂದ ನಡೆಸಲಾಗಿರುವ ಸಾಮಾಜಿಕ ಮತ್ತು ಶೈಕ್ಷಣಿಕ ವರದಿಯನ್ನು ಸಚಿವ ಸಂಪುಟದಲ್ಲಿ ಚರ್ಚಿಸಲಾಗುವುದು. ಒಂದು ವೇಳೆ ಯಾವುದಾದರೂ ಸಮುದಾಯಕ್ಕೆ ಅನ್ಯಾಯವಾಗಿದ್ದರೆ ಅದನ್ನು ಸರಿಪಡಿಸಲಾಗುವುದು ಎಂದು ಭರವಸೆ ನೀಡಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q


