ನಾನು ಕಾಫಿ ನಾಡು ಚಂದು ಪುನೀತಣ್ಣನ್ ಶಿವಣ್ಣನ್ ಅಭಿಮಾನಿ ಅನ್ನುತ್ತಾ ಹಾಡು ಹಾಡಿ ಸಾಮಾಜಿಕ ಜಾಲತಾಣಗಳಲ್ಲಿ ಫೇಮಸ್ ಆಗಿರುವ ಕಾಫಿ ನಾಡು ಚಂದುಗೆ ಬಿಗ್ ಬಾಸ್ ಗೆ ಎಂಟ್ರಿ ಸಿಕ್ಕಿಲ್ಲ. ಸಾಕಷ್ಟು ಜನರು ಕಾಫಿನಾಡು ಚಂದು ಬಿಗ್ ಬಾಸ್ ಮನೆಗೆ ಹೋಗಲಿದ್ದಾರೆ ಅನ್ನೋ ನಿರೀಕ್ಷೆಯಿಟ್ಟಿದ್ದರು. ಆದ್ರೆ ಅವರ ನಿರೀಕ್ಷೆಗಳು ಸುಳ್ಳಾಗಿವೆ.
ಬಿಗ್ ಬಾಸ್ ಮನೆಗೆ ಪ್ರವೇಶ ಪಡೆದ 16 ಸ್ಪರ್ಧಿಗಳಲ್ಲಿ ಕಾಫಿ ನಾಡು ಚಂದು ಕಾಣಿಸಿಕೊಳ್ಳದೆ ಇರೋದು ಅಭಿಮಾನಿಗಳಲ್ಲಿ ಬೇಸರ ಮೂಡಿಸಿದೆ. ಸೋಷಿಯಲ್ ಮೀಡಿಯಾಗಳಲ್ಲಿ ಹಾಡು ಹಾಗೂ ಡ್ಯಾನ್ಸ್ ಮೂಲಕ ಎಲ್ಲರನ್ನು ರಂಜಿಸುತ್ತಿರುವ ಕಾಫಿನಾಡು ಚಂದುಗೆ ಬಿಗ್ ಬಾಸ್ ಪ್ರವೇಶ ಸಿಗೋದು ಖಚಿತ ಎಂದೇ ಹೇಳಲಾಗಿತ್ತು.
ಸಾಮಾಜಿಕ ಜಾಲತಾಣದ ಮೂಲಕ ಅತ್ಯುತ್ತಮ ಮನರಂಜನೆ ನೀಡುತ್ತಿರುವ ಚಂದು ಬಿಗ್ ಬಾಸ್ ಗೆ ಸೂಕ್ತ ವ್ಯಕ್ತಿ. ಎಲ್ಲರೂ ಮನರಂಜನೆಯನ್ನು ಬಯಸಿ ಬಿಗ್ ಬಾಸ್ ನೋಡುತ್ತಾರೆ. ಇದೀಗ ಆಯ್ಕೆಯಾಗಿರುವ ಸ್ಪರ್ಧಿಗಳಿಗಿಂತ ಚಂದು ಅತ್ಯುತ್ತಮ ಎಂಟರ್ಟೈನರ್. ಹೀಗಾಗಿ ಕಾಫಿನಾಡು ಚಂದುಗೆ ಅವಕಾಶ ನೀಡಬೇಕಿತ್ತು ಎಂದು ಸಾಕಷ್ಟು ಜನರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz