ಸರಗೂರು: ಬಲದಂಡೆ ನಾಲೆ ಸೇತುವೆ ಕುಸಿದು ಬಿದ್ದ ಪರಿಣಾಮ ಭತ್ತ ತುಂಬಿದ್ದ ಲಾರಿ ನಾಲೆಗೆ ಬಿದ್ದಿರುವ ಘಟನೆ ತಾಲೂಕಿನ ಶ್ರೀಚಿಕ್ಕದೇವಮ್ಮನ ಬೆಟ್ಟಕ್ಕೆ ಸಂಪರ್ಕ ಕಲ್ಪಿಸುವ ಹಾಗೂ ವಿವಿಧ ಗ್ರಾಮಗಳಿಗೆ ತೆರಳುವ ರಸ್ತೆಯ ಸೇತುವೆ ಹಾಲುಗಡ ಗಣೇಶನ ಗುಡಿ ಬಳಿ ಭಾನುವಾರ ರಾತ್ರಿ ನಡೆದಿದೆ. ಈ ಹಿನ್ನೆಲೆಯಲ್ಲಿ ಗಮನಕ್ಕೆ ಬಂದ ಕೂಡಲೇ ಶಾಸಕ ಅನಿಲ್ ಚಿಕ್ಕಮಾದು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮಾತನಾಡಿದರು.
ತಾಲೂಕಿನ ಕಬಿನಿ ಬಲದಂಡೆ ಕಾಲುವೆಗಳು ಸೇತುವೆ ಶಿಥಿಲಕೊಂಡಿರುವ ಸೇತುವೆ ಪರಿಶೀಲಿಸಿ ವರದಿ ಸಲ್ಲಿಸುವಂತೆ ಸೂಚಿಸಿದರು. ಕೋತ್ತೇಗಾಲ, ಚಿಕ್ಕ ದೇವಮ್ಮ ಬೆಟ್ಟಕ್ಕೆ ಹೋಗುವ ಸೇತುವೆಗಳು ಈಗಾಗಲೇ ಸೇತುವೆ ನಿರ್ಮಾಣಕ್ಕೆ ಸರ್ಕಾರಕ್ಕೆ ಗಮನಕ್ಕೆ ತರಲಾಗಿದೆ. ಮುಂದಿನ ದಿನಗಳಲ್ಲಿ ಸೇತುವೆ ನಿರ್ಮಾಣ ಮಾಡಲಾಗುತ್ತಿದೆ ಎಂದು ಭರವಸೆ ನೀಡಿದರು.
ಅಧಿಕಾರಿಗಳಿಗೆ ಈ ಭಾಗ ರೈತರಿಗೆ ಹಾಗೂ ಸಾರ್ವಜನಿಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಬೇರೆ ರಸ್ತೆ ಮಾಡಬೇಕು ಅವರಿಗೆ ಯಾವುದೇ ರೀತಿಯಲ್ಲಿ ತೊಂದರೆ ಉಂಟಾಗಬಾರದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಘಟನೆ ವಿವರ:
ತಾಲೂಕಿನ ಇಟ್ನ ಗ್ರಾಮದಿಂದ ತಮಿಳುನಾಡಿಗೆ ಭತ್ತ ತುಂಬಿಕೊಂಡು ಹೋಗುತ್ತಿದ್ದ (ಟಿಎನ್.52, 8333) ಲಾರಿ ಕುಸಿದು ಬಿದ್ದಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎನ್ನಲಾಗಿದೆ. ಭಾನುವಾರ ರಾತ್ರಿ ಭತ್ತ ತುಂಬಿಕೊಂಡು ಹೋಗುತ್ತಿದ್ದ ಲಾರಿ ಸೇತುವೆ ಸೇತುವೆ ಕುಸಿದು ನಾಲೆಗೆ ಬಿದ್ದಿದೆ. ಈ ಸೇತುವೆ ದುರಸ್ತಿ ಪಡಿಸುವಂತೆ ಅಧಿಕಾರಿಗಳಿಗೆ ಸಾಕಷ್ಟು ಬಾರಿ ಮನವಿ ಸಲ್ಲಿಸಿದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಸ್ಥಳೀಯರು ಆರೋಪಿಸಿದ್ದಾರೆ. ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಕಬಿನಿ ಜಲಾಶಯದ ಕಾರ್ಯಪಾಲಕ ಅಭಿಯಂತರರು ಉಷಾ ಕೆ. ಹಾಗೂ ಸರಗೂರು ಠಾಣೆಯ ಎಸ್‌ಐ ಕಿರಣ್ ಕುಮಾರ್ ಹಾಗೂ ಪರಿಶೀಲನೆ ನಡೆಸಿದರು.
ನಂತರ ಮಾತನಾಡಿದ ಕಬಿನಿ ಜಲಾಶಯದ ಕಾರ್ಯಪಾಲಕ ಅಭಿಯಂತರರು ಉಷಾ ಕೆ. ನಾವುಗಳು ಸಾಕಷ್ಟು ಬಾರಿ ಈ ಭಾಗದ ರೈತರಿಗೆ ಹಳೆ ಸೇತುವೆ ಇಲ್ಲಿ ಹೆಚ್ಚು ವಾಹನಗಳು ತಿರುಗಾಡಬಾರದು ಎಂದು ಮುಂಜಾಗ್ರತೆ ವಹಿಸಿದ್ದವು. ಸುಮಾರು ವರ್ಷದ ಕಾಲದ ಹಳೆ ಸೇತುವೆ ಇದ್ದಾಗಿದ್ದು. ಈ ಸೇತುವೆ ಮೂಲಕ ದೊಡ್ಡ ವಾಹನಗಳು ವೇಗವಾಗಿ ಚಲಿಸುತ್ತಿದ್ದು.ಇದರಿಂದ ತುಂಬಾ ಶಿಥಿಲಗೊಂಡಿದ್ದರಿಂದ ಈ ಘಟನೆ ನಡೆದಿದೆ.
ನಮ್ಮ ಅಧಿಕಾರಿಗಳು ಪೊಲೀಸ್ ಠಾಣೆಗೆ ಚಿಕ್ಕ ದೇವಮ್ಮನ ಬೆಟ್ಟಕ್ಕೆ ಹೋಗುವ ಸೇತುವೆ ತುಂಬಾ ಶಿಥಿಲವಾಗಿದೆ ಎಂದು ಮನವಿ ಮಾಡಿ ಸಾರ್ವಜನಿಕರು ಹಾಗೂ ವಾಹನಗಳು ತಿರುಗಾಡಬಾರದು ಎಂದು ಬ್ಯಾರಿಕೇಡ್ ಗಳನ್ನು ಅಳವಡಿಸಲಾಗಿತ್ತು. ರಾತ್ರಿ ವೇಳೆಯಲ್ಲಿ ಲಾರಿಗಳು ಡ್ರೈವರ್ ಗಳು ಬ್ಯಾರಿಕೇಡ್ ಗಳನ್ನು ಬದಿಗೆ ಸರಿಸಿ ಸಂಚಾರ ಮಾಡಿದ್ದಾರೆ ಎಂದರು. ಮುಂದಿನ ದಿನಗಳಲ್ಲಿ ಸೇತುವೆ ನಿರ್ಮಾಣಕ್ಕೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ರೈತರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ತಾತ್ಕಾಲಿಕವಾಗಿ ಬೇರೆ ಸೇತುವೆ ನಿರ್ಮಾಣ ಮಾಡಲು ಮುಂದಾಗುತ್ತೆವೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಪಪಂ ಸದಸ್ಯ ಶ್ರೀನಿವಾಸ, ತಾಪಂ ಮಾಜಿ ಅಧ್ಯಕ್ಷ ಮನುಗನಹಳ್ಳಿ ಗುರುಸ್ವಾಮಿ, ಕೊತ್ತೇಗಾಲ ಗ್ರಾಪಂ ಅಧ್ಯಕ್ಷ ಕುಮಾರ್, ಸದಸ್ಯರು ಮಹದೇವ, ಚಲುವಪ್ಪ, ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಮಂಜುನಾಥ, ಚಿಕ್ಕಮಾದು ಅಭಿಮಾನಿಗಳ ಬಳಗದ ಅಧ್ಯಕ್ಷ ರಾಜನಾಯಕ, ಮುಖಂಡರು ವನಸಿರಿ ಉಮೇಶ್, ಶಶಿ ಪಾಟೀಲ್, ಇನ್ನೂ ಮುಖಂಡರು ಸೇರಿದಂತೆ ಭಾಗಿಯಾಗಿದ್ದರು.
ವರದಿ: ಹಾದನೂರು ಚಂದ್ರ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


