ಬೆಂಗಳೂರು: ಬಿಹಾರ ಎಲೆಕ್ಷನ್ ಗಾಗಿ ಹಣ ಸಂಗ್ರಹಕ್ಕೆ ಸುರ್ಜೇವಾಲಾ ರಾಜ್ಯಕ್ಕೆ ಬಂದಿದ್ದಾರೆ. ಹಾಗಾಗಿ, ಸಿದ್ದರಾಮಯ್ಯ ಸರ್ಕಾರ ಹೂವು, ತರಕಾರಿ, ಟೀ ಅಂಗಡಿ, ಬೇಕರಿಗಳಿಗೆಲ್ಲಾ ನೋಟಿಸ್ ಕೊಟ್ಟು ಹಗಲು ದರೋಡೆ ಮಾಡ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪ ಮಾಡಿದ್ದಾರೆ.
ರಾಜ್ಯದ ವ್ಯಾಪಾರಿಗಳಿಗೆ ವಾಣಿಜ್ಯ ತೆರಿಗೆ ಇಲಾಖೆ ಕೊಟ್ಟಿರೋ ಜಿಎಸ್ ಟಿ ನೊಟೀಸ್ ಸಂಬಂಧ ಪ್ರತಿಕ್ರಿಯಿಸಿರುವ ಅವರು, ಗ್ಯಾರಂಟಿ ಯೋಜನೆಗಳಿಗೆ ಹಣ ಸಂಗ್ರಹಿಸಲು ತೆರಿಗೆ ಇಲಾಖೆ ಮೂಲಕ ನೋಟಿಸ್ ಕೊಡ್ತಿದ್ದಾರೆ ಕಿಡಿಕಾರಿದ್ದಾರೆ.
ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಪ್ರತಿಕ್ರಿಯಿಸಿ, ಈ ಬಗ್ಗೆ ಚರ್ಚೆ ಆಗ್ಬೇಕು. ಹಣಕಾಸು ಸಚಿವರು ಉತ್ತರ ಕೊಡ್ತಾರೆ ಅಂತ ಎಂದಿದ್ದಾರೆ. ಆದರೆ, ನೋಟಿಸ್ ಕೊಡೋದೇ ಕೇಂದ್ರ ಸರ್ಕಾರ ಅಂತ ಸಚಿವ ಎಂ.ಬಿ ಪಾಟೀಲ್ ಹೇಳಿದ್ದಾರೆ.
ಈ ಮಧ್ಯೆ, ವ್ಯಾಪಾರಿಗಳಿಗೆ ಜಿಎಸ್ ಟಿ ಜಂಜಾಟ ಮುಂದುವರಿದಿದೆ. ಯುಪಿಐ ಬೇಡ, ಕ್ಯಾಶ್ ಕೊಡಿ ಅನ್ನೋ ವ್ಯಾಪಾರಿಗಳ ಸಂಖ್ಯೆಯಲ್ಲಿ ಹೆಚ್ಚಳವಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC