ತುಮಕೂರು: ಸರ್ವೋಚ್ಛ ನ್ಯಾಯಾಲಯದ ನಿರ್ದೇಶನದಂತೆ ಜಿಲ್ಲೆಯ ಇ-ಶ್ರಮ್ ನೋಂದಾಯಿತ ಕಾರ್ಮಿಕರಿಗೆ ಶೀಘ್ರವಾಗಿ ಆದ್ಯತಾ ಪಡಿತರ ಚೀಟಿ(PHH))ಯನ್ನು ವಿತರಿಸಬೇಕು ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾಧಿಕಾರಿ ಕಚೇರಿ ಕೆಸ್ವಾನ್ ಸಭಾಂಗಣದಲ್ಲಿ ಬುಧವಾರ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಈಗಾಗಲೇ 1201 ಇ–ಶ್ರಮ್ ನೋಂದಾಯಿತ ಕಾರ್ಮಿಕರಿಗೆ ಪಡಿತರ ಚೀಟಿ ವಿತರಣೆ ಮಾಡಲಾಗಿದೆ. ಬಾಕಿ ಉಳಿದ 4,025 ಕಾರ್ಮಿಕರಿಗೆ ತ್ವರಿತವಾಗಿ ಪಡಿತರ ಚೀಟಿ ವಿತರಣೆ ಮಾಡಬೇಕು ಎಂದು ತಿಳಿಸಿದರು.
ಇ–ಶ್ರಮ್ ನೋಂದಾಯಿತ ಅರ್ಹ ಕಾರ್ಮಿಕರು ತಮ್ಮ ಹತ್ತಿರದ ಆಹಾರ ಮತ್ತು ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯನ್ನು ಸಂಪರ್ಕಿಸಿ ಯೋಜನೆಯ ಸದುಪಯೋಗವನ್ನು ಪಡೆದುಕೊಳ್ಳಬೇಕು ಎಂದು ತಿಳಿಸಿದರು.
ಸಭೆಯಲ್ಲಿ ಜಿಲ್ಲಾ ಕಾರ್ಮಿಕ ಅಧಿಕಾರಿ ತೇಜಾವತಿ, ಆಹಾರ ಮತ್ತು ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಜಂಟಿ ನಿರ್ದೇಶಕ ಮಂಟೇಸ್ವಾಮಿ ಸೇರಿದಂತೆ ವಿವಿಧ ತಾಲ್ಲೂಕುಗಳ ಆಹಾರ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q