nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮಂತ್ರಾಲಯದಲ್ಲಿ ಜೂನ್ 26ಕ್ಕೆ “ರಾಯರ ದರ್ಶನ” ಆಲ್ಬಮ್ ಬಿಡುಗಡೆ: ಕಾಡು ಸಿದ್ದೇಶ್ವರ ಮಠದ ಶ್ರೀಗಳಿಗೆ ಆಹ್ವಾನ

    June 12, 2026

    ಲೋಕಾಯುಕ್ತರಿಂದ 56 ಜನರ ಅಹವಾಲು ಸ್ವೀಕಾರ:  ಜಮೀನು ಖಾಸಗಿ ವ್ಯಾಜ್ಯಗಳೇ ಹೆಚ್ಚು.. ಪಡಿತರ ಕಾರ್ಡಿನ ಮಾಹಿತಿಯೇ ನೀಡಲ್ವಂತೆ!

    June 12, 2026

    ಪಾವಗಡ: ನಿಯಮ ಉಲ್ಲಂಘನೆ, ವೆಂಕಟೇಶ್ವರ ಕಲ್ಲುಗಣಿ ಗುತ್ತಿಗೆ ರದ್ದುಪಡಿಸಿ ಇಲಾಖೆ ಖಡಕ್ ಆದೇಶ! | ಶಾಸಕ ವೆಂಕಟೇಶ್ ವಿರುದ್ಧ ಎಫ್‌ ಐಆರ್ ದಾಖಲಿಸಲು ಒತ್ತಾಯ

    June 12, 2026
    Facebook Twitter Instagram
    ಟ್ರೆಂಡಿಂಗ್
    • ಮಂತ್ರಾಲಯದಲ್ಲಿ ಜೂನ್ 26ಕ್ಕೆ “ರಾಯರ ದರ್ಶನ” ಆಲ್ಬಮ್ ಬಿಡುಗಡೆ: ಕಾಡು ಸಿದ್ದೇಶ್ವರ ಮಠದ ಶ್ರೀಗಳಿಗೆ ಆಹ್ವಾನ
    • ಲೋಕಾಯುಕ್ತರಿಂದ 56 ಜನರ ಅಹವಾಲು ಸ್ವೀಕಾರ:  ಜಮೀನು ಖಾಸಗಿ ವ್ಯಾಜ್ಯಗಳೇ ಹೆಚ್ಚು.. ಪಡಿತರ ಕಾರ್ಡಿನ ಮಾಹಿತಿಯೇ ನೀಡಲ್ವಂತೆ!
    • ಪಾವಗಡ: ನಿಯಮ ಉಲ್ಲಂಘನೆ, ವೆಂಕಟೇಶ್ವರ ಕಲ್ಲುಗಣಿ ಗುತ್ತಿಗೆ ರದ್ದುಪಡಿಸಿ ಇಲಾಖೆ ಖಡಕ್ ಆದೇಶ! | ಶಾಸಕ ವೆಂಕಟೇಶ್ ವಿರುದ್ಧ ಎಫ್‌ ಐಆರ್ ದಾಖಲಿಸಲು ಒತ್ತಾಯ
    • ಜುಲೈ 15ರಂದು ಎಲ್ಲಾ ರೈತಪರ ಸಂಘಟನೆಗಳು, ಮುಖಂಡರೊಂದಿಗೆ ಹೇಮಾವತಿ ನಾಲಾ ವೀಕ್ಷಣೆ: ಶಾಸಕ ಸಿ.ಬಿ. ಸುರೇಶ್‌ ಬಾಬು ಕರೆ
    • ಪಾವಗಡ: ಸಕಾಲಕ್ಕೆ ಸಿಗದ ಚಿಕಿತ್ಸೆ; ಹಾವು ಕಚ್ಚಿ ಬಿ.ಫಾರ್ಮಸಿ ವಿದ್ಯಾರ್ಥಿ ದುರ್ಮರಣ
    • ಐದು ಕೋಟಿ ವೆಚ್ಚದ ಅಭಿವೃದ್ದಿ ಕಾಮಗಾರಿಗಳಿಗೆ ಶಾಸಕ ಡಾ.ಎಚ್.ಡಿ.ರಂಗನಾಥ್ ಗುದ್ದಲಿ ಪೂಜೆ
    • ಕ್ಷೇತ್ರದ ವಿದ್ಯಾರ್ಥಿಗಳಿಗೆ ಎಸ್.ಬಿ.ಚಾರಿಟಬಲ್ ಟ್ರಸ್ಟ್‌ನಿಂದ ಉಚಿತ ಸಿಇಟಿ, ನೀಟ್ ತರಬೇತಿ: ಶಾಸಕ ಸಿ.ಬಿ. ಸುರೇಶ್ ಬಾಬು
    • KCET–2026ರಲ್ಲಿ ಸುಭಾಷ್ ವಿಜ್ಞಾನ ಪದವಿ ಪೂರ್ವ ಕಾಲೇಜಿಗೆ ಕೊರಟಗೆರೆ ತಾಲೂಕು ಪ್ರಥಮ ಸ್ಥಾನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸಾಂಪ್ರದಾಯಿಕ ತುಮಕೂರು ದಸರಾ ಉತ್ಸವಕ್ಕೆ ಅಗತ್ಯ ಸಿದ್ಧತೆ ಕೈಗೊಳ್ಳಲು ಜಿಲ್ಲಾಧಿಕಾರಿ ಸೂಚನೆ
    ತುಮಕೂರು August 23, 2024

    ಸಾಂಪ್ರದಾಯಿಕ ತುಮಕೂರು ದಸರಾ ಉತ್ಸವಕ್ಕೆ ಅಗತ್ಯ ಸಿದ್ಧತೆ ಕೈಗೊಳ್ಳಲು ಜಿಲ್ಲಾಧಿಕಾರಿ ಸೂಚನೆ

    By adminAugust 23, 2024No Comments3 Mins Read
    shubha kalyan

    ತುಮಕೂರು: ಮ್ಯೆಸೂರು ದಸರಾ ಉತ್ಸವದ ಮಾದರಿಯಲ್ಲಿ ಈ ಬಾರಿ ಸಾಂಪ್ರದಾಯಿಕವಾಗಿ ಹಾಗೂ ಅದ್ದೂರಿಯಾಗಿ ತುಮಕೂರು ದಸರಾ ಉತ್ಸವವನ್ನು ಆಚರಿಸಲು ಉದ್ದೇಶಿಸಲಾಗಿದ್ದು,  ದಸರಾ ಉತ್ಸವದ ಯಶಸ್ವಿಗೆ ಅಗತ್ಯ ಸಿದ್ಧತೆಗಳನ್ನು ಈಗಿನಿಂದಲೇ ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ಶುಭಕಲ್ಯಾಣ್ ಅಧಿಕಾರಿಗಳಿಗೆ ಸೂಚಿಸಿದರು.

    ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ  ಗುರುವಾರ ಜರುಗಿದ ತುಮಕೂರು ದಸರಾ ಆಚರಣೆ ಪೂರ್ವಭಾವಿ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ಜಿಲ್ಲಾಡಳಿತದ ವತಿಯಿಂದ ಮೊದಲ ಬಾರಿಗೆ ತುಮಕೂರು ದಸರಾ ಕಾರ್ಯಕ್ರಮವನ್ನು  ಅಕ್ಟೋಬರ್ 10 ರಿಂದ 12ರವರೆಗೆ ನಗರದ ಜೂನಿಯರ್ ಕಾಲೇಜು ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದೆ. ಈ ಬಾರಿ ನವೀನ ರೀತಿಯ ಕಾರ್ಯಕ್ರಮಗಳನ್ನು ರೂಪಿಸುವ ಮೂಲಕ ದಸರಾಗೆ ಮೆರುಗು ತರಬೇಕು. ಶಿಷ್ಟಾಚಾರದಲ್ಲಿ ಯಾವುದೇ ರೀತಿಯ ಉಲ್ಲಂಘನೆಯಾಗದಂAತೆ ಎಚ್ಚರಿಕೆ ವಹಿಸಬೇಕು. ದಸರಾ ಆಚರಣೆಗೆ ಹೆಚ್ಚಿನ ಪ್ರಾಯೋಜಕತ್ವ ಪಡೆಯಲು ಅಧಿಕಾರಿಗಳು ಮುಂದಾಗಿ ದಸರಾ ಮಹೋತ್ಸವವನ್ನು ಆಚರಿಸಲು  ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.


    Provided by
    Provided by

    ವಿಜಯ ದಶಮಿ ದಿನದಂದು ನಗರದ ಟೌನ್ ಹಾಲ್ ವೃತ್ತದಿಂದ ಜೂನಿಯರ್ ಕಾಲೇಜು ಮೈದಾನದವರೆಗೂ ದಸರಾ ಮೆರವಣಿಗೆ ಆಯೋಜಿಸಬೇಕು. ಮೆರವಣಿಗೆಯಲ್ಲಿ ಅಲಂಕೃತ ಆನೆಗಳನ್ನು ಬಳಸಿಕೊಳ್ಳಬೇಕು. ದಸರೆಯಲ್ಲಿ ಭಾಗವಹಿಸುವ ಆನೆಗಳ ಆಯ್ಕೆ ಪ್ರಕ್ರಿಯೆಯನ್ನು ಪೂರ್ಣಗೊಳಿಸಿ ಆನೆಗಳ ಪಟ್ಟಿ ಸಿದ್ಧಪಡಿಸಿಸಬೇಕೆಂದು  ಮುಜರಾಯಿ ಹಾಗೂ ಅರಣ್ಯ ಇಲಾಖೆಗೆ ಸೂಚಿಸಿದರಲ್ಲದೆ, ಮೆರವಣಿಗೆಯಲ್ಲಿ ವಿದ್ಯಾರ್ಥಿಗಳಿಂದ ಪಂಜಿನ ಕವಾಯತು ಏರ್ಪಡಿಸಲು ನಿರ್ದೇಶಿಸಿದರು.

    ದಸರಾ ಉತ್ಸವದ ಪ್ರಯುಕ್ತ ಅಕ್ಟೋಬರ್ 10 ರಿಂದ 12ರವರೆಗೆ ಪ್ರತಿದಿನ ಸಂಜೆ ವಿವಿಧ ರೀತಿಯ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಬೇಕು. ಉತ್ಸವದಲ್ಲಿ ರೈತ ದಸರಾ, ಯುವ ದಸರಾ, ಚಿಣ್ಣರ ದಸರಾ, ಮಹಿಳಾ ದಸರಾ, ಯೋಗ ದಸರಾ, ದಸರಾ ಕುಸ್ತಿ, ಯುವ ಸಂಭ್ರಮ, ಮತ್ಸಪ್ರದರ್ಶನ ಸೇರಿದಂತೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಏರ್ಪಡಿಸಬೇಕು. ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಹೊಸ ಪ್ರತಿಭೆಗಳಿಗೆ ಅವಕಾಶ ಕಲ್ಪಿಸಬೇಕು ಎಂದು ಸೂಚಿಸಿದರು.

    ಉತ್ಸವದ ಅಂಗವಾಗಿ ನಗರದ ಬಟವಾಡಿಯಿಂದ ಗುಬ್ಬಿಗೇಟ್‌ ವರೆಗೆ, ಬಿ.ಜಿ.ಎಸ್ ವೃತ್ತದಿಂದ ಜಿಲ್ಲಾಧಿಕಾರಿಗಳ ಕಚೇರಿವರೆಗೆ ಹಾಗೂ ನಗರದ ಪ್ರಮುಖ ವೃತ್ತಗಳಿಗೆ ವಿದ್ಯುತ್ ದೀಪಾಲಂಕಾರ, ಜೂನಿಯರ್ ಕಾಲೇಜು ಮೈದಾನದಲ್ಲಿ ಸುಸಜ್ಜಿತ ವೇದಿಕೆ ನಿರ್ಮಾಣ, ಕಾಲೇಜು ಆವರಣದಲ್ಲಿ ವಸ್ತು ಪ್ರದರ್ಶನ ಮಳಿಗೆ ನಿರ್ಮಾಣ ಸಂಬಂಧ ಸಭೆಯಲ್ಲಿ ಚರ್ಚಿಸಲಾಯಿತು.

    ದಸರಾ ಕ್ರೀಡಾಕೂಟದಲ್ಲಿ ದೇಶಿಯ ಕ್ರೀಡೆಗಳಾದ ಕಬ್ಬಡಿ, ಖೋಖೋ ಕ್ರೀಡೆಗಳಿಗೆ ಆದ್ಯತೆ ನೀಡಬೇಕು. ಗ್ರಾಮೀಣ ಯುವ ಸಮೂಹವನ್ನು ಆಕರ್ಷಿಸುವ ಮಾದರಿಯಲ್ಲಿ ಜಿಲ್ಲಾ ಮಟ್ಟದಲ್ಲಿ ಕ್ರೀಡಾ ಸ್ಪರ್ಧೆಗಳನ್ನು ಆಯೋಜಿಸುವಂತೆ ಸೂಚಿಸಿದರು.

    ಜಿಲ್ಲೆಯಲ್ಲಿ ಪ್ರಚಲಿತವಿರುವ ಕಲೆ, ಕಲಾವಿದರು/ಕಲಾತಂಡಗಳನ್ನು ಗುರುತಿಸಿ ಅವರಿಂದ ಸಾಂಸ್ಕೃತಿಕ ಪ್ರದರ್ಶನವನ್ನು ವ್ಯವಸ್ಥೆಗೊಳಿಸಲು ಸೂಚಿಸಿದ ಅವರು, ಜಾನಪದ ಗೀತೆಗಳ ಗಾಯನ ಕಾರ್ಯಕ್ರಮವನ್ನು ಆಯೋಜಿಸಲು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಈಶ್ವರ್ ಮಿರ್ಜಿ ಅವರಿಗೆ ಸೂಚಿಸಿದರು.

    ಕಾರ್ಯಕ್ರಮದಲ್ಲಿ ಯುವ ಪ್ರತಿಭೆಗಳಿಗೆ ಅವಕಾಶ / ವೇದಿಕೆ ಒದಗಿಸುವ ನಿಟ್ಟಿನಲ್ಲಿ ಯುವ ದಸರಾ ಕಾರ್ಯಕ್ರಮವನ್ನು ಏರ್ಪಡಿಸಲು ತಿಳಿಸಿದರಲ್ಲದೆ, ಈ ಕಾರ್ಯಕ್ರಮಕ್ಕೆ ಜಿಲ್ಲೆಯ ಹಿನ್ನೆಲೆಯುಳ್ಳ ಕನ್ನಡ ಚಲನಚಿತ್ರ ರಂಗದ  ಕಲಾವಿದರನ್ನು ಆಹ್ವಾನಿಸುವಂತೆ ಸೂಚಿಸಿದ ಅವರು, ಅಕ್ಟೋಬರ್ 11ರ ಸಂಜೆ  6 ಗಂಟೆಗೆ ಖ್ಯಾತ ನಟರಿಂದ ಯುವದಸರಾ ಕಾರ್ಯಕ್ರಮವನ್ನು  ಸೂಚಿಸಿದರು.

    ತುಮಕೂರು ದಸರಾ ಪ್ರಯುಕ್ತ ತುಮಕೂರು ನಗರದ ಅಮಾನಿಕೆರೆಯ ಆವರಣದಲ್ಲಿ ತೆಪ್ಪೋತ್ಸವ ಕಾರ್ಯಕ್ರಮವನ್ನು ಆಯೋಜಿಸಲು ಹಾಗೂ ತುಮಕೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ ಬೋಟಿಂಗ್, ಸ್ಫೀಡ್ ಬೋಟಿಂಗ್, ಮೋಟರ್ ಬೋಟಿಂಗ್, ಪೆಡ್ಲಿಂಗ್ ಬೋಟಿಂಗ್ ಹಾಗೂ ಫ್ಯಾಮಿಲಿ ಬೋಟಿಂಗ್ ವ್ಯವಸ್ಥೆಗಳನ್ನು ಮಾಡಬೇಕೆಂದು ಸೂಚಿಸಿದರು.

    ದಸರಾ ಅಂಗವಾಗಿ ಸಿಡಿಮದ್ದು ಪ್ರದರ್ಶನವನ್ನು ನಗರದ  ಅಮಾನಿಕೆರೆ ಆವರಣದಲ್ಲಿ ಏರ್ಪಡಿಸುವ ಸಂಬಂಧ ಅಗತ್ಯ ಕ್ರಮವಹಿಸಿ ಇದರ ಪೂರ್ಣ ಮೇಲ್ವಿಚಾರಣೆಯನ್ನು ಪರಿಸರ ಮಾಲಿನ್ಯ ಅಧಿಕಾರಿಗಳಿಗೆ ವಹಿಸಿದರು.

    ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ. ಅಶೋಕ್ ಅವರು ದಸರಾ ಆಚರಣೆ ಸಂಬಂಧ ಅಗತ್ಯ ಸಲಹೆಗಳನ್ನು ನೀಡಿದರು.

    ಅಪರ ಜಿಲ್ಲಾಧಿಕಾರಿ ಡಾ.ಎನ್.ತಿಪ್ಪೇಸ್ವಾಮಿ ಮಾತನಾಡಿ, ಜಿಲ್ಲೆಯ ಎಲ್ಲಾ ಇಲಾಖೆಗಳು ತುಮಕೂರು ದಸರಾ ಆಚರಣೆ ಸಂಬಂಧ ತಮ್ಮ ಇಲಾಖೆಗೆ ವಹಿಸಿರುವ  ಕಾರ್ಯಸೂಚಿಗಳನ್ನು ಇನ್ನೆರಡು ದಿನಗಳೊಳಗಾಗಿ ಒದಗಿಸುವಂತೆ ಸೂಚನೆ ನೀಡಿದರು.

    ಸಭೆಯಲ್ಲಿ ಉಪವಿಭಾಗಾಧಿಕಾರಿ ಗೌರವ್ ಕುಮಾರ್ ಶೆಟ್ಟಿ, ಜಿಲ್ಲಾ ಪಂಚಾಯತ್ ಯೋಜನಾಧಿಕಾರಿ ನಾರಾಯಣಸ್ವಾಮಿ, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಬಾಲಗುರುಮೂರ್ತಿ, ಡಿಡಿಪಿಐ ಮಂಜುನಾಥ್, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ದಿನೇಶ್, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಎಂ. ಕೃಷ್ಣಪ್ಪ,  ತೋಟಗಾರಿಕೆ ಇಲಾಖೆ ಉಪ ನಿರ್ದೇಶಕ ಶಾರದಮ್ಮ, ಜಂಟಿ ಕೃಷಿ ನಿರ್ದೇಶಕ ರಮೇಶ್, ಜಿಲ್ಲಾ ಉದ್ಯೋಗಾಧಿಕಾರಿ ಕಿರಣ್ ಕುಮಾರ್, ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ರೋಹಿತ್ ಗಂಗಾಧರ್, ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿ ಡಿ.ರಂಗರಾಜು ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಜರಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

    admin
    • Website

    Related Posts

    ಮಂತ್ರಾಲಯದಲ್ಲಿ ಜೂನ್ 26ಕ್ಕೆ “ರಾಯರ ದರ್ಶನ” ಆಲ್ಬಮ್ ಬಿಡುಗಡೆ: ಕಾಡು ಸಿದ್ದೇಶ್ವರ ಮಠದ ಶ್ರೀಗಳಿಗೆ ಆಹ್ವಾನ

    June 12, 2026

    ತುಮಕೂರು: UGD ಓಪನ್ ಆಗಿ ಸಾರ್ವಜನಿಕರಿಗೆ ತೊಂದರೆ, ಪಾಲಿಕೆ ಮೌನ

    June 12, 2026

    ತುಮಕೂರು ವಿಶ್ವವಿದ್ಯಾನಿಲಯ: ವಿವಿಧ ಪದವಿಗಳ ಉಳಿಕೆ ಸೀಟುಗಳ ಪ್ರವೇಶಾತಿಗೆ ಅರ್ಜಿ ಆಹ್ವಾನ

    June 11, 2026

    Comments are closed.

    Our Picks

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಮಂತ್ರಾಲಯದಲ್ಲಿ ಜೂನ್ 26ಕ್ಕೆ “ರಾಯರ ದರ್ಶನ” ಆಲ್ಬಮ್ ಬಿಡುಗಡೆ: ಕಾಡು ಸಿದ್ದೇಶ್ವರ ಮಠದ ಶ್ರೀಗಳಿಗೆ ಆಹ್ವಾನ

    June 12, 2026

    ಮಂತ್ರಾಲಯ:  ಇಲ್ಲಿನ ಪ್ರಸಿದ್ಧ ಶ್ರೀ ರಾಘವೇಂದ್ರ ಸ್ವಾಮಿ ಮಠದ ಆವರಣದಲ್ಲಿ ಇದೇ ಜೂನ್ 26ರಂದು ಅತ್ಯಂತ ಅದ್ದೂರಿಯಾಗಿ ಹಮ್ಮಿಕೊಳ್ಳಲಾಗಿರುವ “ರಾಯರ…

    ಲೋಕಾಯುಕ್ತರಿಂದ 56 ಜನರ ಅಹವಾಲು ಸ್ವೀಕಾರ:  ಜಮೀನು ಖಾಸಗಿ ವ್ಯಾಜ್ಯಗಳೇ ಹೆಚ್ಚು.. ಪಡಿತರ ಕಾರ್ಡಿನ ಮಾಹಿತಿಯೇ ನೀಡಲ್ವಂತೆ!

    June 12, 2026

    ಪಾವಗಡ: ನಿಯಮ ಉಲ್ಲಂಘನೆ, ವೆಂಕಟೇಶ್ವರ ಕಲ್ಲುಗಣಿ ಗುತ್ತಿಗೆ ರದ್ದುಪಡಿಸಿ ಇಲಾಖೆ ಖಡಕ್ ಆದೇಶ! | ಶಾಸಕ ವೆಂಕಟೇಶ್ ವಿರುದ್ಧ ಎಫ್‌ ಐಆರ್ ದಾಖಲಿಸಲು ಒತ್ತಾಯ

    June 12, 2026

    ಜುಲೈ 15ರಂದು ಎಲ್ಲಾ ರೈತಪರ ಸಂಘಟನೆಗಳು, ಮುಖಂಡರೊಂದಿಗೆ ಹೇಮಾವತಿ ನಾಲಾ ವೀಕ್ಷಣೆ: ಶಾಸಕ ಸಿ.ಬಿ. ಸುರೇಶ್‌ ಬಾಬು ಕರೆ

    June 12, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.