nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮದ್ಯ ಪ್ರಿಯರಿಗೆ ಬೆಲೆ ಏರಿಕೆ ಶಾಕ್: ರಾಜ್ಯದಲ್ಲಿ ಮತ್ತೆ ದುಬಾರಿಯಾಗಲಿದೆಯೇ ಮದ್ಯ?

    April 19, 2026

    ಕೊರಟಗೆರೆ: ಹಳೇ ದ್ವೇಷಕ್ಕೆ ಮನೆ ಮುಂದಿನ ವಾಹನಗಳಿಗೆ ಬೆಂಕಿ ಹಚ್ಚಿದ್ದ ವೈದ್ಯನ ಬಂಧನ

    April 19, 2026

    ಚಿರತೆಯಿಂದ ಅತ್ತೆಯನ್ನು ರಕ್ಷಿಸಿದ ಸೊಸೆ ಸುಜಾತಾಗೆ ‘ಕಿತ್ತೂರು ರಾಣಿ ಚೆನ್ನಮ್ಮ’ ಪ್ರಶಸ್ತಿ

    April 19, 2026
    Facebook Twitter Instagram
    ಟ್ರೆಂಡಿಂಗ್
    • ಮದ್ಯ ಪ್ರಿಯರಿಗೆ ಬೆಲೆ ಏರಿಕೆ ಶಾಕ್: ರಾಜ್ಯದಲ್ಲಿ ಮತ್ತೆ ದುಬಾರಿಯಾಗಲಿದೆಯೇ ಮದ್ಯ?
    • ಕೊರಟಗೆರೆ: ಹಳೇ ದ್ವೇಷಕ್ಕೆ ಮನೆ ಮುಂದಿನ ವಾಹನಗಳಿಗೆ ಬೆಂಕಿ ಹಚ್ಚಿದ್ದ ವೈದ್ಯನ ಬಂಧನ
    • ಚಿರತೆಯಿಂದ ಅತ್ತೆಯನ್ನು ರಕ್ಷಿಸಿದ ಸೊಸೆ ಸುಜಾತಾಗೆ ‘ಕಿತ್ತೂರು ರಾಣಿ ಚೆನ್ನಮ್ಮ’ ಪ್ರಶಸ್ತಿ
    • ಜನಗಣತಿ ಆ್ಯಪ್ ತಲೆನೋವು: ತುಮಕೂರಿನಲ್ಲಿ ಶಿಕ್ಷಕರ ಹೈರಾಣು!
    • ಏ.20ರಂದು ಶ್ರೀಜಗಜ್ಯೋತಿ ಬಸವೇಶ್ವರರ ಜಯಂತಿ
    • ಎತ್ತಿನಹೊಳೆ ಯೋಜನೆಗೆ ಅರಣ್ಯ ಇಲಾಖೆ ಅನುಮತಿ: ಕಾಮಗಾರಿ ವೇಗ, ಅಧಿಕಾರಿಗಳಿಗೆ ಅಭಿನಂದನೆ
    • ವಿದ್ಯಾವಂತರಲ್ಲೇ ಹೆಚ್ಚುತ್ತಿರುವ ಜಾತಿ ಪ್ರಜ್ಞೆ: ಲೇಖಕಿ ಎಂ.ಸಿ.ಲಲಿತ ವಿಷಾದ
    • ತಿಪಟೂರು: ಬೆಡ್‌ ಶೀಟ್ ಕಾರ್ಖಾನೆಯಲ್ಲಿ ಭೀಕರ ಅಗ್ನಿ ಅವಘಡ; ಪಕ್ಕದ ಪೊರಕೆ ತಯಾರಿಕಾ ಘಟಕಕ್ಕೂ ಬೆಂಕಿ ಕೆನ್ನಾಲಿಗೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಉದ್ಯೋಗ ಕೌಶಲ್ಯದ ಬಗ್ಗೆ  ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸಿ: ಕಾಲೇಜು ಶಿಕ್ಷಣ ಇಲಾಖೆ ಜಂಟಿ ನಿರ್ದೇಶಕ ಡಾ.ಕೆ.ರಾಮಕೃಷ್ಣರೆಡ್ಡಿ ಕರೆ
    ತುಮಕೂರು March 12, 2024

    ಉದ್ಯೋಗ ಕೌಶಲ್ಯದ ಬಗ್ಗೆ  ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸಿ: ಕಾಲೇಜು ಶಿಕ್ಷಣ ಇಲಾಖೆ ಜಂಟಿ ನಿರ್ದೇಶಕ ಡಾ.ಕೆ.ರಾಮಕೃಷ್ಣರೆಡ್ಡಿ ಕರೆ

    By adminMarch 12, 2024No Comments2 Mins Read
    vadvani

    ತುಮಕೂರು: ಪದವಿ ಕಾಲೇಜುಗಳಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳ ಭವಿಷ್ಯದ ದೃಷ್ಟಿಯಿಂದ ಉದ್ಯೋಗ ಕೌಶಲದ ಕುರಿತು ಸಮಗ್ರ ಮಾಹಿತಿ ನೀಡುವುದರ ಮೂಲಕ ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸಬೇಕು ಎಂದು ಕಾಲೇಜು ಶಿಕ್ಷಣ ಇಲಾಖೆ ಜಂಟಿ ನಿರ್ದೇಶಕ ಡಾ.ಕೆ.ರಾಮಕೃಷ್ಣರೆಡ್ಡಿ ಕರೆ ನೀಡಿದರು.

    ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸೋಮವಾರ ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ಮತ್ತು ವಾದ್ವಾನಿ ಫೌಂಡೇಶನ್ ಸಹಭಾಗಿತ್ವದಲ್ಲಿ ಉದ್ಯೋಗ ಕೌಶಲ್ಯ ತರಬೇತಿ ಕಾರ್ಯಗಾರ ಹಾಗೂ ಭೋದಕರಿಗೆ ಕಾರ್ಯಗಾರವನ್ನು ಉದ್ಘಾಟಿಸಿ ಮಾತನಾಡಿದರು.


    Provided by
    Provided by

    ರಾಜ್ಯದಲ್ಲಿ ಬರುವಂತ ಸರ್ಕಾರಗಳು ಶಿಕ್ಷಣಕ್ಕೆ ಹಾಗೂ ಉದ್ಯೋಗಕ್ಕೆ ಹೆಚ್ಚಿನ ಆಧ್ಯತೆಯನ್ನು ನೀಡುತ್ತಾ ಬಂದಿವೆ. ವಿಶೇಷವಾಗಿ ಪದವಿ ಮುಗಿಸಿದ ವಿದ್ಯಾರ್ಥಿಗಳು ಉದ್ಯೋಗಕ್ಕಾಗಿ ಅಲೆಯುವುದನ್ನು ತಪ್ಪಿಸಲು ಉದ್ಯೋಗ ಕೌಶಲ್ಯ ತರಬೇತಿ ನೀಡುವುದು ಅಗತ್ಯವಿದೆ. ಹಾಗಾಗಿ ಕಾಲೇಜು ಶಿಕ್ಷಣ ಇಲಾಖೆಯು ವಾದ್ವಾನಿ  ಫೌಂಡೇಶನ್ ಜೊತೆ ಸೇರಿಕೊಂಡು ರಾಜ್ಯದ ಎಲ್ಲಾ ಪದವಿ ಕಾಲೇಜುಗಳಲ್ಲಿಯೂ ಉದ್ಯೋಗ ಕೌಶಲ್ಯದ ಕುರಿತು ಬೋಧಕರಿಗೆ ತರಬೇತಿಯನ್ನು ನೀಡಲಾಗುತ್ತಿದ್ದು, ಕಲಿಯುವಂತ ಪದವಿ ವಿದ್ಯಾರ್ಥಿಗಳ ಮನೆ ಬಾಗಿಲಿಗೆ ಉದ್ಯೋಗ ಕೌಶಲ್ಯದ ಮಹತ್ವವನ್ನು ತಿಳಿಸುವ ಕೆಲಸ ಮಾಡಬೇಕು ಎಂದು ಹೇಳಿದರು.

    ಕಾಲಕಾಲಕ್ಕೆ ತಕ್ಕಂತೆ ಕಲಿಸುವಂತಹ ವಿಷಯಗಳಲ್ಲೂ ಬದಲಾವಣೆಯಾಗುತ್ತಾ ಹೋಗುತ್ತದೆ. ಸರ್ಕಾರ ಹಾಕಿಕೊಟ್ಟ ಮಾರ್ಗದರ್ಶನದಲ್ಲಿ ಇಲಾಖೆ ನಡೆದುಕೊಳ್ಳುತ್ತಿದೆ. ಇಲಾಖೆಯಲ್ಲಿ ಹಣದ ಕೊರತೆಯಿಲ್ಲ. ಸಣ್ಣ-ಪುಟ್ಟ ಸಮಸ್ಯೆಗಳು ಪದವಿ ಕಾಲೇಜುಗಳಲ್ಲಿ ಎದುರಾಗುತ್ತವೆ. ಅವುಗಳನ್ನು ನಿಭಾಯಿಸುವ ಶಕ್ತಿಯೂ ನಮ್ಮಲ್ಲಿರುತ್ತದೆ ಅದಕ್ಕಾಗಿ ನಾವು ದೃಡ ಸಂಕಲ್ಪ ಮಾಡಬೇಕಿದೆ. ಸರ್ಕಾರವು ಇಲಾಖೆಗೆ ಎಲ್ಲಾ ರೀತಿಯ ಸಹಕಾರವನ್ನು ನೀಡುತ್ತಿದ್ದು, ಅಷ್ಟೇ ನಿಷ್ಟೆಯಿಂದ ಬೋಧಕರು ಕೂಡ ವಿದ್ಯಾರ್ಥಿಗಳಿಗೆ ಉತ್ತಮ ಬೋಧನೆ ಮಾಡಬೇಕು. ಅದಾಗದಿದ್ದರೆ ನಮಗೆ ನಾವು ಮಾಡಿಕೊಂಡ ದ್ರೋಹ ಎಂದು ಅಸಮಾಧಾನ ವ್ಯಕ್ತಪಡಿಸಿದರು.

    ಇಲಾಖೆಯು ವಿದ್ಯಾರ್ಥಿಗಳ ಹಿತಕಾಯುವ ಕೆಲಸ ಮಾಡುತ್ತಿದೆ. ವಿದ್ಯಾರ್ಥಿಗಳ ಫಲಿತಾಂಶದಲ್ಲಿ ಖಾಸಗಿ ಪದವಿ ಕಾಲೇಜುಗಳನ್ನು ಹಿಂದಿಕ್ಕುವ ಕೆಲಸವನ್ನು ಸರ್ಕಾರಿ ಪದವಿ ಕಾಲೇಜುಗಳು ಮಾಡಬೇಕಿದೆ ಎಂದರು.

    ವಿಶೇಷ ಶಿಕ್ಷಣಾಧಿಕಾರಿ ಶ್ರೀಕಾಂತ್ ಮಾತನಾಡಿ, ರಾಜ್ಯದ ಪ್ರತಿಯೊಂದು ಕಾಲೇಜಿನಲ್ಲಿಯೂ ಉದ್ಯೋಗ ಕೌಶಲ್ಯ ಮಾಹಿತಿ ತಲುಪಿಸುವ ಉದ್ದೇಶದಿಂದ ಪದವಿ ಕಾಲೇಜಿನ ಇಬ್ಬರು ಬೋಧಕರಿಗೆ ಈ ಕುರಿತು ತರಬೇತಿ ನೀಡಲಾಗುತ್ತಿದೆ ಎಂದು ಹೇಳಿದರು.

    ವಾಗ್ದಾವಿ ಫೌಂಡೇಶನ್ ತರಬೇತುದಾರ ವಿನಯ್ ಮಾತನಾಡಿ, ನಮ್ಮ ಸಂಸ್ಥೆಯು ನಿರುದ್ಯೋಗ ಸಮಸ್ಯೆಗೆ ಪರಿಹಾರ ಸೂಚಿಸುವಂತ ಕೆಲಸವನ್ನು ಮಾಡುತ್ತಾ ಬಂದಿದೆ. ಹಾಗೆಯೆ ಸರ್ಕಾರಕ್ಕೆ ಉದ್ಯೋಗ ಕೌಶಲ್ಯದ ಬಗ್ಗೆಯೂ ಮಾಹಿತಿ ನೀಡಲಾಗಿತ್ತು. ಅದರಂತೆ ಇಲಾಖೆ ನಮಗೆ ಸ್ಪಂದಿಸಿ ತರಬೇತಿ ನೀಡಲು ಒಪ್ಪಿದೆ. ಪದವಿ ಕಲಿತ ಯುವಕರು ಸ್ವಯಂ ಉದ್ಯೋಗ ಮಾಡಿಕೊಂಡು ಬದುಕು ರೂಪಿಸಿಕೊಳ್ಳಬೇಕು ಎಂದರು.

    ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ತರುನ್ನುಂ ನಿಖತ್ ಎಸ್ ಮಾತನಾಡಿ, ವಿದ್ಯಾರ್ಥಿಗಳ ಭವಿಷ್ಯದ ಹಿತದೃಷ್ಟಿಯಿಂದ ಸರ್ಕಾರ ಹಾಗೂ ಇಲಾಖೆಯು ಉದ್ಯೋಗ ಕೌಶಲ್ಯ ಕಾರ್ಯಕ್ರಮವನ್ನು ರೂಪಿಸಿರುವುದು ಒಳ್ಳೆಯದು. ಇದು ದೂರದೃಷ್ಟಿಯ ಕಾರ್ಯಕ್ರಮವಾಗಿದೆ. ಬೋಧಕರು ತರಬೇತಿಯಲ್ಲಿ ನೀಡುವ ಅಂಶಗಳನ್ನು ಅರಿತುಕೊಂಡು ತಮ್ಮ ತಮ್ಮ ಕಾಲೇಜಿನ ವಿದ್ಯಾರ್ಥಿಗಳಿಗೆ ಈ ಯೋಜನೆಯ ಲಾಭಂಶವನ್ನು ತಿಳಿಸುವ ಕೆಲಸ ಮಾಡಬೇಕು ಎಂದರು.

    ವಿದ್ಯಾರ್ಥಿಗಳ ಭವಿಷ್ಯದ ಮಹತ್ವ ಸಾರುವ ತರಬೇತಿ ಕಾರ್ಯಗಾರವನ್ನು ಮಾಡಲು ನಮಗೆ ಸಿಕ್ಕ ಅವಕಾಶವನ್ನು ನಾವೆಲ್ಲಾ ಉತ್ತಮವಾಗಿ ಬಳಸಿಕೊಂಡು ಎಲ್ಲರ ಸಹಕಾರದೊಂದಿಗೆ ಕಾರ್ಯಕ್ರಮವನ್ನು ಯಶಸ್ವಗೊಳಿಸೋಣ. ಉದ್ಯೋಗ ಕೌಶಲ್ಯದಿಂದ ನಿರುದ್ಯೋಗ ನಿರ್ಮೂಲನೆಯಾಗಲಿದೆ. ಈ ನಿಟ್ಟಿನಲ್ಲಿ ಪ್ರತಿಯೊಬ್ಬ ವಿದ್ಯಾರ್ಥಿಗೂ ಉದ್ಯೋಗ ಕೌಶಲ್ಯದ ಬಗ್ಗೆ ಅರಿವು ಮೂಡಿಸುವ ಕೆಲಸವನ್ನು ಮಾಡೋಣ ಎಂದು ಹೇಳಿದರು.

    ಕಾರ್ಯಕ್ರಮದಲ್ಲಿ ಕಾಲೇಜು ಶಿಕ್ಷಣ ಇಲಾಖೆಯ ಮಂಜುನಾಥ್, ಹರಿಬಾಲಚಂದ್ರನ್, ಕೆ.ಸಿ.ಬಸವರಾಜ್, ಮಾಸ್ಟರ್ ಟ್ರೈನರ್ ಸ್ವಾತಿ ಇದ್ದರು. ಸ್ವಾಗತವನ್ನು ಪ್ರೊ. ಗಂಗಾಧರ, ವಂದನಾರ್ಪಣೆಯನ್ನು ಡಾ.ರೇಣುಕ ನೆರವೇರಿಸಿಕೊಟ್ಟರು.

    ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಹೆಚ್ಚು ಪ್ರವೇಶ ಪಡೆಯುತ್ತಿದ್ದಾರೆ. ಫಲಿತಾಂಶದಲ್ಲಿ ಖಾಸಗಿ ಕಾಲೇಜಿಗೆ ಸೆಡ್ಡು ಹೊಡೆದು ಸರ್ಕಾರಿ ಕಾಲೇಜುಗಳನ್ನು ಮುನ್ನಲೆಗೆ ತರುವ ಕೆಲಸವನ್ನು ಬೋಧಕರು ಮಾಡಬೇಕು. ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಪ್ರತಿಯೊಬ್ಬರೂ ಕ್ಷೇತ್ರದ ಕೆಲಸವನ್ನು ತಮ್ಮ ಮನೆಯ ಕೆಲಸವೆಂದು ಭಾವಿಸಿ ತಮಗೆ ಸಿಕ್ಕಿರುವ ಅವಕಾಶವನ್ನು ವ್ಯವಸ್ಥಿತವಾಗಿ ಬಳಸಿಕೊಂಡು ಮುಂದೆ ಬರಬೇಕು.

    –ಡಾ.ಕೆ.ರಾಮಕೃಷ್ಣರೆಡ್ಡಿ, ಕಾಲೇಜು ಶಿಕ್ಷಣ ಇಲಾಖೆ ಜಂಟಿ ನಿರ್ದೇಶಕ

    admin
    • Website

    Related Posts

    ಜನಗಣತಿ ಆ್ಯಪ್ ತಲೆನೋವು: ತುಮಕೂರಿನಲ್ಲಿ ಶಿಕ್ಷಕರ ಹೈರಾಣು!

    April 19, 2026

    ಏ.20ರಂದು ಶ್ರೀಜಗಜ್ಯೋತಿ ಬಸವೇಶ್ವರರ ಜಯಂತಿ

    April 19, 2026

    ಎತ್ತಿನಹೊಳೆ ಯೋಜನೆಗೆ ಅರಣ್ಯ ಇಲಾಖೆ ಅನುಮತಿ: ಕಾಮಗಾರಿ ವೇಗ, ಅಧಿಕಾರಿಗಳಿಗೆ ಅಭಿನಂದನೆ

    April 19, 2026

    Comments are closed.

    Our Picks

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಮದ್ಯ ಪ್ರಿಯರಿಗೆ ಬೆಲೆ ಏರಿಕೆ ಶಾಕ್: ರಾಜ್ಯದಲ್ಲಿ ಮತ್ತೆ ದುಬಾರಿಯಾಗಲಿದೆಯೇ ಮದ್ಯ?

    April 19, 2026

    ಬೆಂಗಳೂರು: ಕರ್ನಾಟಕದ ಮದ್ಯ ಪ್ರಿಯರಿಗೆ ರಾಜ್ಯ ಸರ್ಕಾರ ಶಾಕ್ ನೀಡಲು ಮುಂದಾಗಿದೆ. ಶೀಘ್ರದಲ್ಲೇ ಮದ್ಯದ ಬೆಲೆಯಲ್ಲಿ ಶೇಕಡಾ 20 ರಷ್ಟು…

    ಕೊರಟಗೆರೆ: ಹಳೇ ದ್ವೇಷಕ್ಕೆ ಮನೆ ಮುಂದಿನ ವಾಹನಗಳಿಗೆ ಬೆಂಕಿ ಹಚ್ಚಿದ್ದ ವೈದ್ಯನ ಬಂಧನ

    April 19, 2026

    ಚಿರತೆಯಿಂದ ಅತ್ತೆಯನ್ನು ರಕ್ಷಿಸಿದ ಸೊಸೆ ಸುಜಾತಾಗೆ ‘ಕಿತ್ತೂರು ರಾಣಿ ಚೆನ್ನಮ್ಮ’ ಪ್ರಶಸ್ತಿ

    April 19, 2026

    ಜನಗಣತಿ ಆ್ಯಪ್ ತಲೆನೋವು: ತುಮಕೂರಿನಲ್ಲಿ ಶಿಕ್ಷಕರ ಹೈರಾಣು!

    April 19, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.