ಬಾಗಲಕೋಟೆ ಜಿಲ್ಲೆ ಹುನಗುಂದ ಪಟ್ಟಣದ ಸರಕಾರಿ ಪದವಿ ಕಾಲೇಜಿನಲ್ಲಿ ನೇಣು ಹಾಕಿಕೊಂಡು ಕಾಲೇಜು ಪ್ರಿನ್ಸಿಪಾಲ್ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ನಾಗರಾಜ ಮುದಗಲ್(56) ಆತ್ಮಹತ್ಯೆ ಮಾಡಿಕೊಂಡ ಪ್ರಿನ್ಸಿಪಾಲ್. ಇಂದು “ಜಾನಪದ ಜಾತ್ರೆ ಹೊನ್ನ ಸಂಭ್ರಮ ಎಂಬ ಕಾರ್ಯಕ್ರಮ ಇತ್ತು. ನಿನ್ನೆ ವಿವಿಧ ಕಡೆ ತೆರಳಿ ಆಮಂತ್ರಣ ಕೊಟ್ಟು ಬಂದಿದ್ದ ಪ್ರಿನ್ಸಿಪಾಲ್, ಇಂದು ಬೆಳಿಗ್ಗೆ ನೇಣು ಹಾಕಿಕೊಂಡ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.


