ಶಿವಮೊಗ್ಗ: ಶಿವಮೊಗ್ಗದ ಸಾಗರದ ಸೊರಬ ಗೇಟ್ ಸಮೀಪ ಕಾಲೇಜು ವಿದ್ಯಾರ್ಥಿನಿಯೊಬ್ಬಳು ರೈಲಿಗೆ ಸಿಲುಕಿ ಪ್ರಾಣ ಕಳೆದುಕೊಂಡ ಘಟನೆ ನಡೆದಿದೆ. ಭೂಮಿಕಾ (17) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿಯಾಗಿದ್ದಾಳೆ.
ಭೂಮಿಕಾ ಸಿರಿವಂತೆ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ಓದುತ್ತಿದ್ದಳು. ಸ್ಥಳಕ್ಕೆ ಸಾಗರ ರೈಲ್ವೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಈ ಸಂಬಂಧ ಪ್ರಕರಣ ದಾಖಲಾಗಿದ್ದು, ತನಿಖೆಯನ್ನು ನಡೆಸುತ್ತಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


