ಕೊರಟಗೆರೆ: ತಾಲೂಕಿನ ಸಿದ್ದರಬೆಟ್ಟದಲ್ಲಿದ್ದ ಹಳೆಯ ಸ್ನೇಹಿತನನ್ನು ಮಾತನಾಡಿಸಿಕೊಂಡು ಬೈಕ್‌ನಲ್ಲಿ ವಾಪಸ್ ಹಿಂತಿರುಗುತ್ತಿದ್ದಾಗ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ, ಪಟ್ಟಣದ ಅಂಬೇಡ್ಕರ್ ವಸತಿ ಶಾಲೆಯ ವಿದ್ಯಾರ್ಥಿಯೊಬ್ಬ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದು, ಮತ್ತಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಕೊರಟಗೆರೆ ತಾಲೂಕಿನ ಸಿದ್ದರಬೆಟ್ಟದ ಅರಣ್ಯ ಇಲಾಖೆ ನರ್ಸರಿ ಸಮೀಪದ ತಿರುವಿನಲ್ಲಿ ಈ ದುರಂತ ಸಂಭವಿಸಿದೆ.
ಅಪಘಾತದಲ್ಲಿ 17 ವರ್ಷದ ಚೇತನ್ ಎಂಬ ವಿದ್ಯಾರ್ಥಿ ತೀವ್ರ ರಕ್ತಸ್ರಾವದಿಂದ ಸ್ಥಳದಲ್ಲೇ ಮೃತಪಟ್ಟಿದ್ದರೆ, ಆತನ ಜೊತೆಯಲ್ಲಿದ್ದ 17 ವರ್ಷದ ಅಮರೀಶ್ ಹಾಗೂ ಯಶ್ವಂತ್ ತೀವ್ರವಾಗಿ ಗಾಯಗೊಂಡಿದ್ದಾರೆ.
ಸ್ನೇಹಿತನನ್ನು ಭೇಟಿಯಾಗಿ ಸಿದ್ದರಬೆಟ್ಟದಿಂದ ವಾಪಸ್ ಬರುವಾಗ ನರ್ಸರಿ ಬಳಿಯ ತಿರುವಿನಲ್ಲಿ ವಿದ್ಯಾರ್ಥಿಗಳು ಸಂಚರಿಸುತ್ತಿದ್ದ ದ್ವಿಚಕ್ರ ವಾಹನ ನಿಯಂತ್ರಣ ತಪ್ಪಿ, ರಸ್ತೆ ಬದಿಯಲ್ಲಿದ್ದ ಮರದ ತುಂಡಿಗೆ ರಭಸದಿಂದ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ.
ಇದೇ ಮಾರ್ಗದಲ್ಲಿ ಸಂಚರಿಸುತ್ತಿದ್ದ ತೋವಿನಕೆರೆ 108 ಆಂಬುಲೆನ್ಸ್ ಸಿಬ್ಬಂದಿ ಉಮಾದೇವಿ ಹಾಗೂ ಶಿವಕುಮಾರ್ ಅವರು ಅಪಘಾತವನ್ನು ಕಂಡು ತಕ್ಷಣವೇ ಗಾಯಾಳುಗಳನ್ನು ಕೊರಟಗೆರೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಪ್ರಥಮ ಚಿಕಿತ್ಸೆ ಕೊಡಿಸಿದ್ದಾರೆ.
ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಗಾಯಾಳುಗಳನ್ನು ತುಮಕೂರು ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿದೆ. ಈ ಸಂಬಂಧ ಕೊರಟಗೆರೆ ಪೊಲೀಸ್ ಠಾಣೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.
ವರದಿ: ಮಂಜುಸ್ವಾಮಿ ಎಂ.ಎನ್.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC
