nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸಚಿವ ಸಂಪುಟ ವಿಸ್ತರಣೆ: ಎಚ್.ಕೆ. ಪಾಟೀಲ್ ಗೆ ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ಗದಗ–ಬೆಟಗೇರಿ ನಗರಸಭೆಯ 22 ಸದಸ್ಯರ ಸಾಮೂಹಿಕ ರಾಜೀನಾಮೆ

    August 5, 2026

    ತುಮಕೂರು ಕಾಂಗ್ರೆಸ್ ನಲ್ಲಿ ಆಕ್ರೋಶ ಸ್ಫೋಟ: ವಿಪಕ್ಷ ಸಾಲಿನಲ್ಲಿ ಆಸನ ಕೋರಿದ ಟಿ.ಬಿ. ಜಯಚಂದ್ರ, ಹೆಚ್ ಡಿಕೆಯನ್ನು ಹೊಗಳಿದ ಶಾಸಕ ಶ್ರೀನಿವಾಸ್

    August 5, 2026

    ಸಚಿವ ಸ್ಥಾನ ಸಿಗಲಿಲ್ಲವೆಂದು ಪಕ್ಷದ ವಿರುದ್ಧ ಮಾತಾಡುವುದು ಸರಿಯಲ್ಲ: ಪ್ರಿಯಾಂಕ್ ಖರ್ಗೆ

    August 5, 2026
    Facebook Twitter Instagram
    ಟ್ರೆಂಡಿಂಗ್
    • ಸಚಿವ ಸಂಪುಟ ವಿಸ್ತರಣೆ: ಎಚ್.ಕೆ. ಪಾಟೀಲ್ ಗೆ ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ಗದಗ–ಬೆಟಗೇರಿ ನಗರಸಭೆಯ 22 ಸದಸ್ಯರ ಸಾಮೂಹಿಕ ರಾಜೀನಾಮೆ
    • ತುಮಕೂರು ಕಾಂಗ್ರೆಸ್ ನಲ್ಲಿ ಆಕ್ರೋಶ ಸ್ಫೋಟ: ವಿಪಕ್ಷ ಸಾಲಿನಲ್ಲಿ ಆಸನ ಕೋರಿದ ಟಿ.ಬಿ. ಜಯಚಂದ್ರ, ಹೆಚ್ ಡಿಕೆಯನ್ನು ಹೊಗಳಿದ ಶಾಸಕ ಶ್ರೀನಿವಾಸ್
    • ಸಚಿವ ಸ್ಥಾನ ಸಿಗಲಿಲ್ಲವೆಂದು ಪಕ್ಷದ ವಿರುದ್ಧ ಮಾತಾಡುವುದು ಸರಿಯಲ್ಲ: ಪ್ರಿಯಾಂಕ್ ಖರ್ಗೆ
    • ಕಾವೇರಿ ಅಚ್ಚುಕಟ್ಟು ಪ್ರದೇಶದಲ್ಲಿ ಮಳೆ ಚುರುಕು: 105 ಅಡಿಗೆ ತಲುಪಿದ ಕೆಆರ್ ಎಸ್ ಜಲಾಶಯದ ನೀರಿನ ಮಟ್ಟ
    • ಬಿಜೆಪಿಯವರು ಬರ ಅಧ್ಯಯನ ಮಾಡಿ ಕೇಂದ್ರಕ್ಕೆ ವರದಿ ನೀಡಲಿ: ಸಚಿವ ಸಂತೋಷ್ ಲಾಡ್
    • ನನ್ನ ಮತದಾನ ನನ್ನ ಹಕ್ಕು: ಎಸ್ಐಆರ್ ಜಾಗೃತಿ
    • 10 ಸಾವಿರ ಕೋಟಿ ಅನುದಾನ ಬಿಡುಗಡೆಗೆ ಆಗ್ರಹ:  ಕರ್ನಾಟಕದ 28 ಜಿಲ್ಲೆಗಳು ಮಳೆಯಿಲ್ಲದೇ ಬರಪೀಡಿತ |  ತುಮಕೂರಿನಲ್ಲಿ ಬಿಜೆಪಿ ಬರ ಅಧ್ಯಯನ
    • ಬಿಡುಗಡೆಗೂ ಮುನ್ನ ಭಾರಿ ನಿರೀಕ್ಷೆ ಮೂಡಿಸಿದ “ಓ ಮೈ ಡಾಗ್”  ಆಗಸ್ಟ್ 7ರಂದು  ಅದ್ದೂರಿ ರಿಲೀಸ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸಮಸ್ಯೆ ಆಲಿಸಲು ಜೊತೆಗೆ ಬನ್ನಿ: ಡಿ.ಕೆ. ಶಿವಕುಮಾರ್ ಗೆ ಬಿ.ಎಸ್. ಯಡಿಯೂರಪ್ಪ ಆಹ್ವಾನ
    Uncategorized November 11, 2023

    ಸಮಸ್ಯೆ ಆಲಿಸಲು ಜೊತೆಗೆ ಬನ್ನಿ: ಡಿ.ಕೆ. ಶಿವಕುಮಾರ್ ಗೆ ಬಿ.ಎಸ್. ಯಡಿಯೂರಪ್ಪ ಆಹ್ವಾನ

    By adminNovember 11, 2023No Comments2 Mins Read
    yadiyoorappa

    ಬೆಂಗಳೂರು: ಜನರ ಸಮಸ್ಯೆಗಳನ್ನು ಆಲಿಸಲು ಜೊತೆಯಾಗಿ ಹೋಗೋಣ; ನೀವೂ ಬನ್ನಿ ಎಂದು ಬಿಜೆಪಿ ಕೇಂದ್ರೀಯ ಸಂಸದೀಯ ಮಂಡಳಿ ಸದಸ್ಯ ಮತ್ತು ರಾಜ್ಯದ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇಂದು ಡಿಸಿಎಂ ಡಿ.ಕೆ. ಶಿವಕುಮಾರರಿಗೆ ಆಹ್ವಾನ ನೀಡಿದರು.

    ದಾಸರಹಳ್ಳಿ ಕ್ಷೇತ್ರದಲ್ಲಿ ಕ್ಷೇತ್ರದ ಅಭಿವೃದ್ಧಿ ಕಾಮಗಾರಿಗಳ ವೀಕ್ಷಣೆ ಮತ್ತು ಬರಗಾಲ ಪರಿಸ್ಥಿತಿ ಅಧ್ಯಯನ ನಡೆಸಿದ ಅವರು, ಈಗ ತಾನೇ ದಾಸರಹಳ್ಳಿ ಕ್ಷೇತ್ರದ ಪರಿಶೀಲನೆ ಮಾಡಿ, ರಸ್ತೆ ಕೆಲಸ ನೋಡಿದ್ದೇವೆ. ಚಿಕ್ಕಬಾಣಾವರ ಕೆರೆ ಯಾವ ಸ್ಥಿತಿಯಲ್ಲಿದೆ ಎಂದು ನೋಡಿದ್ದೇನೆ. ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಜಿಲ್ಲೆಯ ಉಸ್ತುವಾರಿ ಸಚಿವರಾಗಿದ್ದಾರೆ. ಅವರು ಬೆಂಗಳೂರು ನೋಡುತ್ತಿರುತ್ತಾರೆ. ರಸ್ತೆ ಹಾಳಾಗಿದೆ, ಕುಡಿಯುವ ನೀರಿನ ಸಮಸ್ಯೆ ಇದೆ. ಕೆರೆ ಹೂಳು ತುಂಬಿದೆ. ಅಭಿವೃದ್ಧಿಗೆ ಹಣ ಬಿಡುಗಡೆ ಮಾಡಿಲ್ಲ. ಈ ಕುರಿತು ಶಿವಕುಮಾರ್ ಅವರನ್ನು ಪ್ರಶ್ನಿಸುವುದಾಗಿ ತಿಳಿಸಿದರು.

    ಯಾವುದೇ ಅನುದಾನ ಬಿಡುಗಡೆ ಮಾಡಿಲ್ಲ. ಮುಖ್ಯಮಂತ್ರಿ ನಗರೋತ್ಥಾನ ಅಭಿವೃದ್ಧಿ ಅಡಿಯಲ್ಲಿ 110 ಹಳ್ಳಿಗೆ ಬಿಡುಗಡೆ ಆಗಿದ್ದ ಹಣ ವಾಪಸ್ ಪಡೆದಿದ್ದಾರೆ ಎಂದು ಆಕ್ಷೇಪಿಸಿದರು.
    ಪೀಣ್ಯ ಕೈಗಾರಿಕಾ ಪ್ರದೇಶವು ಏμÁ್ಯದಲ್ಲೇ ಅತಿ ಹೆಚ್ಚು ತೆರಿಗೆ ನೀಡುತ್ತದೆ. ಆ ಪ್ರದೇಶವನ್ನೇ ಸರಕಾರ ಕಡೆಗಣನೆ ಮಾಡಿದೆ. ಕಾವೇರಿ ನೀರು ಸರಬರಾಜು ಸರಿಯಾಗಿ ನಡೆದಿಲ್ಲ. ಒಳಚರಂಡಿ ಸಂಪೂರ್ಣ ಹಾಳಾಗಿದೆ. ರಸ್ತೆ ಗುಂಡಿ ಮುಚ್ಚುವ ಕೆಲಸ ನಡೆಯುತ್ತಿಲ್ಲ. ಚಿಕ್ಕಬಾಣಾವರ ಕೆರೆ ಒಳಚರಂಡಿ, ತಾಜ್ಯದಿಂದ ತುಂಬಿದೆ. ಇದರ ಪುನರುಜ್ಜೀವನ ಮಾಡುವ ನಿಟ್ಟಿಗೆ ಮುಂದಾಗಬೇಕಿದೆ. ಕೆಆರ್‍ಐಡಿಎಲ್ ಮೂಲಕ ಅಭಿವೃದ್ದಿ ಮಾಡಬೇಕಿದೆ. ಶಿವಕುಮಾರ್ ಅವರು ಉಸ್ತುವಾರಿ ಇದ್ದಾರೆ. ಇದಕ್ಕೆ ಹಣ ಕೊಡಲು ಸಾಧ್ಯವಾಗುವುದಿಲ್ಲವೇ? ಈ ಸರಕಾರ ದಿವಾಳಿ ಆಗಿದೆಯೇ ಎಂದು ಕೇಳಿದರು.

    ಸುಮ್ಮನೆ ದಿನ ದೂಡಲಾಗುತ್ತಿದೆ. ಒಂದೇ ಒಂದು ಕಡೆ ಒಂದು ಕಿ.ಮೀ ರಸ್ತೆ ಮಾಡಿಲ್ಲ. ಸರಕಾರವು ಜನವಿರೋಧಿ ಕೆಲಸ ಮಾಡುತ್ತಿದೆ. ಆರ್ಥಿಕವಾಗಿ ದಿವಾಳಿಯಾಗಿದೆ. ಜನರಿಗೆ ವಾಸ್ತವ ಪರಿಸ್ಥಿತಿ ತಿಳಿಸುವ ಕೆಲಸ ಮಾಡುತ್ತಿಲ್ಲ. ಶಿವಕುಮಾರ್ ಅವರೇ ನಿಮ್ಮ ಜೊತೆ ನಾನು ಬರ್ತೀನಿ, ನೀವು ಬನ್ನಿ, ಈ ಜನರ ಸಮಸ್ಯೆ ಆಲಿಸೋಣ ಎಂದು ಸವಾಲೆಸೆದರು.

    ನಮ್ಮ ಶಾಸಕರು ಕೂಡ ಪರಿಶೀಲನೆಗೆ ಬರುತ್ತಾರೆ. ವಿಪಕ್ಷ ಅನ್ನೋ ಕಾರಣಕ್ಕೆ ಕೊಟ್ಟಿರುವ ಅನುದಾನ ವಾಪಸ್ ಪಡೆಯಲಾಗುತ್ತಿದೆ. ಅದನ್ನು ಯಾವುದೇ ಕಾರಣಕ್ಕೂ ಸಹಿಸಲಾಗಲ್ಲ. ಹೋರಾಟ ಮಾಡುವ ಮೊದಲು ಸಮಸ್ಯೆ ಬಗೆಹರಿಸಿ ಎಂದು ಎಚ್ಚರಿಕೆ ನೀಡಿದರು.
    ನಮ್ಮ ಸರ್ಕಾರ ಇದ್ದಾಗ ಹೇಗೆ ಅಭಿವೃದ್ಧಿ ಆಗಿದೆ ಅಂತ ಇಲ್ಲಿನ ಜನ ಹೇಳುತ್ತಿದ್ದಾರೆ. ಈ ಸರ್ಕಾರ ಬಂದ ಮೇಲೆ ಏನಾಗಿದೆ ಎಂದು ಕೇಳಿದರಲ್ಲದೆ, ನಮ್ಮೆಲ್ಲಾ ಶಾಸಕರ ಜೊತೆಗೆ ಚರ್ಚೆ ಮಾಡುತ್ತೇನೆ ಎಂದು ತಿಳಿಸಿದರು.

    ಡಿಸಿಎಂ ಅವರ ಬ್ರಾಂಡ್ ಬೆಂಗಳೂರು ವಿಚಾರದ ಕುರಿತು ಕೇಳಿದಾಗ, ಸುಮ್ಮನೆ ಬೊಗಳೆ ಬಿಡೋದಲ್ಲ. ವಾಸ್ತವ ವಿಚಾರ ಮಾತಾಡಬೇಕು. ಬನ್ನಿ ಜನರ ಮಧ್ಯದಲ್ಲಿ ಕುಳಿತು ಮಾತಾಡೋಣ ಎಂದು ಆಹ್ವಾನಿಸಿದರು. ಬರ ಅಧ್ಯಯನ ವರದಿ ತಯಾರಿ ಮಾಡಿ ರಾಜ್ಯ ಸರಕಾರ ಮತ್ತು ಕೇಂದ್ರ ಸರಕಾರಕ್ಕೆ ಒಂದು ವರದಿ ಕೊಡುತ್ತೇವೆ ಎಂದು ಅವರು ತಿಳಿಸಿದರು.
    ಶಾಸಕ ಮುನಿರಾಜು, ಜಿಲ್ಲಾಧ್ಯಕ್ಷ ನಾರಾಯಣ, ಮುಖಂಡ ಮರಿಸ್ವಾಮಿ, ಜಿಲ್ಲಾ ಪದಾಧಿಕಾರಿಗಳು, ಮಂಡಲ ಪದಾಧಿಕಾರಿಗಳು ಭಾಗವಹಿಸಿದ್ದರು.

    admin
    • Website

    Related Posts

    ಸಚಿವ ಸಂಪುಟ ವಿಸ್ತರಣೆ: ಎಚ್.ಕೆ. ಪಾಟೀಲ್ ಗೆ ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ಗದಗ–ಬೆಟಗೇರಿ ನಗರಸಭೆಯ 22 ಸದಸ್ಯರ ಸಾಮೂಹಿಕ ರಾಜೀನಾಮೆ

    August 5, 2026

    ತುಮಕೂರು ಕಾಂಗ್ರೆಸ್ ನಲ್ಲಿ ಆಕ್ರೋಶ ಸ್ಫೋಟ: ವಿಪಕ್ಷ ಸಾಲಿನಲ್ಲಿ ಆಸನ ಕೋರಿದ ಟಿ.ಬಿ. ಜಯಚಂದ್ರ, ಹೆಚ್ ಡಿಕೆಯನ್ನು ಹೊಗಳಿದ ಶಾಸಕ ಶ್ರೀನಿವಾಸ್

    August 5, 2026

    ಸಚಿವ ಸ್ಥಾನ ಸಿಗಲಿಲ್ಲವೆಂದು ಪಕ್ಷದ ವಿರುದ್ಧ ಮಾತಾಡುವುದು ಸರಿಯಲ್ಲ: ಪ್ರಿಯಾಂಕ್ ಖರ್ಗೆ

    August 5, 2026

    Comments are closed.

    Our Picks

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಸಚಿವ ಸಂಪುಟ ವಿಸ್ತರಣೆ: ಎಚ್.ಕೆ. ಪಾಟೀಲ್ ಗೆ ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ಗದಗ–ಬೆಟಗೇರಿ ನಗರಸಭೆಯ 22 ಸದಸ್ಯರ ಸಾಮೂಹಿಕ ರಾಜೀನಾಮೆ

    August 5, 2026

    ಗದಗ: ಕರ್ನಾಟಕ ಸಚಿವ ಸಂಪುಟ ವಿಸ್ತರಣೆಯಲ್ಲಿ ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಗದಗ ಶಾಸಕ ಎಚ್.ಕೆ. ಪಾಟೀಲ್ (H.K. Patil)…

    ತುಮಕೂರು ಕಾಂಗ್ರೆಸ್ ನಲ್ಲಿ ಆಕ್ರೋಶ ಸ್ಫೋಟ: ವಿಪಕ್ಷ ಸಾಲಿನಲ್ಲಿ ಆಸನ ಕೋರಿದ ಟಿ.ಬಿ. ಜಯಚಂದ್ರ, ಹೆಚ್ ಡಿಕೆಯನ್ನು ಹೊಗಳಿದ ಶಾಸಕ ಶ್ರೀನಿವಾಸ್

    August 5, 2026

    ಸಚಿವ ಸ್ಥಾನ ಸಿಗಲಿಲ್ಲವೆಂದು ಪಕ್ಷದ ವಿರುದ್ಧ ಮಾತಾಡುವುದು ಸರಿಯಲ್ಲ: ಪ್ರಿಯಾಂಕ್ ಖರ್ಗೆ

    August 5, 2026

    ಕಾವೇರಿ ಅಚ್ಚುಕಟ್ಟು ಪ್ರದೇಶದಲ್ಲಿ ಮಳೆ ಚುರುಕು: 105 ಅಡಿಗೆ ತಲುಪಿದ ಕೆಆರ್ ಎಸ್ ಜಲಾಶಯದ ನೀರಿನ ಮಟ್ಟ

    August 5, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.