nammatumakuru

    Subscribe to Updates

    Get the latest creative news from FooBar about art, design and business.

    What's Hot

    ನಿಮ್ಮ ಮೊಬೈಲ್ ರೀಚಾರ್ಜ್‌ನಿಂದ ಟೆಲಿಕಾಂ ಕಂಪನಿಗಳಿಗೆ ಎಷ್ಟು ಲಾಭ?

    October 14, 2026

    ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಹಿಂದೆ ಯಾರು? ಕೆ.ಎನ್.ರಾಜಣ್ಣ ಹೇಳಿದ್ದೇನು?

    October 14, 2026

    “ದಮ್ಮು, ತಾಕತ್ತು ಇದ್ದರೆ ಹೋರಾಟಕ್ಕೆ ಬನ್ನಿ”; ನಟ ಸುದೀಪ್‌ ಗೆ ಉಗ್ರಪ್ಪ ಸವಾಲು?

    October 14, 2026
    Facebook Twitter Instagram
    ಟ್ರೆಂಡಿಂಗ್
    • ನಿಮ್ಮ ಮೊಬೈಲ್ ರೀಚಾರ್ಜ್‌ನಿಂದ ಟೆಲಿಕಾಂ ಕಂಪನಿಗಳಿಗೆ ಎಷ್ಟು ಲಾಭ?
    • ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಹಿಂದೆ ಯಾರು? ಕೆ.ಎನ್.ರಾಜಣ್ಣ ಹೇಳಿದ್ದೇನು?
    • “ದಮ್ಮು, ತಾಕತ್ತು ಇದ್ದರೆ ಹೋರಾಟಕ್ಕೆ ಬನ್ನಿ”; ನಟ ಸುದೀಪ್‌ ಗೆ ಉಗ್ರಪ್ಪ ಸವಾಲು?
    • ಸಿಹಿ ತಿನ್ನದಿದ್ದರೂ ಮಧುಮೇಹ ಬರಬಹುದು! ಈ ಲಕ್ಷಣಗಳನ್ನು ನಿರ್ಲಕ್ಷಿಸಬೇಡಿ
    • ತುಮಕೂರು ದಸರಾ ಉತ್ಸವ-2026: ಪಂಜಿನ ಕವಾಯತು ತಾಲೀಮು ವೀಕ್ಷಣೆ
    • ತುಮಕೂರು ದಸರಾ ಉತ್ಸವ–2026ರ ಅಂಗವಾಗಿ ಮಹಿಳಾ ಕೌಶಲ್ಯ ಮೇಳ ಉದ್ಘಾಟನೆ
    • ದೆಹಲಿಯ ಬೀದಿಯಲ್ಲಿ ಕಾರ್ಯಕರ್ತರೊಂದಿಗೆ ಸರಳತೆಯ ಸಹಭೋಜನ: ಜನರ ನಡುವಿನ ನಾಯಕ ಬಿ.ಕೆ. ಹರಿಪ್ರಸಾದ್
    • ಅಕ್ಟೋಬರ್ 15ರಂದು ಸಚಿವ ಈಶ್ವರ್ ಖಂಡ್ರೆ ಅವರಿಗೆ ಮಾದಿಗ ಸಮಾಜದಿಂದ ಅಭಿನಂದನಾ ಸಮಾರಂಭ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » “ದಮ್ಮು, ತಾಕತ್ತು ಇದ್ದರೆ ಹೋರಾಟಕ್ಕೆ ಬನ್ನಿ”; ನಟ ಸುದೀಪ್‌ ಗೆ ಉಗ್ರಪ್ಪ ಸವಾಲು?
    ರಾಜ್ಯ ಸುದ್ದಿ October 14, 2026

    “ದಮ್ಮು, ತಾಕತ್ತು ಇದ್ದರೆ ಹೋರಾಟಕ್ಕೆ ಬನ್ನಿ”; ನಟ ಸುದೀಪ್‌ ಗೆ ಉಗ್ರಪ್ಪ ಸವಾಲು?

    By Ganesh TumkuruOctober 14, 2026No Comments2 Mins Read
    ugrappa sudeep

    ಚಿತ್ರದುರ್ಗ: ಮದಕರಿ ನಾಯಕ ಜಯಂತೋತ್ಸವ ಕಾರ್ಯಕ್ರಮದಲ್ಲಿ ಮಾಜಿ ಸಂಸದ ಹಾಗೂ ಮಾಜಿ ಸಚಿವ ವಿ.ಎಸ್. ಉಗ್ರಪ್ಪ ಅವರು ನಟ ಕಿಚ್ಚ ಸುದೀಪ್‌ ಗೆ ಮೀಸಲಾತಿ ಹೋರಾಟಕ್ಕೆ ಕೈಜೋಡಿಸುವಂತೆ ಮನವಿ ಮಾಡಿದ್ದಾರೆ. ಅಭಿಮಾನಿಗಳಿಂದ ಕೇಕೆ, ಶಿಳ್ಳೆ ಪಡೆಯುವುದಷ್ಟೇ ಅಲ್ಲ, ನಾಯಕ ಸಮುದಾಯದ ಮೀಸಲಾತಿ ಹೋರಾಟದಲ್ಲೂ ಭಾಗವಹಿಸಬೇಕು ಎಂದು ಅವರು ಹೇಳಿರುವುದು ಗಮನ ಸೆಳೆದಿದೆ.ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಉಗ್ರಪ್ಪ, “ನಾಯಕ ಜನಾಂಗದ ಮನೆಯ ಮಗನಾಗಿದ್ದರೆ ನಮ್ಮ ಸಮುದಾಯದ ಪರ ಧ್ವನಿ ಎತ್ತಿ. ಮೀಸಲಾತಿ ಹೋರಾಟಕ್ಕೆ ಬಂದು ಬೀದಿಯಲ್ಲಿ ಹೋರಾಡಿ. ದಮ್ಮು, ತಾಕತ್ತು ಇದ್ದರೆ ನಮ್ಮ ಸಮುದಾಯದ ಮೀಸಲಾತಿಗಾಗಿ ನಡೆಯುವ ಹೋರಾಟಕ್ಕೆ ಬನ್ನಿ” ಎಂದು ಸುದೀಪ್‌ ಗೆ ಕರೆ ನೀಡಿದರು.

    ನಟ ಸುದೀಪ್ ಅವರ ಅಭಿಮಾನಿಗಳನ್ನು ಉಲ್ಲೇಖಿಸಿದ ಉಗ್ರಪ್ಪ, “ನೀವೆಲ್ಲ ಕಿಚ್ಚ, ಕಿಚ್ಚ ಎಂದು ಕೂಗುತ್ತೀರಿ. ಆದರೆ, ನಮ್ಮ ಸಮುದಾಯದ ಮೀಸಲಾತಿ ಹೆಚ್ಚಳದ ಹೋರಾಟಕ್ಕೂ ನಾಯಕತ್ವ ವಹಿಸಿ” ಎಂದು ಮನವಿ ಮಾಡಿದರು. ಅವರ ಈ ಹೇಳಿಕೆ ಕಾರ್ಯಕ್ರಮದಲ್ಲಿ ಚರ್ಚೆಗೆ ಕಾರಣವಾಗಿದೆ.

    ಮದಕರಿ ನಾಯಕರ ಜನನ ವೃತ್ತಾಂತವನ್ನು ಪ್ರಸ್ತಾಪಿಸಿದ ಉಗ್ರಪ್ಪ, ಯಾವುದೇ ಸಮಾಜದಲ್ಲಿ ಜಾಗೃತಿ, ವೈಚಾರಿಕತೆ ಮತ್ತು ಸಂಘಟನೆ ಇಲ್ಲದಿದ್ದರೆ ಆ ಸಮಾಜದ ಪ್ರಗತಿ ಕಷ್ಟ ಎಂದು ಅಭಿಪ್ರಾಯಪಟ್ಟರು.ಪರಿಶಿಷ್ಟ ಪಂಗಡದ (ಎಸ್‌ಟಿ) ಮೀಸಲಾತಿಗೆ ಸಂಬಂಧಿಸಿದ ನ್ಯಾಯಾಲಯದ ತೀರ್ಪಿನ ಹಿನ್ನೆಲೆಯಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ಹೈಕೋರ್ಟ್ ಆದೇಶದ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸುವುದು ಸೇರಿದಂತೆ ಕಾನೂನುಬದ್ಧ ಕ್ರಮಗಳ ಮೂಲಕ ಮೀಸಲಾತಿ ಪ್ರಮಾಣವನ್ನು ಶೇ.56ಕ್ಕೆ ಹೆಚ್ಚಿಸಲು ಪ್ರಯತ್ನಿಸಬೇಕು ಎಂದು ಹೇಳಿದರು.

    ಮೀಸಲಾತಿ ಹೆಚ್ಚಳಕ್ಕೆ ಸಂವಿಧಾನದ ಒಂಬತ್ತನೇ ಅನುಸೂಚಿಯಲ್ಲಿ ಸೇರಿಸುವ ವಿಚಾರವನ್ನೂ ಪ್ರಸ್ತಾಪಿಸಿದ ಅವರು, ಈ ನಿಟ್ಟಿನಲ್ಲಿ ಸರ್ಕಾರಗಳು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.ಚಿತ್ರದುರ್ಗದ ಬಸ್ ನಿಲ್ದಾಣ, ರೈಲು ನಿಲ್ದಾಣ ಹಾಗೂ ಜಿಲ್ಲಾಧಿಕಾರಿ ಕಚೇರಿಗೆ ವೀರ ಮದಕರಿ ನಾಯಕರ ಹೆಸರಿಡುವಂತೆ ಉಗ್ರಪ್ಪ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಮನವಿ ಮಾಡಿದರು. ಅಲ್ಲದೆ, ರಾಜ್ಯ ಸರ್ಕಾರವು ವೀರ ಮದಕರಿ ನಾಯಕರ ಹೆಸರಿನಲ್ಲಿ ಪ್ರಾಧಿಕಾರ ರಚಿಸಬೇಕು ಮತ್ತು ಚಿತ್ರದುರ್ಗದಲ್ಲಿ ಅವರ ಹೆಸರಿನಲ್ಲಿ ಸ್ಮಾರಕ ನಿರ್ಮಿಸಬೇಕು ಎಂದು ಒತ್ತಾಯಿಸಿದರು.
    “ನನ್ನ ಕೊನೆಯ ಉಸಿರು ಇರುವವರೆಗೂ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಹಿಂದುಳಿದ ವರ್ಗಗಳ ಸೇವೆ ಮಾಡುತ್ತೇನೆ” ಎಂದು ಉಗ್ರಪ್ಪ ಹೇಳಿದರು.ಮದಕರಿ ನಾಯಕ ಜಯಂತೋತ್ಸವದ ವೇದಿಕೆಯಲ್ಲಿ ಸುದೀಪ್‌ಗೆ ಮೀಸಲಾತಿ ಹೋರಾಟಕ್ಕೆ ಆಹ್ವಾನ ನೀಡಿರುವುದು ಕಾರ್ಯಕ್ರಮದ ಪ್ರಮುಖ ಚರ್ಚೆಯ ವಿಷಯವಾಗಿದೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI

    Ganesh Tumkuru
    • Website

    Related Posts

    ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಹಿಂದೆ ಯಾರು? ಕೆ.ಎನ್.ರಾಜಣ್ಣ ಹೇಳಿದ್ದೇನು?

    October 14, 2026

     ರಾಜ್ಯದಲ್ಲಿ ಮತ್ತೆ ಮಳೆ ಅಬ್ಬರ?  ಹವಾಮಾನ ವರದಿ ಏನು ಹೇಳುತ್ತದೆ; ನಿಮ್ಮ ಜಿಲ್ಲೆಯಲ್ಲಿ ಮಳೆಯಾಗುತ್ತಾ?

    October 13, 2026

    ಶಿವಮೊಗ್ಗದಲ್ಲಿ ಕೇಂದ್ರ ಸಚಿವ ವಿ. ಸೋಮಣ್ಣ ಕಾರಿಗೆ ಯುವ ಕಾಂಗ್ರೆಸ್ ಮುತ್ತಿಗೆ ಯತ್ನ

    October 12, 2026

    Leave A Reply Cancel Reply

    Our Picks

    ನಿಮ್ಮ ಮೊಬೈಲ್ ರೀಚಾರ್ಜ್‌ನಿಂದ ಟೆಲಿಕಾಂ ಕಂಪನಿಗಳಿಗೆ ಎಷ್ಟು ಲಾಭ?

    October 14, 2026

    ದೆಹಲಿಯ ಬೀದಿಯಲ್ಲಿ ಕಾರ್ಯಕರ್ತರೊಂದಿಗೆ ಸರಳತೆಯ ಸಹಭೋಜನ: ಜನರ ನಡುವಿನ ನಾಯಕ ಬಿ.ಕೆ. ಹರಿಪ್ರಸಾದ್

    October 13, 2026

    ‘We’re Sorry’: ಸಿಜೆಪಿ ನಾಯಕ ಅಭಿಜಿತ್ ದೀಪ್ಕೆಗೆ ಅಜ್ಜಿಯ ಸಾವಿನ ಸುದ್ದಿ ಮುಟ್ಟಿಸಿದ ಪೊಲೀಸ್; ವೈರಲ್ ವೀಡಿಯೊ

    October 12, 2026

    ನಾನಾ ಪಾಟೇಕರ್ ಸಾವಿಗೆ ನಿಜ ಕಾರಣ ಏನು? ಮರಣೋತ್ತರ ಪರೀಕ್ಷೆ ವರದಿ ಬಯಲು!

    October 11, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಷ್ಟ್ರೀಯ ಸುದ್ದಿ

    ನಿಮ್ಮ ಮೊಬೈಲ್ ರೀಚಾರ್ಜ್‌ನಿಂದ ಟೆಲಿಕಾಂ ಕಂಪನಿಗಳಿಗೆ ಎಷ್ಟು ಲಾಭ?

    October 14, 2026

    ನವದೆಹಲಿ: ಭಾರತದಲ್ಲಿ ಇಂಟರ್ನೆಟ್ ಬಳಕೆದಾರರ ಸಂಖ್ಯೆ ಗಣನೀಯವಾಗಿ ಏರಿಕೆಯಾಗಿದ್ದು, 2026ರ ಜೂನ್ ಅಂತ್ಯದ ವೇಳೆಗೆ ಒಟ್ಟು ಇಂಟರ್ನೆಟ್ ಚಂದಾದಾರರ ಸಂಖ್ಯೆ…

    ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಹಿಂದೆ ಯಾರು? ಕೆ.ಎನ್.ರಾಜಣ್ಣ ಹೇಳಿದ್ದೇನು?

    October 14, 2026

    “ದಮ್ಮು, ತಾಕತ್ತು ಇದ್ದರೆ ಹೋರಾಟಕ್ಕೆ ಬನ್ನಿ”; ನಟ ಸುದೀಪ್‌ ಗೆ ಉಗ್ರಪ್ಪ ಸವಾಲು?

    October 14, 2026

    ಸಿಹಿ ತಿನ್ನದಿದ್ದರೂ ಮಧುಮೇಹ ಬರಬಹುದು! ಈ ಲಕ್ಷಣಗಳನ್ನು ನಿರ್ಲಕ್ಷಿಸಬೇಡಿ

    October 13, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.