ಬೆಂಗಳೂರು: 500ಕ್ಕೂ ಹೆಚ್ಚು ಕನ್ನಡ ಸಿನಿಮಾಗಳಲ್ಲಿ ನಟಿಸಿದ್ದ ಹಾಸ್ಯ ನಟ ಬ್ಯಾಂಕ್ ಜನಾರ್ಧನ್ (76) ನಿಧನರಾಗಿದ್ದಾರೆ.ಮಧ್ಯರಾತ್ರಿ 2.30ರ ಸುಮಾರಿಗೆ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ನಟ ಬ್ಯಾಂಕ್ ಜನಾರ್ಧನ್ ಕೊನೆಯುಸಿರೆಳೆದಿದ್ದಾರೆ. ಸುಲ್ತಾನ್ ಪಾಳ್ಯದ ನಿವಾಸದಲ್ಲಿರುವ ಅವರ ನಿವಾಸದಲ್ಲಿ ಪಾರ್ಥೀವ ಶರೀರ ಇಡಲಾಗಿದ್ದು, ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಮಧ್ಯಾಹ್ನ 3:4 ಗಂಟೆ ವೇಳೆಗೆ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಕೆಲ ತಿಂಗಳ ಹಿಂದಷ್ಟೇ ಬ್ಯಾಂಕ್ ಜನಾರ್ಧನ ಅವರಿಗೆ ಹೃದಯಾಘಾತವಾಗಿತ್ತು. ಕಳೆದ 40 ವರ್ಷಗಳಿಂದ ಚಿತ್ರರಂಗದಲ್ಲಿ ಸಕ್ರಿಯವಾಗಿದ್ದರು. ಕನ್ನಡ ಸಿನಿಮಾ, ಕಿರುತೆರೆ ಮತ್ತು ರಂಗಭೂಮಿಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದರು ಜನಾರ್ದನ್. ಹಾಸ್ಯ ನಟರಾಗಿ ಸಾಕಷ್ಟು ಪಾತ್ರಗಳನ್ನು ಅವರು ನಿರ್ವಹಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4